Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 15

ಅ. ಕೃ. 15:29-40

Help us?
Click on verse(s) to share them!
29ಇದಕ್ಕಿಂತ ಹೆಚ್ಚಿನ ಹೊರೆಯನ್ನು ನಿಮ್ಮ ಮೇಲೆ ಹೊರಿಸಬಾರದೆಂದು ಪವಿತ್ರಾತ್ಮನಿಗೂ ನಮಗೂ ಹಿತವಾಗಿ ತೋರಿತು; ನೀವು ಎಚ್ಚರವಾಗಿದ್ದು ಇವುಗಳ ಗೊಡವೆಗೆ ಹೋಗದಿದ್ದರೆ ನಿಮಗೆ ಒಳ್ಳೆಯದಾಗುವುದು. ಶುಭವಾಗಲಿ.”
30ಹೀಗೆ ಅವರು ಅಪ್ಪಣೆ ತೆಗೆದುಕೊಂಡು ಅಂತಿಯೋಕ್ಯಕ್ಕೆ ಬಂದು ಸಭೆಯನ್ನು ಸೇರಿಸಿ ಆ ಪತ್ರವನ್ನು ಅವರಿಗೆ ಒಪ್ಪಿಸಿದರು.
31ಅವರು ಓದಿ ಅದರಿಂದ ಧೈರ್ಯ ತಂದುಕೊಂಡು ಸಂತೋಷಪಟ್ಟರು.
32ಯೂದನೂ, ಸೀಲನೂ ತಾವೇ ಪ್ರವಾದಿಗಳಾಗಿದ್ದುದರಿಂದ ಸಹೋದರರನ್ನು ಅನೇಕ ಮಾತುಗಳಿಂದ ಉತ್ತೇಜಿಸಿ ದೃಢಪಡಿಸಿದರು.
33ಅಲ್ಲಿ ಕೆಲವು ಕಾಲ ಕಳೆದ ನಂತರ ತಮ್ಮನ್ನು ಕಳುಹಿಸಿದವರ ಬಳಿಗೆ ಪುನಃ ಹೋಗುವುದಕ್ಕೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡರು.
34ಆದರೆ ಸೀಲನಿಗೆ ಅಲ್ಲೇ ಇರುವುದು ಒಳ್ಳೆಯದೆಂದು ತೋಚಿತು.
35ಆದರೆ ಪೌಲನೂ ಮತ್ತು ಬಾರ್ನಬನೂ ಅಂತಿಯೋಕ್ಯದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಉಪದೇಶಮಾಡುತ್ತಾ ಕರ್ತನ ವಾಕ್ಯವೆಂಬ ಸುವಾರ್ತೆಯನ್ನು ಸಾರುತ್ತಾ ಇದ್ದರು.
36ಕೆಲವು ದಿನಗಳಾದ ಮೇಲೆ ಪೌಲನು ಬಾರ್ನಬನಿಗೆ; “ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಊರುಗಳಿಗೆ ಪುನಃ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ” ಎಂದು ಹೇಳಿದನು.
37ಅದಕ್ಕೆ ಬಾರ್ನಬನು ಮಾರ್ಕನೆನಿಸಿಕೊಳ್ಳುವ ಯೋಹಾನನನ್ನು
38ತಮ್ಮ ಸಂಗಡ ಕರೆದುಕೊಂಡುಹೋಗಬೇಕೆಂದಿದ್ದಾಗ ಪೌಲನು; ನಮ್ಮೊಂದಿಗೆ ಸೇವೆಗೆ ಬಾರದೆ ಪಂಫುಲ್ಯದಲ್ಲಿ ನಮ್ಮನ್ನು ಬಿಟ್ಟುಬಿಟ್ಟವನನ್ನು ಕರೆದುಕೊಂಡು ಹೋಗುವುದು ಸರಿಯಲ್ಲವೆಂದು ನೆನಸಿದನು.
39ಈ ವಿಷಯದಲ್ಲಿ ತೀವ್ರವಾದ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿದರು. ಬಾರ್ನಬನು ಮಾರ್ಕನನ್ನು ಕರೆದುಕೊಂಡು ಸಮುದ್ರ ಮಾರ್ಗವಾಗಿ ಕುಪ್ರದ್ವೀಪಕ್ಕೆ ಹೋದನು.
40ಪೌಲನು ಸೀಲನನ್ನು ಆರಿಸಿಕೊಂಡು ಸಹೋದರರಿಂದ ಕರ್ತನ ಕೃಪಾಶ್ರಯಕ್ಕೆ ಒಪ್ಪಿಸಲ್ಪಟ್ಟವನಾಗಿ ಅಲ್ಲಿಂದ

Read ಅ. ಕೃ. 15ಅ. ಕೃ. 15
Compare ಅ. ಕೃ. 15:29-40ಅ. ಕೃ. 15:29-40