Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 15

ಅ. ಕೃ. 15:8-25

Help us?
Click on verse(s) to share them!
8ಮತ್ತು ಹೃದಯವನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮವರವನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಸಾಕ್ಷಿಕೊಟ್ಟನು.
9ಇದಲ್ಲದೆ ಆತನು ನಮಗೂ, ಅವರಿಗೂ ಏನೂ ಭೇದಮಾಡದೆ ಅವರ ಹೃದಯಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.
10ಹೀಗಿರುವುದರಿಂದ ನಮ್ಮ ಪೂರ್ವಿಕರಾಗಲಿ, ನಾವಾಗಲಿ ಹೊರಲಾಗದ ನೋಗವನ್ನು ನೀವು ಶಿಷ್ಯರ ಹೆಗಲಿನ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವುದು ಏಕೆ?
11ಕರ್ತನಾದ ಯೇಸುವಿನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬುದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು” ಎಂದು ಹೇಳಿದನು.
12ಗುಂಪುಸೇರಿದ್ದವರೆಲ್ಲರೂ ಈ ಮಾತುಗಳನ್ನು ಕೇಳಿ ಮೌನವಾಗಿದ್ದು ಬಾರ್ನಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕ ಕಾರ್ಯಗಳನ್ನೂ, ಅದ್ಭುತಕಾರ್ಯಗಳನ್ನೂ ವಿವರಿಸಿದ್ದನ್ನು ಕಿವಿಗೊಟ್ಟು ಕೇಳಿದರು.
13ಅವರು ಮಾತನಾಡುವುದನ್ನು ಮುಗಿಸಿದ ಮೇಲೆ ಯಾಕೋಬನು ಆ ಸಂಗತಿಯನ್ನು ಕುರಿತು ಹೇಳಿದ್ದೇನಂದರೆ;
14“ಸಹೋದರರೇ, ನಾನು ಹೇಳುವುದನ್ನು ಕೇಳಿರಿ. ದೇವರು ಮೊದಲು ಅನ್ಯಜನರನ್ನು ಕೃಪಾಕಟಾಕ್ಷದಿಂದ ನೋಡಿ ತನ್ನ ಹೆಸರಿಗಾಗಿ ಅವರೊಳಗಿನಿಂದ ಒಬ್ಬ ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.
15ಇದಕ್ಕೆ ಪ್ರವಾದಿಗಳ ಮಾತುಗಳೂ ಒಪ್ಪುತ್ತವೆ. ಹೇಗೆಂದರೆ;
16“‘ಇದಾದ ಮೇಲೆ ನಾನು ಹಿಂತಿರುಗಿ ಬಂದು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಪುನಃ ಕಟ್ಟುವೆನು. ಪಾಳು ಬಿದ್ದದ್ದನ್ನು ಜೀರ್ಣೋದ್ಧಾರಮಾಡಿ ಸುಭದ್ರವಾಗಿ ನಿಲ್ಲಿಸುವೆನು.
17ಮನುಷ್ಯರಲ್ಲಿ ಉಳಿದ ಜನರು ಅಂದರೆ ದೇವಜನರೆನಿಸಿಕೊಳ್ಳುವ ಸಕಲ ಜನಾಂಗಗಳೂ ಕರ್ತನನ್ನು ಹುಡುಕುವರು ಎಂದು
18ಅನಾದಿಕಾಲದಿಂದ ಈ ಕಾರ್ಯಗಳನ್ನು ತಿಳಿಯಪಡಿಸುವ ಕರ್ತನು ನುಡಿಯುತ್ತಾನೆ’ ಎಂದು ಬರೆದದೆ.
19“ಹೀಗಿರಲಾಗಿ ನನ್ನ ಅಭಿಪ್ರಾಯ ಏನೆಂದರೆ; ಅನ್ಯಜನರಲ್ಲಿ ದೇವರ ಕಡೆಗೆ ತಿರುಗಿಕೊಳ್ಳುವವರನ್ನು ತೊಂದರೆಪಡಿಸಬಾರದು.
20ಆದರೆ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ಹಾದರವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ರಕ್ತವನ್ನೂ ವಿರ್ಜಿಸಬೇಕೆಂದು ನಾವು ಅವರಿಗೆ ಪತ್ರವನ್ನು ಬರೆಯೋಣ ಎಂದು ತೀರ್ಮಾನಿಸಿದರು.
21ಏಕೆಂದರೆ ಪುರಾತನಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಧರ್ಮಶಾಸ್ತ್ರವನ್ನು ಬೋಧಿಸುವವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ” ಎಂದು ಹೇಳಿದನು.
22ಆಗ ಅಪೊಸ್ತಲರೂ, ಸಭೆಯ ಹಿರಿಯರೂ ಸರ್ವಸಭೆಯ ಅನುಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಮತ್ತು ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವುದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ, ಸೀಲನನ್ನೂ ಆರಿಸಿಕೊಂಡು,
23ಅವರ ಕೈಯಲ್ಲಿ ಬರೆದುಕೊಟ್ಟದ್ದೇನಂದರೆ; “ಸಹೋದರರೂ, ಅಪೊಸ್ತಲರೂ ಮತ್ತು ಹಿರಿಯರೂ, ಅಂತಿಯೋಕ್ಯ, ಸಿರಿಯ, ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೂ ಮಾಡುವ ವಂದನೆ;
24“ನಮ್ಮೊಳಗಿಂದ ಹೊರಟು ಕೆಲವರು ನಮ್ಮಿಂದ ಯಾವ ಅಪ್ಪಣೆಯನ್ನು ಹೊಂದದೆ ತಮ್ಮ ಮಾತುಗಳಿಂದ ನಿಮ್ಮಲ್ಲಿ ಅಸಮಾಧಾನವನ್ನು ಹುಟ್ಟಿಸಿ ನಿಮ್ಮ ಮನಸ್ಸುಗಳನ್ನು ಕಳವಳಗೊಳಿಸಿದ್ದಾರೆಂಬುದನ್ನು ಕೇಳಿದ್ದರಿಂದ,
25ನಾವು ಕೆಲವರನ್ನು ಆರಿಸಿಕೊಂಡು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತ ಜೀವದ ಹಂಗನ್ನು ತೊರೆದವರಾದ,

Read ಅ. ಕೃ. 15ಅ. ಕೃ. 15
Compare ಅ. ಕೃ. 15:8-25ಅ. ಕೃ. 15:8-25