Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 18

ಅ. ಕೃ. 18:1-5

Help us?
Click on verse(s) to share them!
1ಇದಾದ ಮೇಲೆ ಪೌಲನು ಅಥೇನೆಯನ್ನು ಬಿಟ್ಟು ಕೊರಿಂಥಕ್ಕೆ ಹೋದನು.
2ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯನನ್ನು ಅಲ್ಲಿ ಕಂಡನು. ಯೆಹೂದ್ಯರೆಲ್ಲರೂ ರೋಮಾಪುರವನ್ನು ಬಿಟ್ಟುಹೋಗಬೇಕೆಂದು ಕ್ಲೌದಿಯ ಚಕ್ರವರ್ತಿಯು ಆಜ್ಞೆ ವಿಧಿಸಿದ ಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿನಗಳ ಮೊದಲೇ ಇತಾಲ್ಯ ದೇಶದಿಂದ ಅಲ್ಲಿಗೆ ಬಂದಿದ್ದರು.
3ಪೌಲನು ಅವರ ಮನೆಗೆ ಹೋಗಿ ತಾನೂ, ಅವರೂ ಒಂದೇ ಕಸುಬಿನವರಾಗಿದ್ದುದರಿಂದ ಅವರ ಸಂಗಡವಿದ್ದು ಅವರೊಂದಿಗೆ ಕೆಲಸಮಾಡುತ್ತಿದ್ದನು; ಗುಡಾರಮಾಡುವುದು ಅವರ ಕಸುಬಾಗಿತ್ತು.
4ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.
5ಸೀಲನೂ ಮತ್ತು ತಿಮೊಥೆಯನೂ ಮಕೆದೋನ್ಯದಿಂದ ಬಂದಾಗ ಪೌಲನು ದೇವರ ವಾಕ್ಯವನ್ನು ಬೋಧಿಸುವುದರಲ್ಲಿ ಅತ್ಯಾಸಕ್ತಿಯುಳ್ಳವನಾಗಿ ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಖಚಿತವಾಗಿ ಸಾಕ್ಷಿಹೇಳಿದನು.

Read ಅ. ಕೃ. 18ಅ. ಕೃ. 18
Compare ಅ. ಕೃ. 18:1-5ಅ. ಕೃ. 18:1-5