Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 15

ಅ. ಕೃ. 15:3-16

Help us?
Click on verse(s) to share them!
3ಆದುದರಿಂದ ಸಭೆಯವರು ಅವರನ್ನು ಸಾಗ ಕಳುಹಿಸಲು, ಅವರು ಫೊಯಿನಿಕೆ ಮತ್ತು ಸಮಾರ್ಯ ಸೀಮೆಗಳನ್ನು ಹಾದು ಹೋಗುತ್ತಿರುವಾಗ ಅನ್ಯಜನರು ಕರ್ತನ ಕಡೆಗೆ ತಿರುಗಿಕೊಂಡ ಸಂಗತಿಯನ್ನು ಅಲ್ಲಿದ್ದ ಸಹೋದರರಿಗೆ ವಿವರವಾಗಿ ಹೇಳಿ ಅವರೆಲ್ಲರನ್ನು ಬಹಳವಾಗಿ ಸಂತೋಷಪಡಿಸಿದರು.
4ಅವರು ಯೆರೂಸಲೇಮಿಗೆ ಬಂದ ಮೇಲೆ ಸಭೆಯವರೂ ಅಪೊಸ್ತಲರೂ ಸಭೆಯ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು.
5ಆದರೆ ಫರಿಸಾಯ ಮತದವರಲ್ಲಿ ಯೇಸುವನ್ನು ನಂಬಿದ್ದ ಕೆಲವರು ಎದ್ದು; “ದೇವರ ಕಡೆಗೆ ತಿರುಗಿಕೊಂಡಿರುವ ಅನ್ಯಜನರಿಗೆ ಸುನ್ನತಿಮಾಡಿಸಬೇಕು, ಮತ್ತು ಮೋಶೆಯ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುವುದಕ್ಕೆ ಅವರಿಗೆ ಅಪ್ಪಣೆಕೊಡಬೇಕು” ಎಂದು ಹೇಳಿದರು.
6ಅಪೊಸ್ತಲರೂ ಸಭೆಯ ಹಿರಿಯರೂ ಈ ವಿಷಯವನ್ನು ಕುರಿತು ಆಲೋಚಿಸುವುದಕ್ಕೆ ಸೇರಿ ಬಂದಾಗ, ಅವರಲ್ಲಿ ಬಹು ವಿವಾದವು ನಡೆದ ಮೇಲೆ ಪೇತ್ರನು ಎದ್ದು ಅವರಿಗೆ;
7“ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬಬೇಕೆಂದು ದೇವರು ಬಹಳ ದಿನಗಳ ಹಿಂದೆ ನಿಮ್ಮೊಳಗಿಂದ ನನ್ನನ್ನು ಆರಿಸಿಕೊಂಡದ್ದು ನಿಮಗೇ ತಿಳಿದಿದೆ.
8ಮತ್ತು ಹೃದಯವನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮವರವನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಸಾಕ್ಷಿಕೊಟ್ಟನು.
9ಇದಲ್ಲದೆ ಆತನು ನಮಗೂ, ಅವರಿಗೂ ಏನೂ ಭೇದಮಾಡದೆ ಅವರ ಹೃದಯಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.
10ಹೀಗಿರುವುದರಿಂದ ನಮ್ಮ ಪೂರ್ವಿಕರಾಗಲಿ, ನಾವಾಗಲಿ ಹೊರಲಾಗದ ನೋಗವನ್ನು ನೀವು ಶಿಷ್ಯರ ಹೆಗಲಿನ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವುದು ಏಕೆ?
11ಕರ್ತನಾದ ಯೇಸುವಿನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬುದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು” ಎಂದು ಹೇಳಿದನು.
12ಗುಂಪುಸೇರಿದ್ದವರೆಲ್ಲರೂ ಈ ಮಾತುಗಳನ್ನು ಕೇಳಿ ಮೌನವಾಗಿದ್ದು ಬಾರ್ನಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕ ಕಾರ್ಯಗಳನ್ನೂ, ಅದ್ಭುತಕಾರ್ಯಗಳನ್ನೂ ವಿವರಿಸಿದ್ದನ್ನು ಕಿವಿಗೊಟ್ಟು ಕೇಳಿದರು.
13ಅವರು ಮಾತನಾಡುವುದನ್ನು ಮುಗಿಸಿದ ಮೇಲೆ ಯಾಕೋಬನು ಆ ಸಂಗತಿಯನ್ನು ಕುರಿತು ಹೇಳಿದ್ದೇನಂದರೆ;
14“ಸಹೋದರರೇ, ನಾನು ಹೇಳುವುದನ್ನು ಕೇಳಿರಿ. ದೇವರು ಮೊದಲು ಅನ್ಯಜನರನ್ನು ಕೃಪಾಕಟಾಕ್ಷದಿಂದ ನೋಡಿ ತನ್ನ ಹೆಸರಿಗಾಗಿ ಅವರೊಳಗಿನಿಂದ ಒಬ್ಬ ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.
15ಇದಕ್ಕೆ ಪ್ರವಾದಿಗಳ ಮಾತುಗಳೂ ಒಪ್ಪುತ್ತವೆ. ಹೇಗೆಂದರೆ;
16“‘ಇದಾದ ಮೇಲೆ ನಾನು ಹಿಂತಿರುಗಿ ಬಂದು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಪುನಃ ಕಟ್ಟುವೆನು. ಪಾಳು ಬಿದ್ದದ್ದನ್ನು ಜೀರ್ಣೋದ್ಧಾರಮಾಡಿ ಸುಭದ್ರವಾಗಿ ನಿಲ್ಲಿಸುವೆನು.

Read ಅ. ಕೃ. 15ಅ. ಕೃ. 15
Compare ಅ. ಕೃ. 15:3-16ಅ. ಕೃ. 15:3-16