Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 17

ಅ. ಕೃ. 17:20-30

Help us?
Click on verse(s) to share them!
20ಅಪೂರ್ವವಾದ ಸಂಗತಿಗಳನ್ನು ನಮಗೆ ತಿಳಿಸುತ್ತಿದ್ದೀಯಲ್ಲಾ; ಆದಕಾರಣ ಅದೇನು ಎಂಬುದರ ಕುರಿತು ತಿಳಿಯಬೇಕೆಂದು ನಮಗೆ ಅಪೇಕ್ಷೆಯಿದೆ” ಅಂದರು.
21ಅಥೇನೆಯರೂ ಅಲ್ಲಿ ವಾಸವಾಗಿದ್ದ ಪರಸ್ಥಳದವರೂ ಹೊಸ ಹೊಸ ಸಂಗತಿಗಳನ್ನು ಹೇಳುವುದನ್ನೂ, ಕೇಳುವುದನ್ನೂ ಬಿಟ್ಟು, ಬೇರೆ ಯಾವುದಕ್ಕೂ ಸಮಯ ಕೊಡುತ್ತಿರಲಿಲ್ಲ.
22ಪೌಲನು ಅರಿಯೊಪಾಗದ ಮಧ್ಯದಲ್ಲಿ ನಿಂತುಕೊಂಡು ಹೇಳಿದ್ದೇನಂದರೆ; “ಅಥೇನೆಯ ಜನರೇ, ನೀವು ಎಲ್ಲಾದರಲ್ಲಿಯೂ ಅತಿ ದೈವಭಕ್ತಿವಂತರೆಂದು ನನಗೆ ತೋರುತ್ತಿದೆ.
23ನಾನು ನಿಮ್ಮ ಪಟ್ಟಣದಲ್ಲಿ ತಿರುಗಾಡುತ್ತಾ ನೀವು ಪೂಜಿಸುವ ದೇವತಾ ಪ್ರತಿಮೆಗಳನ್ನು ಚೆನ್ನಾಗಿ ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ ‘ತಿಳಿಯದ ದೇವರಿಗೆ’ ಎಂದು ಬರೆದಿತ್ತು; ಆದಕಾರಣ ನೀವು ಯಾವುದನ್ನು ತಿಳಿಯದೆ ಪೂಜಿಸುತ್ತಿದ್ದೀರೋ ಅದನ್ನೇ ನಿಮಗೆ ತಿಳಿಯಪಡಿಸುತ್ತೇನೆ, ಕೇಳಿರಿ ಅಂದನು.
24“ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ, ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯನಾಗಿರುವುದರಿಂದ ಆತನು ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವವನಲ್ಲ;
25ತಾನೇ ಎಲ್ಲರಿಗೂ ಜೀವಶ್ವಾಸ ಹಾಗೂ ಜೀವಿಸುವುದಕ್ಕೆ ಬೇಕಾದದ್ದೆಲ್ಲವನ್ನೂ ಕೊಡುವವನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಸೇವೆಹೊಂದುವವನೂ ಅಲ್ಲ.
26ದೇವರು ಒಬ್ಬ ಮನುಷ್ಯನಿಂದ ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ, ಅವರವರು ಇರತಕ್ಕ ಕಾಲಗಳನ್ನೂ ಹಾಗು ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ಅವರನ್ನು ಇರಿಸಿ,
27ಒಂದು ವೇಳೆ ಅವರು ತಡವಾಗಿಯಾದರೂ ತನ್ನನ್ನು ಕಂಡುಕೊಂಡಾರೇನೋ ಎಂದು ತನ್ನನ್ನು ಹುಡುಕುವವರನ್ನಾಗಿ ಮಾಡಿದನು. ಆತನು ನಮ್ಮಲ್ಲಿ ಒಬ್ಬನಿಗೂ ದೂರವಾದವನಲ್ಲ.
28ಏಕೆಂದರೆ ಆತನಲ್ಲಿಯೇ ನಾವು ಜೀವಿಸುತ್ತೇವೆ, ಚಲಿಸುತ್ತೇವೆ ಮತ್ತು ಇರುತ್ತೇವೆ. ನಿಮ್ಮ ಕವಿಗಳಲ್ಲಿ ಕೆಲವರು, ‘ನಾವು ಆತನ ಸಂತಾನದವರೇ’ ಎಂದು ಹೇಳಿದ್ದಾರೆ.
29“ನಾವು ದೇವರ ಸಂತಾನದವರಾದ ಮೇಲೆ ದೇವರು ಮನುಷ್ಯನ ಶಿಲ್ಪವಿದ್ಯೆಯಿಂದಲೂ, ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ, ಬೆಳ್ಳಿ ಮತ್ತು ಕಲ್ಲುಗಳಿಗೆ ಸಮಾನವೆಂದು ನಾವು ಭಾವಿಸಬಾರದು.
30ಆ ಆಜ್ಞಾನದ ಕಾಲಗಳನ್ನು ದೇವರು ಗಣನೆಗೆ ತೆಗೆದುಕೊಳ್ಳಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ಪಶ್ಚಾತ್ತಾಪಪಟ್ಟು ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಿದ್ದಾನೆ.

Read ಅ. ಕೃ. 17ಅ. ಕೃ. 17
Compare ಅ. ಕೃ. 17:20-30ಅ. ಕೃ. 17:20-30