Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 16

ಅ. ಕೃ. 16:11-21

Help us?
Click on verse(s) to share them!
11ನಾವು ತ್ರೋವದಿಂದ ಸಮುದ್ರ ಪ್ರಯಾಣಮಾಡಿ ನೆಟ್ಟಗೆ ಸಮೊಥ್ರಾಕೆಗೆ ಬಂದು ಮರುದಿನ ನೆಯಾಪೊಲಿಗೆ ಸೇರಿ ಅಲ್ಲಿಂದ ಫಿಲಿಪ್ಪಿಯನ್ನು ತಲುಪಿದೆವು.
12ಫಿಲಿಪ್ಪಿ ಎಂಬುದು ಮಕೆದೋನ್ಯದಲ್ಲಿ ಪ್ರಧಾನ ಪಟ್ಟಣ, ಇದು ರೋಮಾಪುರದವರ ಒಂದು ಪ್ರವಾಸ ಸ್ಥಾನವೂ ಆಗಿದೆ. ಈ ಪಟ್ಟಣದಲ್ಲಿ ನಾವು ಕೆಲವು ದಿನಗಳ ಕಾಲ ಇದ್ದೆವು.
13ನದೀತೀರದಲ್ಲಿ ದೇವರ ಪ್ರಾರ್ಥನೆ ನಡೆಯುವ ಸ್ಥಳ ಇರುವುದೆಂದು ತಿಳಿದು ಸಬ್ಬತ್ ದಿನದಲ್ಲಿ ಊರ ಬಾಗಿಲಿನ ಹೊರಗೆ ಹೋಗಿ ಅಲ್ಲಿ ಕೂಡಿಬಂದಿದ್ದ ಸ್ತ್ರೀಯರ ಸಂಗಡ ಕುಳಿತುಕೊಂಡು ಮಾತನಾಡಿದೆವು.
14ನಮ್ಮ ಮಾತುಗಳನ್ನು ಕೇಳಿದವರಲ್ಲಿ ಲುದ್ಯಳೆಂಬ ಒಬ್ಬ ಸ್ತ್ರೀಯು ಇದ್ದಳು. ಆಕೆ ಧೂಮ್ರ (ನೇರಳೆ) ಬಣ್ಣದ ವಸ್ತ್ರಗಳನ್ನು ಮಾರುವವಳೂ, ಥುವತೈರ ಎಂಬ ಊರಿನವಳೂ, ದೈವಭಕ್ತಳೂ ಆಗಿದ್ದಳು. ಪೌಲನು ಹೇಳುವ ಮಾತುಗಳಿಗೆ ಗಮನಕೊಡುವುದಕ್ಕಾಗಿ ಕರ್ತನು ಆಕೆಯ ಹೃದಯವನ್ನು ತೆರೆದನು.
15ಆಕೆಯೂ, ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ, ಆಕೆ; “ಕರ್ತನನ್ನು ನಂಬಿದವಳೆಂದು ನೀವು ನನ್ನ ಬಗ್ಗೆ ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಉಳಿದುಕೊಳ್ಳಬೇಕೆಂದು” ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು.
16ಬಳಿಕ ಪ್ರಾರ್ಥನೆ ನಡೆಯುವ ಆ ಸ್ಥಳಕ್ಕೆ ನಾವು ಹೋಗುತ್ತಿರುವಾಗ ಗಾರುಡಗಾತಿಯಾದ ಒಬ್ಬ ದಾಸಿಯು ನಮ್ಮೆದುರಿಗೆ ಬಂದಳು. ಅವಳು ಕಣಿ ಹೇಳುವುದರಿಂದ ಅವಳ ಯಜಮಾನರಿಗೆ ಬಹು ಆದಾಯವಾಗುತ್ತಿತ್ತು.
17ಪೌಲನೂ, ನಾವೂ ಹೋಗುತ್ತಿರುವಾಗ ಅವಳು ನಮ್ಮ ಹಿಂದೆ ಬಂದು; “ಈ ಮನುಷ್ಯರು ಪರಾತ್ಪರನಾದ ದೇವರ ಸೇವಕರು; ನಿಮಗೆ ರಕ್ಷಣೆಯ ಮಾರ್ಗವನ್ನು ಸಾರುತ್ತಾರೆ” ಎಂದು ಕೂಗಿ ಹೇಳುತ್ತಿದ್ದಳು.
18ಅನೇಕ ದಿನ ಅವಳು ಹೀಗೆ ಮಾಡುತ್ತಿದ್ದುದರಿಂದ ಪೌಲನು ಬಹಳವಾಗಿ ಬೇಸರಗೊಂಡು ಹಿಂತಿರುಗಿ ಅವಳೊಳಗಿದ್ದ ದುರಾತ್ಮಕ್ಕೆ; “ಅವಳನ್ನು ಬಿಟ್ಟುಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಆಜ್ಞಾಪಿಸುತ್ತೇನೆ” ಎಂದು ಹೇಳಿದನು. ಅದೇ ಗಳಿಗೆಯಲ್ಲಿಯೇ ಅದು ಬಿಟ್ಟು ಹೋಯಿತು.
19ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಮತ್ತು ಸೀಲನನ್ನೂ ಹಿಡಿದು ಮಾರುಕಟ್ಟೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋದರು.
20ಅವರನ್ನು ಅಧಿಕಾರಿಗಳ ಮುಂದೆ ತಂದು; “ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕದಡುತ್ತಿದ್ದಾರೆ;
21ಇವರು ಯೆಹೂದ್ಯರಾಗಿದ್ದು ರೋಮನ್ನರಾದ ನಾವು ಅವಲಂಬಿಸಿ ಆಚರಿಸಬಾರದ ಆಚಾರಗಳನ್ನು ಪ್ರಚಾರ ಮಾಡುತ್ತಿದ್ದಾರೆ” ಅಂದರು.

Read ಅ. ಕೃ. 16ಅ. ಕೃ. 16
Compare ಅ. ಕೃ. 16:11-21ಅ. ಕೃ. 16:11-21