Text copied!
Bibles in Kannada

ಅ. ಕೃ. 17:3-7 in Kannada

Help us?

ಅ. ಕೃ. 17:3-7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಯಾ ವಾಕ್ಯಗಳ ಅರ್ಥವನ್ನು ವಿವರಿಸಿ; ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತು, ಎದ್ದು ಬರುವುದು ಅಗತ್ಯವೆಂತಲೂ “ನಾನು ನಿಮಗೆ ಪ್ರಸಿದ್ಧಿಪಡಿಸುವ ಯೇಸುವೇ ಆ ಕ್ರಿಸ್ತನೆಂತಲೂ” ಸ್ಥಿರಪಡಿಸಿದನು.
4 ಅವರಲ್ಲಿ ಕೆಲವರೂ ದೈವಭಕ್ತರಾದ ಗ್ರೀಕರ ದೊಡ್ಡ ಗುಂಪು ಮತ್ತು ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ಒಡಂಬಟ್ಟು ಪೌಲ ಮತ್ತು ಸೀಲರನ್ನು ಸೇರಿಕೊಂಡರು.
5 ನಂಬದಿರುವ ಯೆಹೂದ್ಯರು ಹೊಟ್ಟೆಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪುಂಡರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಮತ್ತು ಸೀಲರನ್ನು ಪಟ್ಟಣದ ಸಭೆ ಎದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯನ್ನು ಮುತ್ತಿದರು.
6 ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಮತ್ತು ಕೆಲವು ಮಂದಿ ಸಹೋದರರನ್ನೂ ಊರಿನ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋಗಿ; “ಲೋಕವನ್ನು ಅಲ್ಲಕಲ್ಲೋಲ ಮಾಡಿದ ಆ ಮನುಷ್ಯರು ಇಲ್ಲಿಗೂ ಬಂದಿದ್ದಾರೆ.
7 ಯಾಸೋನನು ಅವರನ್ನು ಸೇರಿಸಿಕೊಂಡಿದ್ದಾನೆ, ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಚಕ್ರವರ್ತಿಯ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ” ಎಂದು ಕೂಗಿದರು.
ಅ. ಕೃ. 17 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019