Text copied!
Bibles in Kannada

ಅ. ಕೃ. 16:22-28 in Kannada

Help us?

ಅ. ಕೃ. 16:22-28 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಗ ಜನರು ಗುಂಪಾಗಿ ಕೂಡಿ, ಅವರಿಗೆ ವಿರೋಧವಾಗಿ ಒಟ್ಟಾಗಿ ಎದ್ದರು. ಮತ್ತು ಅಧಿಕಾರಿಗಳು; ಇವರ ವಸ್ತ್ರಗಳನ್ನು ಹರಿದು, ತೆಗೆದು, ಛಡಿಗಳಿಂದ ಹೊಡೆಸಬೇಕೆಂದು ಅಪ್ಪಣೆಕೊಟ್ಟರು.
23 ಅವರಿಗೆ ಬಹಳ ಹೊಡೆತಗಳನ್ನು ಹೊಡಿಸಿದ ಮೇಲೆ ಸೆರೆಮನೆಯೊಳಗೆ ಹಾಕಿಸಿ, ಇವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಯ ಯಜಮಾನನಿಗೆ ಆಜ್ಞಾಪಿಸಿದರು.
24 ಅವನು ಇಂಥಾ ಅಪ್ಪಣೆಯನ್ನು ಹೊಂದಿ ಅವರನ್ನು ಸೆರೆಮನೆಯ ಒಳಕೋಣೆಯಲ್ಲಿ ಹಾಕಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು.
25 ಮಧ್ಯರಾತ್ರಿಯಲ್ಲಿ ಪೌಲನೂ ಮತ್ತು ಸೀಲನೂ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಿದ್ದರು; ಸೆರೆಯಲ್ಲಿದ್ದವರು ಲಕ್ಷ್ಯವಿಟ್ಟು ಕೇಳುತ್ತಿದ್ದರು.
26 ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.
27 ಸೆರೆಯ ಯಜಮಾನನು ನಿದ್ದೆಯಿಂದ ಎಚ್ಚೆತ್ತು ಸೆರೆಮನೆಯ ಕದಗಳು ತೆರೆದಿರುವುದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದನು.
28 ಆದರೆ ಪೌಲನು ಮಹಾ ಶಬ್ದದಿಂದ ಕೂಗಿ ಅವನಿಗೆ; “ನೀನೇನೂ ಕೇಡುಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲೇ ಇದ್ದೇವೆ” ಎಂದು ಹೇಳಿದನು.
ಅ. ಕೃ. 16 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019