Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 18

ಅ. ಕೃ. 18:4-10

Help us?
Click on verse(s) to share them!
4ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.
5ಸೀಲನೂ ಮತ್ತು ತಿಮೊಥೆಯನೂ ಮಕೆದೋನ್ಯದಿಂದ ಬಂದಾಗ ಪೌಲನು ದೇವರ ವಾಕ್ಯವನ್ನು ಬೋಧಿಸುವುದರಲ್ಲಿ ಅತ್ಯಾಸಕ್ತಿಯುಳ್ಳವನಾಗಿ ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಖಚಿತವಾಗಿ ಸಾಕ್ಷಿಹೇಳಿದನು.
6ಅವರು ಎದುರಿಸಿ, ದೂಷಿಸಲಾಗಿ ಅವನು ತನ್ನ ವಸ್ತ್ರಗಳನ್ನು ಝಾಡಿಸಿ ಅವರಿಗೆ; “ನಿಮ್ಮ ನಾಶನಕ್ಕೆ ನೀವೇ ಹೊಣೆ. ನಾನು ಶುದ್ಧನು. ನಾನು ಇಂದಿನಿಂದ ಅನ್ಯಜನರ ಬಳಿಗೆ ಹೋಗುತ್ತೇನೆ” ಎಂದು ಹೇಳಿ,
7ಆ ಸ್ಥಳವನ್ನು ಬಿಟ್ಟು ದೇವರಿಗೆ ಭಯಪಡುವವನಾಗಿದ್ದ ತೀತ ಯುಸ್ತನೆಂಬುವನ ಮನೆಗೆ ಹೋದನು. ಅವನ ಮನೆಯು ಸಭಾಮಂದಿರದ ಬದಿಯಲ್ಲಿ ಇತ್ತು.
8ಸಭಾಮಂದಿರದ ಅಧ್ಯಕ್ಷನಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಮತ್ತು ಕೊರಿಂಥದವರಲ್ಲಿ ಅನೇಕ ಜನರು ಪೌಲನ ಬೋಧನೆಯನ್ನು ಕೇಳಿ ವಿಶ್ವಾಸವಿಟ್ಟು ದೀಕ್ಷಾಸ್ನಾನ ಮಾಡಿಸಿಕೊಂಡರು.
9ಇದಲ್ಲದೆ ಕರ್ತನು ರಾತ್ರಿ ಪೌಲನಿಗೆ ದರ್ಶನ ಕೊಟ್ಟು; “ನೀನು ಹೆದರಬೇಡ; ಆದರೆ ಸುಮ್ಮನಿರದೆ ಸುವಾರ್ತೆಯನ್ನು ಸಾರುತ್ತಲೇ ಇರು,
10ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನಗೆ ಕೇಡು ಮಾಡುವುದಿಲ್ಲ; ಈ ಪಟ್ಟಣದಲ್ಲಿ ನನಗೆ ಬಹಳ ಮಂದಿ ಇದ್ದಾರೆ” ಎಂದು ಹೇಳಿದನು.

Read ಅ. ಕೃ. 18ಅ. ಕೃ. 18
Compare ಅ. ಕೃ. 18:4-10ಅ. ಕೃ. 18:4-10