Text copied!
Bibles in Kannada

ಅ. ಕೃ. 18:5-8 in Kannada

Help us?

ಅ. ಕೃ. 18:5-8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸೀಲನೂ ಮತ್ತು ತಿಮೊಥೆಯನೂ ಮಕೆದೋನ್ಯದಿಂದ ಬಂದಾಗ ಪೌಲನು ದೇವರ ವಾಕ್ಯವನ್ನು ಬೋಧಿಸುವುದರಲ್ಲಿ ಅತ್ಯಾಸಕ್ತಿಯುಳ್ಳವನಾಗಿ ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಖಚಿತವಾಗಿ ಸಾಕ್ಷಿಹೇಳಿದನು.
6 ಅವರು ಎದುರಿಸಿ, ದೂಷಿಸಲಾಗಿ ಅವನು ತನ್ನ ವಸ್ತ್ರಗಳನ್ನು ಝಾಡಿಸಿ ಅವರಿಗೆ; “ನಿಮ್ಮ ನಾಶನಕ್ಕೆ ನೀವೇ ಹೊಣೆ. ನಾನು ಶುದ್ಧನು. ನಾನು ಇಂದಿನಿಂದ ಅನ್ಯಜನರ ಬಳಿಗೆ ಹೋಗುತ್ತೇನೆ” ಎಂದು ಹೇಳಿ,
7 ಆ ಸ್ಥಳವನ್ನು ಬಿಟ್ಟು ದೇವರಿಗೆ ಭಯಪಡುವವನಾಗಿದ್ದ ತೀತ ಯುಸ್ತನೆಂಬುವನ ಮನೆಗೆ ಹೋದನು. ಅವನ ಮನೆಯು ಸಭಾಮಂದಿರದ ಬದಿಯಲ್ಲಿ ಇತ್ತು.
8 ಸಭಾಮಂದಿರದ ಅಧ್ಯಕ್ಷನಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಮತ್ತು ಕೊರಿಂಥದವರಲ್ಲಿ ಅನೇಕ ಜನರು ಪೌಲನ ಬೋಧನೆಯನ್ನು ಕೇಳಿ ವಿಶ್ವಾಸವಿಟ್ಟು ದೀಕ್ಷಾಸ್ನಾನ ಮಾಡಿಸಿಕೊಂಡರು.
ಅ. ಕೃ. 18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019