Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 14

ಅ. ಕೃ. 14:9-23

Help us?
Click on verse(s) to share them!
9ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು. ಪೌಲನು ಅವನನ್ನು ದಿಟ್ಟಿಸಿ ನೋಡಿ ವಾಸಿಯಾಗುವುದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು;
10“ನಿನ್ನ ಕಾಲೂರಿ ನೆಟ್ಟಗೆ ನಿಂತುಕೋ” ಎಂದು ಮಹಾಧ್ವನಿಯಿಂದ ಹೇಳಿದನು. ಕೂಡಲೆ ಆ ಮನುಷ್ಯನು ಹಾರಿ ನಡೆದಾಡಿದನು.
11ಪೌಲನು ಮಾಡಿದ್ದನ್ನು ಗುಂಪು ಕೂಡಿದ್ದ ಜನರು ನೋಡಿ; “ದೇವರುಗಳು ಮನುಷ್ಯರ ರೂಪದಿಂದ ನಮ್ಮ ಬಳಿಗೆ ಇಳಿದುಬಂದರು” ಎಂದು ಲುಕವೋನ್ಯ ಭಾಷೆಯಲ್ಲಿ ಕೂಗಾಡಿದರು.
12ಬಾರ್ನಬನನ್ನು ‘ದ್ಯೌಸ್’ ದೇವರೆಂತಲೂ ಪೌಲನು ಪ್ರಮುಖ ಭಾಷಣಕಾರನಾದ್ದರಿಂದ ಅವನನ್ನು ‘ಹೆರ್ಮೆ’ ದೇವರೆಂತಲೂ ಅಂದುಕೊಂಡರು.
13ಊರ ಮುಂದಿದ್ದ ದ್ಯೌಸ್ ದೇವರ ಗುಡಿಯ ಪೂಜಾರಿಯು ಎತ್ತುಗಳನ್ನೂ, ಹೂವಿನ ಹಾರಗಳನ್ನೂ ಊರಬಾಗಿಲಿನ ಹತ್ತಿರಕ್ಕೆ ತಂದು ಜನರೊಂದಿಗೆ ಅವರಿಗೆ ಬಲಿಕೊಡಬೇಕೆಂದಿದ್ದನು.
14ಇದನ್ನು ಕೇಳಿ ಅಪೊಸ್ತಲರಾದ ಬಾರ್ನಬ ಮತ್ತು ಪೌಲರು ತಮ್ಮ ವಸ್ತ್ರಗಳನ್ನು ಹರಿದುಕೊಂಡು ಜನರ ಗುಂಪಿನೊಳಗೆ ನುಗ್ಗಿ ಹೀಗೆಂದು ಕೂಗಿ ಹೇಳಿದರು;
15“ಜನರೇ, ನೀವು ಹೀಗೇಕೆ ಮಾಡುತ್ತೀರೀ? ನಾವೂ ಮನುಷ್ಯರೇ, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.
16ಗತಿಸಿಹೋದ ಕಾಲದಲ್ಲಿ ಆತನು ಎಲ್ಲಾ ಜನಾಂಗಗಳನ್ನು ತಮ್ಮ ತಮ್ಮ ಮನಸ್ಸಿಗೆ ತೋಚಿದ ಮಾರ್ಗಗಳಲ್ಲಿ ನಡೆಯುವುದಕ್ಕೆ ಬಿಟ್ಟು ಬಿಟ್ಟನು.
17ಆದರೆ ದೇವರು ತನ್ನ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಮೂಲಕ ಸಾಕ್ಷಿ ನೀಡುತ್ತಲೇ ಬಂದಿದ್ದಾನೆ; ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ, ಸುಗ್ಗಿಕಾಲಗಳನ್ನೂ ದಯಪಾಲಿಸಿ, ಆಹಾರ ಕೊಟ್ಟು ನಿಮ್ಮ ಮನಸ್ಸುಗಳನ್ನು ಆನಂದದಿಂದ ತುಂಬಿಸಿ, ಉಪಕಾರಮಾಡುತ್ತಾ ಬಂದವನು ಆತನೇ” ಎಂದು ಹೇಳಿದರು.
18ಬಾರ್ನಬ ಮತ್ತು ಪೌಲರು ಈ ಮಾತುಗಳನ್ನು ಹೇಳಿದರೂ ಜನರು ತಮಗೆ ಬಲಿಯರ್ಪಿಸುವುದನ್ನು ತಡೆಯಲು ಆಸಾಧ್ಯವಾಯಿತು.
19ತರುವಾಯ ಅಂತಿಯೋಕ್ಯದಿಂದಲೂ, ಇಕೋನ್ಯದಿಂದಲೂ ಯೆಹೂದ್ಯರು ಬಂದು, ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು, ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಅವನನ್ನು ಎಳೆದುಹಾಕಿದರು.
20ಆದರೆ ಶಿಷ್ಯರು ಅವನ ಸುತ್ತಲು ನಿಂತುಕೊಂಡಿರುವಾಗ ಅವನು ಎದ್ದು ಊರೊಳಕ್ಕೆ ಹೋದನು.
21ಮರುದಿನ ಪೌಲನು, ಬಾರ್ನಬನ ಜೊತೆಯಲ್ಲಿ ದೆರ್ಬೆಗೆ ಹೊರಟನು. ಆ ಊರಿನಲ್ಲಿ ಅವರು ಸುವಾರ್ತೆಯನ್ನು ಸಾರಿ ಅನೇಕರನ್ನು ಶಿಷ್ಯರನ್ನಾಗಿ ಮಾಡಿದ ಮೇಲೆ ಹಿಂತಿರುಗಿ ಲುಸ್ತ್ರಕ್ಕೂ, ಇಕೋನ್ಯಕ್ಕೂ, ಅಂತಿಯೋಕ್ಯಕ್ಕೂ ಬಂದರು.
22ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.
23ಇದಲ್ಲದೆ ಪ್ರತಿ ಕ್ರೈಸ್ತ ಸಭೆಗೂ ಹಿರಿಯರನ್ನು ನೇಮಿಸಿದರು. ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರು ನಂಬಿದ್ದ ಕರ್ತನಿಗೆ ಅವರನ್ನು ಒಪ್ಪಿಸಿದರು.

Read ಅ. ಕೃ. 14ಅ. ಕೃ. 14
Compare ಅ. ಕೃ. 14:9-23ಅ. ಕೃ. 14:9-23