Text copied!
Bibles in Kannada

ಅ. ಕೃ. 16:26-36 in Kannada

Help us?

ಅ. ಕೃ. 16:26-36 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.
27 ಸೆರೆಯ ಯಜಮಾನನು ನಿದ್ದೆಯಿಂದ ಎಚ್ಚೆತ್ತು ಸೆರೆಮನೆಯ ಕದಗಳು ತೆರೆದಿರುವುದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದನು.
28 ಆದರೆ ಪೌಲನು ಮಹಾ ಶಬ್ದದಿಂದ ಕೂಗಿ ಅವನಿಗೆ; “ನೀನೇನೂ ಕೇಡುಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲೇ ಇದ್ದೇವೆ” ಎಂದು ಹೇಳಿದನು.
29 ಆಗ ಅವನು; ದೀಪ ತರಬೇಕೆಂದು ಕೂಗಿ ಒಳಕ್ಕೆ ಹಾರಿ ಭಯದಿಂದ ನಡುಗುತ್ತಾ ಪೌಲ ಮತ್ತು ಸೀಲರ ಮುಂದೆ ಆಡ್ಡಬಿದ್ದನು.
30 ಮತ್ತು ಅವರನ್ನು ಹೊರಗೆ ಕರೆದುಕೊಂಡು ಬಂದು; “ಸ್ವಾಮಿಗಳೇ, ನಾನು ರಕ್ಷಣೆಹೊಂದುವುದಕ್ಕೆ ಏನು ಮಾಡಬೇಕೆಂದು?” ಕೇಳಲು,
31 ಅವರು; “ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆಹೊಂದುವರು” ಎಂದು ಹೇಳಿ,
32 ಅವನಿಗೂ, ಅವನ ಮನೆಯಲ್ಲಿದ್ದವರೆಲ್ಲರಿಗೂ ದೇವರ ವಾಕ್ಯವನ್ನು ತಿಳಿಸಿದರು.
33 ಆ ಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರೆದುಕೊಂಡು ಹೋಗಿ ಅವರ ಗಾಯಗಳನ್ನು ತೊಳೆದು ಕೂಡಲೆ ತಾನೂ ತನ್ನವರೆಲ್ಲರ ಸಹಿತವಾಗಿ ದೀಕ್ಷಾಸ್ನಾನ ಮಾಡಿಸಿಕೊಂಡನು.
34 ತರುವಾಯ ಅವರನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಊಟಮಾಡಿಸಿದನು. ಅವನು ತನ್ನ ಮನೆಯವರೆಲ್ಲರ ಸಂಗಡ ದೇವರನ್ನು ನಂಬಿ ಸಂತೋಷಪಟ್ಟರು.
35 ಬೆಳಗಾದ ಮೇಲೆ ಅಧಿಕಾರಿಗಳು; “ಆ ಮನುಷ್ಯರನ್ನು ಬಿಟ್ಟುಬಿಡು” ಎಂದು ಸಿಪಾಯಿಗಳ ಮೂಲಕ ಹೇಳಿ ಕಳುಹಿಸಿದರು.
36 ಸೆರೆಮನೆಯ ಯಜಮಾನನು ಈ ಮಾತನ್ನು ಪೌಲನಿಗೆ ತಿಳಿಸಿ; “ಅಧಿಕಾರಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಹೇಳಿಕಳುಹಿಸಿದ್ದಾರೆ, ಆದುದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ” ಎಂದು ಹೇಳಿದನು.
ಅ. ಕೃ. 16 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019