Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 17

ಅ. ಕೃ. 17:16-22

Help us?
Click on verse(s) to share them!
16ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣದಲ್ಲಿ ಎಲ್ಲೆಲ್ಲಿಯೂ ವಿಗ್ರಹಗಳೇ ಇರುವುದನ್ನು ನೋಡಿ ಅವನ ಆತ್ಮವು ಕುದಿಯಿತು.
17ಆದುದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರ ಮತ್ತು ಯೆಹೂದ್ಯ ಮತಾವಲಂಬಿಗಳೊಂದಿಗೆ ಮತ್ತು ಪ್ರತಿದಿನ ಪೇಟೆಯಲ್ಲಿ ಕಂಡುಬಂದವರ ಸಂಗಡಲೂ ಚರ್ಚಿಸಿದನು.
18ಇದಲ್ಲದೆ ಎಪಿಕೂರಿಯನ್ನರು, ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು; “ಈ ವಾಚಾಳಿ ಏನು ಹೇಳ ಬೇಕೆಂದಿದ್ದಾನೆ?” ಅಂದರು. ಅವನು ಯೇಸುವಿನ ವಿಷಯವಾಗಿ ಮತ್ತು ಸತ್ತವರು ಎದ್ದು ಬರುವರೆಂಬುದರ ಕುರಿತು ಸಾರುತ್ತಿದ್ದುದರಿಂದ; “ಇವನು ಅನ್ಯದೇಶದ ದೇವರುಗಳನ್ನು ಪ್ರಚಾರಮಾಡುವವನಾಗಿ ಕಂಡುಬರುತ್ತಾನೆಂದು” ಬೇರೆ ಕೆಲವರು ಹೇಳಿದರು.
19ಅವರು ಅವನನ್ನು ಹಿಡಿದು ಅರಿಯೊಪಾಗಕ್ಕೆ ಕರೆದುಕೊಂಡು ಹೋಗಿ; “ನೀನು ಹೇಳುವ ಈ ಹೊಸ ಉಪದೇಶವನ್ನು ನಾವು ತಿಳಿದುಕೊಳ್ಳಬಹುದೇ?
20ಅಪೂರ್ವವಾದ ಸಂಗತಿಗಳನ್ನು ನಮಗೆ ತಿಳಿಸುತ್ತಿದ್ದೀಯಲ್ಲಾ; ಆದಕಾರಣ ಅದೇನು ಎಂಬುದರ ಕುರಿತು ತಿಳಿಯಬೇಕೆಂದು ನಮಗೆ ಅಪೇಕ್ಷೆಯಿದೆ” ಅಂದರು.
21ಅಥೇನೆಯರೂ ಅಲ್ಲಿ ವಾಸವಾಗಿದ್ದ ಪರಸ್ಥಳದವರೂ ಹೊಸ ಹೊಸ ಸಂಗತಿಗಳನ್ನು ಹೇಳುವುದನ್ನೂ, ಕೇಳುವುದನ್ನೂ ಬಿಟ್ಟು, ಬೇರೆ ಯಾವುದಕ್ಕೂ ಸಮಯ ಕೊಡುತ್ತಿರಲಿಲ್ಲ.
22ಪೌಲನು ಅರಿಯೊಪಾಗದ ಮಧ್ಯದಲ್ಲಿ ನಿಂತುಕೊಂಡು ಹೇಳಿದ್ದೇನಂದರೆ; “ಅಥೇನೆಯ ಜನರೇ, ನೀವು ಎಲ್ಲಾದರಲ್ಲಿಯೂ ಅತಿ ದೈವಭಕ್ತಿವಂತರೆಂದು ನನಗೆ ತೋರುತ್ತಿದೆ.

Read ಅ. ಕೃ. 17ಅ. ಕೃ. 17
Compare ಅ. ಕೃ. 17:16-22ಅ. ಕೃ. 17:16-22