Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 17

ಅ. ಕೃ. 17:2-19

Help us?
Click on verse(s) to share them!
2ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ದೇವರ ವಾಕ್ಯದಿಂದ ಅವರ ಸಂಗಡ ವಾದಿಸಿ,
3ಆಯಾ ವಾಕ್ಯಗಳ ಅರ್ಥವನ್ನು ವಿವರಿಸಿ; ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತು, ಎದ್ದು ಬರುವುದು ಅಗತ್ಯವೆಂತಲೂ “ನಾನು ನಿಮಗೆ ಪ್ರಸಿದ್ಧಿಪಡಿಸುವ ಯೇಸುವೇ ಆ ಕ್ರಿಸ್ತನೆಂತಲೂ” ಸ್ಥಿರಪಡಿಸಿದನು.
4ಅವರಲ್ಲಿ ಕೆಲವರೂ ದೈವಭಕ್ತರಾದ ಗ್ರೀಕರ ದೊಡ್ಡ ಗುಂಪು ಮತ್ತು ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ಒಡಂಬಟ್ಟು ಪೌಲ ಮತ್ತು ಸೀಲರನ್ನು ಸೇರಿಕೊಂಡರು.
5ನಂಬದಿರುವ ಯೆಹೂದ್ಯರು ಹೊಟ್ಟೆಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪುಂಡರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಮತ್ತು ಸೀಲರನ್ನು ಪಟ್ಟಣದ ಸಭೆ ಎದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯನ್ನು ಮುತ್ತಿದರು.
6ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಮತ್ತು ಕೆಲವು ಮಂದಿ ಸಹೋದರರನ್ನೂ ಊರಿನ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋಗಿ; “ಲೋಕವನ್ನು ಅಲ್ಲಕಲ್ಲೋಲ ಮಾಡಿದ ಆ ಮನುಷ್ಯರು ಇಲ್ಲಿಗೂ ಬಂದಿದ್ದಾರೆ.
7ಯಾಸೋನನು ಅವರನ್ನು ಸೇರಿಸಿಕೊಂಡಿದ್ದಾನೆ, ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಚಕ್ರವರ್ತಿಯ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ” ಎಂದು ಕೂಗಿದರು.
8ಪಟ್ಟಣದವರು ಮತ್ತು ಪಟ್ಟಣದ ಅಧಿಕಾರಿಗಳು ಈ ಮಾತುಗಳನ್ನು ಕೇಳಿ ಕಳವಳಪಟ್ಟು
9ಯಾಸೋನ ಮೊದಲಾದವರಿಂದ ಜಾಮೀನು ತೆಗೆದುಕೊಂಡು ತರುವಾಯ ಅವರನ್ನು ಬಿಟ್ಟುಬಿಟ್ಟರು.
10ಆ ಸಹೋದರರು ರಾತ್ರಿಯಲ್ಲಿ ಪೌಲ ಮತ್ತು ಸೀಲರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು. ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.
11ಆ ಸಭೆಯವರು ದೇವರ ವಾಕ್ಯವನ್ನು ಸಿದ್ಧ ಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಅಲ್ಲವೋ ಎಂದು ಕಂಡುಕೊಳ್ಳಲು ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದದರಿಂದ ಅವರು ಥೆಸಲೋನಿಕದವರಿಗಿಂತ ಸದ್ಗುಣವುಳವರಾಗಿದ್ದರು.
12ಹೀಗಿರಲಾಗಿ ಅವರಲ್ಲಿ ಕುಲೀನರಾದ ಅನೇಕ ಗ್ರೀಕ್ ಹೆಂಗಸರು, ಗಂಡಸರು ನಂಬಿದರು.
13ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಪ್ರಸಿದ್ಧಪಡಿಸುತ್ತಾನೆಂಬ ವರ್ತಮಾನವು ಥೆಸಲೋನಿಕದ ಯೆಹೂದ್ಯರಿಗೆ ತಿಳಿದು ಬಂದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ಪ್ರಚೋದಿಸಿ ಕದಡಿದರು.
14ಕೂಡಲೇ ಸಹೋದರರು ಪೌಲನನ್ನು ಸಮುದ್ರದ ತನಕ ಹೋಗುವುದಕ್ಕೆ ಕಳುಹಿಸಿಕೊಟ್ಟರು. ಆದರೆ ಸೀಲನೂ, ತಿಮೊಥೆಯನೂ ಅಲ್ಲೇ ನಿಂತರು.
15ಪೌಲನನ್ನು ಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡು ಹೋದರು, ಸೀಲನನ್ನೂ, ತಿಮೊಥೆಯನನ್ನೂ ಭೇಟಿಯಾದ ಕೂಡಲೆ ಬೇಗ ತನ್ನ ಬಳಿಗೆ ಬರಬೇಕೆಂಬ ಅಪ್ಪಣೆಯನ್ನು ಪೌಲನಿಂದ ಹೊಂದಿ ಹೊರಟುಬಂದರು.
16ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣದಲ್ಲಿ ಎಲ್ಲೆಲ್ಲಿಯೂ ವಿಗ್ರಹಗಳೇ ಇರುವುದನ್ನು ನೋಡಿ ಅವನ ಆತ್ಮವು ಕುದಿಯಿತು.
17ಆದುದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರ ಮತ್ತು ಯೆಹೂದ್ಯ ಮತಾವಲಂಬಿಗಳೊಂದಿಗೆ ಮತ್ತು ಪ್ರತಿದಿನ ಪೇಟೆಯಲ್ಲಿ ಕಂಡುಬಂದವರ ಸಂಗಡಲೂ ಚರ್ಚಿಸಿದನು.
18ಇದಲ್ಲದೆ ಎಪಿಕೂರಿಯನ್ನರು, ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು; “ಈ ವಾಚಾಳಿ ಏನು ಹೇಳ ಬೇಕೆಂದಿದ್ದಾನೆ?” ಅಂದರು. ಅವನು ಯೇಸುವಿನ ವಿಷಯವಾಗಿ ಮತ್ತು ಸತ್ತವರು ಎದ್ದು ಬರುವರೆಂಬುದರ ಕುರಿತು ಸಾರುತ್ತಿದ್ದುದರಿಂದ; “ಇವನು ಅನ್ಯದೇಶದ ದೇವರುಗಳನ್ನು ಪ್ರಚಾರಮಾಡುವವನಾಗಿ ಕಂಡುಬರುತ್ತಾನೆಂದು” ಬೇರೆ ಕೆಲವರು ಹೇಳಿದರು.
19ಅವರು ಅವನನ್ನು ಹಿಡಿದು ಅರಿಯೊಪಾಗಕ್ಕೆ ಕರೆದುಕೊಂಡು ಹೋಗಿ; “ನೀನು ಹೇಳುವ ಈ ಹೊಸ ಉಪದೇಶವನ್ನು ನಾವು ತಿಳಿದುಕೊಳ್ಳಬಹುದೇ?

Read ಅ. ಕೃ. 17ಅ. ಕೃ. 17
Compare ಅ. ಕೃ. 17:2-19ಅ. ಕೃ. 17:2-19