Text copied!
Bibles in Kannada

ಅ. ಕೃ. 18:1-5 in Kannada

Help us?

ಅ. ಕೃ. 18:1-5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇದಾದ ಮೇಲೆ ಪೌಲನು ಅಥೇನೆಯನ್ನು ಬಿಟ್ಟು ಕೊರಿಂಥಕ್ಕೆ ಹೋದನು.
2 ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯನನ್ನು ಅಲ್ಲಿ ಕಂಡನು. ಯೆಹೂದ್ಯರೆಲ್ಲರೂ ರೋಮಾಪುರವನ್ನು ಬಿಟ್ಟುಹೋಗಬೇಕೆಂದು ಕ್ಲೌದಿಯ ಚಕ್ರವರ್ತಿಯು ಆಜ್ಞೆ ವಿಧಿಸಿದ ಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿನಗಳ ಮೊದಲೇ ಇತಾಲ್ಯ ದೇಶದಿಂದ ಅಲ್ಲಿಗೆ ಬಂದಿದ್ದರು.
3 ಪೌಲನು ಅವರ ಮನೆಗೆ ಹೋಗಿ ತಾನೂ, ಅವರೂ ಒಂದೇ ಕಸುಬಿನವರಾಗಿದ್ದುದರಿಂದ ಅವರ ಸಂಗಡವಿದ್ದು ಅವರೊಂದಿಗೆ ಕೆಲಸಮಾಡುತ್ತಿದ್ದನು; ಗುಡಾರಮಾಡುವುದು ಅವರ ಕಸುಬಾಗಿತ್ತು.
4 ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.
5 ಸೀಲನೂ ಮತ್ತು ತಿಮೊಥೆಯನೂ ಮಕೆದೋನ್ಯದಿಂದ ಬಂದಾಗ ಪೌಲನು ದೇವರ ವಾಕ್ಯವನ್ನು ಬೋಧಿಸುವುದರಲ್ಲಿ ಅತ್ಯಾಸಕ್ತಿಯುಳ್ಳವನಾಗಿ ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಖಚಿತವಾಗಿ ಸಾಕ್ಷಿಹೇಳಿದನು.
ಅ. ಕೃ. 18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019