Text copied!
Bibles in Kannada

ಅ. ಕೃ. 15:26-35 in Kannada

Help us?

ಅ. ಕೃ. 15:26-35 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನಮ್ಮ ಪ್ರಿಯ ಬಾರ್ನಬ ಪೌಲರ ಜೊತೆಯಲ್ಲಿ ನಿಮ್ಮ ಬಳಿಗೆ ಕಳುಹಿಸಿ ಕೊಡುವುದು ಯುಕ್ತವೆಂದು ನಾವೆಲ್ಲರೂ ಒಮ್ಮನಸ್ಸಿನಿಂದ ತೀರ್ಮಾನಿಸಿದೆವು.
27 ಆದುದರಿಂದ ಯೂದನನ್ನೂ, ಸೀಲನನ್ನೂ ಕಳುಹಿಸಿಕೊಡುತ್ತಿದ್ದೇವೆ. ಅವರು ನಾವು ಬರೆದಿರುವ ಈ ಸಂಗತಿಗಳನ್ನು ಬಾಯಿಮಾತಿನಿಂದಲೂ ನಿಮಗೆ ತಿಳಿಸುವರು.
28 ಅವು ಯಾವುವೆಂದರೆ, ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ರಕ್ತವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ಅನೈತಿಕತೆಯನ್ನೂ ವಿಸರ್ಜಿಸುವುದು ಅಗತ್ಯವಾಗಿದೆ.
29 ಇದಕ್ಕಿಂತ ಹೆಚ್ಚಿನ ಹೊರೆಯನ್ನು ನಿಮ್ಮ ಮೇಲೆ ಹೊರಿಸಬಾರದೆಂದು ಪವಿತ್ರಾತ್ಮನಿಗೂ ನಮಗೂ ಹಿತವಾಗಿ ತೋರಿತು; ನೀವು ಎಚ್ಚರವಾಗಿದ್ದು ಇವುಗಳ ಗೊಡವೆಗೆ ಹೋಗದಿದ್ದರೆ ನಿಮಗೆ ಒಳ್ಳೆಯದಾಗುವುದು. ಶುಭವಾಗಲಿ.”
30 ಹೀಗೆ ಅವರು ಅಪ್ಪಣೆ ತೆಗೆದುಕೊಂಡು ಅಂತಿಯೋಕ್ಯಕ್ಕೆ ಬಂದು ಸಭೆಯನ್ನು ಸೇರಿಸಿ ಆ ಪತ್ರವನ್ನು ಅವರಿಗೆ ಒಪ್ಪಿಸಿದರು.
31 ಅವರು ಓದಿ ಅದರಿಂದ ಧೈರ್ಯ ತಂದುಕೊಂಡು ಸಂತೋಷಪಟ್ಟರು.
32 ಯೂದನೂ, ಸೀಲನೂ ತಾವೇ ಪ್ರವಾದಿಗಳಾಗಿದ್ದುದರಿಂದ ಸಹೋದರರನ್ನು ಅನೇಕ ಮಾತುಗಳಿಂದ ಉತ್ತೇಜಿಸಿ ದೃಢಪಡಿಸಿದರು.
33 ಅಲ್ಲಿ ಕೆಲವು ಕಾಲ ಕಳೆದ ನಂತರ ತಮ್ಮನ್ನು ಕಳುಹಿಸಿದವರ ಬಳಿಗೆ ಪುನಃ ಹೋಗುವುದಕ್ಕೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡರು.
34 ಆದರೆ ಸೀಲನಿಗೆ ಅಲ್ಲೇ ಇರುವುದು ಒಳ್ಳೆಯದೆಂದು ತೋಚಿತು.
35 ಆದರೆ ಪೌಲನೂ ಮತ್ತು ಬಾರ್ನಬನೂ ಅಂತಿಯೋಕ್ಯದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಉಪದೇಶಮಾಡುತ್ತಾ ಕರ್ತನ ವಾಕ್ಯವೆಂಬ ಸುವಾರ್ತೆಯನ್ನು ಸಾರುತ್ತಾ ಇದ್ದರು.
ಅ. ಕೃ. 15 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019