Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 16

ಅ. ಕೃ. 16:35-40

Help us?
Click on verse(s) to share them!
35ಬೆಳಗಾದ ಮೇಲೆ ಅಧಿಕಾರಿಗಳು; “ಆ ಮನುಷ್ಯರನ್ನು ಬಿಟ್ಟುಬಿಡು” ಎಂದು ಸಿಪಾಯಿಗಳ ಮೂಲಕ ಹೇಳಿ ಕಳುಹಿಸಿದರು.
36ಸೆರೆಮನೆಯ ಯಜಮಾನನು ಈ ಮಾತನ್ನು ಪೌಲನಿಗೆ ತಿಳಿಸಿ; “ಅಧಿಕಾರಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಹೇಳಿಕಳುಹಿಸಿದ್ದಾರೆ, ಆದುದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ” ಎಂದು ಹೇಳಿದನು.
37ಅದಕ್ಕೆ ಪೌಲನು; “ಅವರು ವಿಚಾರಣೆಮಾಡದೆ ರೋಮಾಪುರದ ಹಕ್ಕುದಾರರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರದುಕೊಂಡುಹೋದರೆ ಸರಿ” ಎಂದು ಹೇಳಿದನು.
38ಸಿಪಾಯಿಗಳು ಈ ಮಾತುಗಳನ್ನು ಅಧಿಕಾರಿಗಳಿಗೆ ತಿಳಿಸಿದಾಗ ರೋಮಾಪುರದ ಹಕ್ಕುದಾರರು ಎಂಬ ಮಾತನ್ನು ಕೇಳಿದಾಗ ಅವರು ಭಯಪಟ್ಟರು.
39ಪೌಲ ಮತ್ತು ಸೀಲರ ಬಳಿಗೆ ಹೋಗಿ ವಿನಯವಾಗಿ ಮಾತನಾಡಿ ಅವರನ್ನು ಹೊರಕ್ಕೆ ಕರೆದುಕೊಂಡು ಬಂದು; ನೀವು ಊರನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.
40ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಅಲ್ಲಿಂದ ಹೊರಟುಹೋದರು.

Read ಅ. ಕೃ. 16ಅ. ಕೃ. 16
Compare ಅ. ಕೃ. 16:35-40ಅ. ಕೃ. 16:35-40