Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 18

ಅ. ಕೃ. 18:11-24

Help us?
Click on verse(s) to share them!
11ಅವನು ಒಂದು ವರ್ಷ ಆರು ತಿಂಗಳು ಅಲ್ಲೇ ಇದ್ದುಕೊಂಡು ಆ ಜನರಿಗೆ ದೇವರ ವಾಕ್ಯವನ್ನು ಉಪದೇಶಮಾಡುತ್ತಿದ್ದನು.
12ಗಲ್ಲಿಯೋನನು ಅಖಾಯ ಪ್ರಾಂತ್ಯಕ್ಕೆ ಅಧಿಪತಿಯಾಗಿರಲು ಯೆಹೂದ್ಯರು ಒಗ್ಗಟ್ಟಾಗಿ ಪೌಲನ ಮೇಲೆ ಬಿದ್ದು ಅವನನ್ನು ನ್ಯಾಯಾಸ್ಥಾನದ ಮುಂದೆ ಹಿಡಿದು ತಂದು;
13“ಇವನು ದೇವರನ್ನು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿ ಆರಾಧಿಸುವುದಕ್ಕೆ ಜನರನ್ನು ಒಡಂಬಡಿಸುತ್ತಾನೆಂದು” ದೂರುಹೇಳಿದರು.
14ಪೌಲನು ಪ್ರತಿವಾದ ಮಾಡಬೇಕೆಂದಿದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ; “ಎಲೈ ಯೆಹೂದ್ಯರೇ, ಅನ್ಯಾಯವು, ದುಷ್ಕರ್ಮವು ಇಂಥದೇನಾದರೂ ಇದ್ದಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನೆಯಿಂದ ಕೇಳುವುದು ನ್ಯಾಯವೇ.
15ಆದರೆ ನೀವು ಮಾಡುವ ವಿವಾದವು ಬೋಧನೆಯನ್ನೂ, ಹೆಸರುಗಳನ್ನೂ, ನಿಮ್ಮ ಧರ್ಮಶಾಸ್ತ್ರವನ್ನೂ ಕುರಿತದ್ದಾಗಿರುವುದರಿಂದ ಅವುಗಳನ್ನು ನೀವೇ ನೋಡಿಕೊಳ್ಳಿರಿ. ಇಂಥ ವಿಷಯಗಳನ್ನು ವಿಚಾರಣೆಮಾಡುವುದಕ್ಕೆ ನನಗಂತೂ ಮನಸ್ಸಿಲ್ಲ” ಎಂದು ಹೇಳಿ,
16ಅವರನ್ನು ನ್ಯಾಯಾಸ್ಥಾನದ ಸ್ಥಳದಿಂದ ಹೊರಡಿಸಿಬಿಟ್ಟನು.
17ಆಗ ಜನರೆಲ್ಲರು ಸಭಾಮಂದಿರದ ಅಧ್ಯಕ್ಷನಾದ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋನನು ಅವುಗಳಲ್ಲಿ ಒಂದನ್ನೂ ಲಕ್ಷ್ಯಕ್ಕೆ ತೆಗೆದುಕೊಳ್ಳಲಿಲ್ಲ.
18ಪೌಲನು ಇನ್ನು ಅನೇಕ ದಿನಗಳ ಕಾಲ ಅಲ್ಲಿದ್ದ ಅನಂತರ ಸಹೋದರರಿಂದ ಅಪ್ಪಣೆತೆಗೆದುಕೊಂಡು ತನಗೆ ದೀಕ್ಷೆ ಇದ್ದುದರಿಂದ ಕೆಂಖ್ರೆಯ ಪಟ್ಟಣದಲ್ಲಿ ಕ್ಷೌರಮಾಡಿಸಿಕೊಂಡು ಹಡಗನ್ನು ಹತ್ತಿ ಸಿರಿಯಕ್ಕೆ ಹೊರಟನು. ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಅವನ ಸಂಗಡ ಹೊರಟರು.
19ಎಫೆಸಕ್ಕೆ ಬಂದಾಗ ಅವರನ್ನು ಅಲ್ಲೇ ಬಿಟ್ಟು, ತಾನು ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ವಾದಿಸಿದನು.
20ಅವರು ಅವನನ್ನು ಇನ್ನು ಕೆಲವು ಕಾಲ ಇರಬೇಕೆಂದು ಕೇಳಿಕೊಂಡಾಗ ಅವನು ಒಪ್ಪದೆ,
21“ದೇವರ ಚಿತ್ತವಾದರೆ ಪುನಃ ನಿಮ್ಮ ಬಳಿಗೆ ಬರುತ್ತೇನೆಂದು” ಹೇಳಿ ಅವರ ಅಪ್ಪಣೆ ತೆಗೆದುಕೊಂಡು ಹೊರಟುಹೋದನು. ಅನಂತರ ಎಫೆಸದಿಂದ ಸಮುದ್ರಪ್ರಯಾಣ ಮಾಡಿ ಕೈಸರೈಯದಲ್ಲಿ ಇಳಿದು,
22ಯೆರೂಸಲೇಮಿಗೆ ಹೋಗಿ ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಬಂದನು.
23ಪೌಲನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ಪುನಃ ಅಲ್ಲಿಂದ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ, ಫ್ರುಗ್ಯದಲ್ಲಿಯೂ ಸಂಚಾರಮಾಡುತ್ತಾ ಶಿಷ್ಯರೆಲ್ಲರನ್ನು ದೃಢಪಡಿಸಿದನು.
24ಅಷ್ಟರೊಳಗೆ ಅಲೆಕ್ಸಾಂದ್ರಿಯದಲ್ಲಿ ಹುಟ್ಟಿದ ಅಪೊಲ್ಲೋಸನೆಂಬ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಾಕ್ಚಾತುರ್ಯವುಳ್ಳವನೂ ಧರ್ಮಶಾಸ್ತ್ರಗಳಲ್ಲಿ ಪ್ರವೀಣನೂ ಆಗಿದ್ದನು.

Read ಅ. ಕೃ. 18ಅ. ಕೃ. 18
Compare ಅ. ಕೃ. 18:11-24ಅ. ಕೃ. 18:11-24