Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 15

ಅ. ಕೃ. 15:11-21

Help us?
Click on verse(s) to share them!
11ಕರ್ತನಾದ ಯೇಸುವಿನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬುದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು” ಎಂದು ಹೇಳಿದನು.
12ಗುಂಪುಸೇರಿದ್ದವರೆಲ್ಲರೂ ಈ ಮಾತುಗಳನ್ನು ಕೇಳಿ ಮೌನವಾಗಿದ್ದು ಬಾರ್ನಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕ ಕಾರ್ಯಗಳನ್ನೂ, ಅದ್ಭುತಕಾರ್ಯಗಳನ್ನೂ ವಿವರಿಸಿದ್ದನ್ನು ಕಿವಿಗೊಟ್ಟು ಕೇಳಿದರು.
13ಅವರು ಮಾತನಾಡುವುದನ್ನು ಮುಗಿಸಿದ ಮೇಲೆ ಯಾಕೋಬನು ಆ ಸಂಗತಿಯನ್ನು ಕುರಿತು ಹೇಳಿದ್ದೇನಂದರೆ;
14“ಸಹೋದರರೇ, ನಾನು ಹೇಳುವುದನ್ನು ಕೇಳಿರಿ. ದೇವರು ಮೊದಲು ಅನ್ಯಜನರನ್ನು ಕೃಪಾಕಟಾಕ್ಷದಿಂದ ನೋಡಿ ತನ್ನ ಹೆಸರಿಗಾಗಿ ಅವರೊಳಗಿನಿಂದ ಒಬ್ಬ ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.
15ಇದಕ್ಕೆ ಪ್ರವಾದಿಗಳ ಮಾತುಗಳೂ ಒಪ್ಪುತ್ತವೆ. ಹೇಗೆಂದರೆ;
16“‘ಇದಾದ ಮೇಲೆ ನಾನು ಹಿಂತಿರುಗಿ ಬಂದು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಪುನಃ ಕಟ್ಟುವೆನು. ಪಾಳು ಬಿದ್ದದ್ದನ್ನು ಜೀರ್ಣೋದ್ಧಾರಮಾಡಿ ಸುಭದ್ರವಾಗಿ ನಿಲ್ಲಿಸುವೆನು.
17ಮನುಷ್ಯರಲ್ಲಿ ಉಳಿದ ಜನರು ಅಂದರೆ ದೇವಜನರೆನಿಸಿಕೊಳ್ಳುವ ಸಕಲ ಜನಾಂಗಗಳೂ ಕರ್ತನನ್ನು ಹುಡುಕುವರು ಎಂದು
18ಅನಾದಿಕಾಲದಿಂದ ಈ ಕಾರ್ಯಗಳನ್ನು ತಿಳಿಯಪಡಿಸುವ ಕರ್ತನು ನುಡಿಯುತ್ತಾನೆ’ ಎಂದು ಬರೆದದೆ.
19“ಹೀಗಿರಲಾಗಿ ನನ್ನ ಅಭಿಪ್ರಾಯ ಏನೆಂದರೆ; ಅನ್ಯಜನರಲ್ಲಿ ದೇವರ ಕಡೆಗೆ ತಿರುಗಿಕೊಳ್ಳುವವರನ್ನು ತೊಂದರೆಪಡಿಸಬಾರದು.
20ಆದರೆ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ಹಾದರವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ರಕ್ತವನ್ನೂ ವಿರ್ಜಿಸಬೇಕೆಂದು ನಾವು ಅವರಿಗೆ ಪತ್ರವನ್ನು ಬರೆಯೋಣ ಎಂದು ತೀರ್ಮಾನಿಸಿದರು.
21ಏಕೆಂದರೆ ಪುರಾತನಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಧರ್ಮಶಾಸ್ತ್ರವನ್ನು ಬೋಧಿಸುವವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ” ಎಂದು ಹೇಳಿದನು.

Read ಅ. ಕೃ. 15ಅ. ಕೃ. 15
Compare ಅ. ಕೃ. 15:11-21ಅ. ಕೃ. 15:11-21