Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 17

ಅ. ಕೃ. 17:28-32

Help us?
Click on verse(s) to share them!
28ಏಕೆಂದರೆ ಆತನಲ್ಲಿಯೇ ನಾವು ಜೀವಿಸುತ್ತೇವೆ, ಚಲಿಸುತ್ತೇವೆ ಮತ್ತು ಇರುತ್ತೇವೆ. ನಿಮ್ಮ ಕವಿಗಳಲ್ಲಿ ಕೆಲವರು, ‘ನಾವು ಆತನ ಸಂತಾನದವರೇ’ ಎಂದು ಹೇಳಿದ್ದಾರೆ.
29“ನಾವು ದೇವರ ಸಂತಾನದವರಾದ ಮೇಲೆ ದೇವರು ಮನುಷ್ಯನ ಶಿಲ್ಪವಿದ್ಯೆಯಿಂದಲೂ, ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ, ಬೆಳ್ಳಿ ಮತ್ತು ಕಲ್ಲುಗಳಿಗೆ ಸಮಾನವೆಂದು ನಾವು ಭಾವಿಸಬಾರದು.
30ಆ ಆಜ್ಞಾನದ ಕಾಲಗಳನ್ನು ದೇವರು ಗಣನೆಗೆ ತೆಗೆದುಕೊಳ್ಳಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ಪಶ್ಚಾತ್ತಾಪಪಟ್ಟು ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಿದ್ದಾನೆ.
31ಏಕೆಂದರೆ, ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವುದಕ್ಕೆ ಎಲ್ಲರಿಗೂ ದೃಷ್ಟಾಂತವನ್ನು ಕೊಟ್ಟಿದ್ದಾನೆ” ಅಂದನು.
32ಸತ್ತವರು ಎದ್ದುಬರುವ ವಿಷಯವನ್ನು ಕೇಳಿದಾಗ ಕೆಲವರು ಪೌಲನನ್ನು ಅಪಹಾಸ್ಯಮಾಡಿದರು, ಬೇರೆ ಕೆಲವರು; “ನೀನು ಈ ವಿಷಯದಲ್ಲಿ ಹೇಳುವುದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ” ಅಂದರು.

Read ಅ. ಕೃ. 17ಅ. ಕೃ. 17
Compare ಅ. ಕೃ. 17:28-32ಅ. ಕೃ. 17:28-32