Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 16

ಅ. ಕೃ. 16:10-14

Help us?
Click on verse(s) to share them!
10ಅವನಿಗೆ ಆ ದರ್ಶನವಾದ ಮೇಲೆ, ಆ ಸೀಮೆಯವರಿಗೆ ಸುವಾರ್ತೆಯನ್ನು ಸಾರುವುದಕ್ಕೆ ದೇವರು ನಮ್ಮನ್ನು ಕರೆದಿದ್ದಾನೆಂದು ನಾವು ನಿಶ್ಚಯಿಸಿಕೊಂಡು, ಕೂಡಲೆ ಮಕೆದೋನ್ಯಕ್ಕೆ ಹೊರಟುಹೋಗುವ ಪ್ರಯತ್ನಮಾಡಿದೆವು.
11ನಾವು ತ್ರೋವದಿಂದ ಸಮುದ್ರ ಪ್ರಯಾಣಮಾಡಿ ನೆಟ್ಟಗೆ ಸಮೊಥ್ರಾಕೆಗೆ ಬಂದು ಮರುದಿನ ನೆಯಾಪೊಲಿಗೆ ಸೇರಿ ಅಲ್ಲಿಂದ ಫಿಲಿಪ್ಪಿಯನ್ನು ತಲುಪಿದೆವು.
12ಫಿಲಿಪ್ಪಿ ಎಂಬುದು ಮಕೆದೋನ್ಯದಲ್ಲಿ ಪ್ರಧಾನ ಪಟ್ಟಣ, ಇದು ರೋಮಾಪುರದವರ ಒಂದು ಪ್ರವಾಸ ಸ್ಥಾನವೂ ಆಗಿದೆ. ಈ ಪಟ್ಟಣದಲ್ಲಿ ನಾವು ಕೆಲವು ದಿನಗಳ ಕಾಲ ಇದ್ದೆವು.
13ನದೀತೀರದಲ್ಲಿ ದೇವರ ಪ್ರಾರ್ಥನೆ ನಡೆಯುವ ಸ್ಥಳ ಇರುವುದೆಂದು ತಿಳಿದು ಸಬ್ಬತ್ ದಿನದಲ್ಲಿ ಊರ ಬಾಗಿಲಿನ ಹೊರಗೆ ಹೋಗಿ ಅಲ್ಲಿ ಕೂಡಿಬಂದಿದ್ದ ಸ್ತ್ರೀಯರ ಸಂಗಡ ಕುಳಿತುಕೊಂಡು ಮಾತನಾಡಿದೆವು.
14ನಮ್ಮ ಮಾತುಗಳನ್ನು ಕೇಳಿದವರಲ್ಲಿ ಲುದ್ಯಳೆಂಬ ಒಬ್ಬ ಸ್ತ್ರೀಯು ಇದ್ದಳು. ಆಕೆ ಧೂಮ್ರ (ನೇರಳೆ) ಬಣ್ಣದ ವಸ್ತ್ರಗಳನ್ನು ಮಾರುವವಳೂ, ಥುವತೈರ ಎಂಬ ಊರಿನವಳೂ, ದೈವಭಕ್ತಳೂ ಆಗಿದ್ದಳು. ಪೌಲನು ಹೇಳುವ ಮಾತುಗಳಿಗೆ ಗಮನಕೊಡುವುದಕ್ಕಾಗಿ ಕರ್ತನು ಆಕೆಯ ಹೃದಯವನ್ನು ತೆರೆದನು.

Read ಅ. ಕೃ. 16ಅ. ಕೃ. 16
Compare ಅ. ಕೃ. 16:10-14ಅ. ಕೃ. 16:10-14