Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 17

ಅ. ಕೃ. 17:3-13

Help us?
Click on verse(s) to share them!
3ಆಯಾ ವಾಕ್ಯಗಳ ಅರ್ಥವನ್ನು ವಿವರಿಸಿ; ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತು, ಎದ್ದು ಬರುವುದು ಅಗತ್ಯವೆಂತಲೂ “ನಾನು ನಿಮಗೆ ಪ್ರಸಿದ್ಧಿಪಡಿಸುವ ಯೇಸುವೇ ಆ ಕ್ರಿಸ್ತನೆಂತಲೂ” ಸ್ಥಿರಪಡಿಸಿದನು.
4ಅವರಲ್ಲಿ ಕೆಲವರೂ ದೈವಭಕ್ತರಾದ ಗ್ರೀಕರ ದೊಡ್ಡ ಗುಂಪು ಮತ್ತು ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ಒಡಂಬಟ್ಟು ಪೌಲ ಮತ್ತು ಸೀಲರನ್ನು ಸೇರಿಕೊಂಡರು.
5ನಂಬದಿರುವ ಯೆಹೂದ್ಯರು ಹೊಟ್ಟೆಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪುಂಡರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಮತ್ತು ಸೀಲರನ್ನು ಪಟ್ಟಣದ ಸಭೆ ಎದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯನ್ನು ಮುತ್ತಿದರು.
6ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಮತ್ತು ಕೆಲವು ಮಂದಿ ಸಹೋದರರನ್ನೂ ಊರಿನ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋಗಿ; “ಲೋಕವನ್ನು ಅಲ್ಲಕಲ್ಲೋಲ ಮಾಡಿದ ಆ ಮನುಷ್ಯರು ಇಲ್ಲಿಗೂ ಬಂದಿದ್ದಾರೆ.
7ಯಾಸೋನನು ಅವರನ್ನು ಸೇರಿಸಿಕೊಂಡಿದ್ದಾನೆ, ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಚಕ್ರವರ್ತಿಯ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ” ಎಂದು ಕೂಗಿದರು.
8ಪಟ್ಟಣದವರು ಮತ್ತು ಪಟ್ಟಣದ ಅಧಿಕಾರಿಗಳು ಈ ಮಾತುಗಳನ್ನು ಕೇಳಿ ಕಳವಳಪಟ್ಟು
9ಯಾಸೋನ ಮೊದಲಾದವರಿಂದ ಜಾಮೀನು ತೆಗೆದುಕೊಂಡು ತರುವಾಯ ಅವರನ್ನು ಬಿಟ್ಟುಬಿಟ್ಟರು.
10ಆ ಸಹೋದರರು ರಾತ್ರಿಯಲ್ಲಿ ಪೌಲ ಮತ್ತು ಸೀಲರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು. ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.
11ಆ ಸಭೆಯವರು ದೇವರ ವಾಕ್ಯವನ್ನು ಸಿದ್ಧ ಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಅಲ್ಲವೋ ಎಂದು ಕಂಡುಕೊಳ್ಳಲು ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದದರಿಂದ ಅವರು ಥೆಸಲೋನಿಕದವರಿಗಿಂತ ಸದ್ಗುಣವುಳವರಾಗಿದ್ದರು.
12ಹೀಗಿರಲಾಗಿ ಅವರಲ್ಲಿ ಕುಲೀನರಾದ ಅನೇಕ ಗ್ರೀಕ್ ಹೆಂಗಸರು, ಗಂಡಸರು ನಂಬಿದರು.
13ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಪ್ರಸಿದ್ಧಪಡಿಸುತ್ತಾನೆಂಬ ವರ್ತಮಾನವು ಥೆಸಲೋನಿಕದ ಯೆಹೂದ್ಯರಿಗೆ ತಿಳಿದು ಬಂದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ಪ್ರಚೋದಿಸಿ ಕದಡಿದರು.

Read ಅ. ಕೃ. 17ಅ. ಕೃ. 17
Compare ಅ. ಕೃ. 17:3-13ಅ. ಕೃ. 17:3-13