Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 16

ಅ. ಕೃ. 16:17-23

Help us?
Click on verse(s) to share them!
17ಪೌಲನೂ, ನಾವೂ ಹೋಗುತ್ತಿರುವಾಗ ಅವಳು ನಮ್ಮ ಹಿಂದೆ ಬಂದು; “ಈ ಮನುಷ್ಯರು ಪರಾತ್ಪರನಾದ ದೇವರ ಸೇವಕರು; ನಿಮಗೆ ರಕ್ಷಣೆಯ ಮಾರ್ಗವನ್ನು ಸಾರುತ್ತಾರೆ” ಎಂದು ಕೂಗಿ ಹೇಳುತ್ತಿದ್ದಳು.
18ಅನೇಕ ದಿನ ಅವಳು ಹೀಗೆ ಮಾಡುತ್ತಿದ್ದುದರಿಂದ ಪೌಲನು ಬಹಳವಾಗಿ ಬೇಸರಗೊಂಡು ಹಿಂತಿರುಗಿ ಅವಳೊಳಗಿದ್ದ ದುರಾತ್ಮಕ್ಕೆ; “ಅವಳನ್ನು ಬಿಟ್ಟುಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಆಜ್ಞಾಪಿಸುತ್ತೇನೆ” ಎಂದು ಹೇಳಿದನು. ಅದೇ ಗಳಿಗೆಯಲ್ಲಿಯೇ ಅದು ಬಿಟ್ಟು ಹೋಯಿತು.
19ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಮತ್ತು ಸೀಲನನ್ನೂ ಹಿಡಿದು ಮಾರುಕಟ್ಟೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋದರು.
20ಅವರನ್ನು ಅಧಿಕಾರಿಗಳ ಮುಂದೆ ತಂದು; “ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕದಡುತ್ತಿದ್ದಾರೆ;
21ಇವರು ಯೆಹೂದ್ಯರಾಗಿದ್ದು ರೋಮನ್ನರಾದ ನಾವು ಅವಲಂಬಿಸಿ ಆಚರಿಸಬಾರದ ಆಚಾರಗಳನ್ನು ಪ್ರಚಾರ ಮಾಡುತ್ತಿದ್ದಾರೆ” ಅಂದರು.
22ಆಗ ಜನರು ಗುಂಪಾಗಿ ಕೂಡಿ, ಅವರಿಗೆ ವಿರೋಧವಾಗಿ ಒಟ್ಟಾಗಿ ಎದ್ದರು. ಮತ್ತು ಅಧಿಕಾರಿಗಳು; ಇವರ ವಸ್ತ್ರಗಳನ್ನು ಹರಿದು, ತೆಗೆದು, ಛಡಿಗಳಿಂದ ಹೊಡೆಸಬೇಕೆಂದು ಅಪ್ಪಣೆಕೊಟ್ಟರು.
23ಅವರಿಗೆ ಬಹಳ ಹೊಡೆತಗಳನ್ನು ಹೊಡಿಸಿದ ಮೇಲೆ ಸೆರೆಮನೆಯೊಳಗೆ ಹಾಕಿಸಿ, ಇವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಯ ಯಜಮಾನನಿಗೆ ಆಜ್ಞಾಪಿಸಿದರು.

Read ಅ. ಕೃ. 16ಅ. ಕೃ. 16
Compare ಅ. ಕೃ. 16:17-23ಅ. ಕೃ. 16:17-23