Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 18

ಅ. ಕೃ. 18:9-14

Help us?
Click on verse(s) to share them!
9ಇದಲ್ಲದೆ ಕರ್ತನು ರಾತ್ರಿ ಪೌಲನಿಗೆ ದರ್ಶನ ಕೊಟ್ಟು; “ನೀನು ಹೆದರಬೇಡ; ಆದರೆ ಸುಮ್ಮನಿರದೆ ಸುವಾರ್ತೆಯನ್ನು ಸಾರುತ್ತಲೇ ಇರು,
10ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನಗೆ ಕೇಡು ಮಾಡುವುದಿಲ್ಲ; ಈ ಪಟ್ಟಣದಲ್ಲಿ ನನಗೆ ಬಹಳ ಮಂದಿ ಇದ್ದಾರೆ” ಎಂದು ಹೇಳಿದನು.
11ಅವನು ಒಂದು ವರ್ಷ ಆರು ತಿಂಗಳು ಅಲ್ಲೇ ಇದ್ದುಕೊಂಡು ಆ ಜನರಿಗೆ ದೇವರ ವಾಕ್ಯವನ್ನು ಉಪದೇಶಮಾಡುತ್ತಿದ್ದನು.
12ಗಲ್ಲಿಯೋನನು ಅಖಾಯ ಪ್ರಾಂತ್ಯಕ್ಕೆ ಅಧಿಪತಿಯಾಗಿರಲು ಯೆಹೂದ್ಯರು ಒಗ್ಗಟ್ಟಾಗಿ ಪೌಲನ ಮೇಲೆ ಬಿದ್ದು ಅವನನ್ನು ನ್ಯಾಯಾಸ್ಥಾನದ ಮುಂದೆ ಹಿಡಿದು ತಂದು;
13“ಇವನು ದೇವರನ್ನು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿ ಆರಾಧಿಸುವುದಕ್ಕೆ ಜನರನ್ನು ಒಡಂಬಡಿಸುತ್ತಾನೆಂದು” ದೂರುಹೇಳಿದರು.
14ಪೌಲನು ಪ್ರತಿವಾದ ಮಾಡಬೇಕೆಂದಿದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ; “ಎಲೈ ಯೆಹೂದ್ಯರೇ, ಅನ್ಯಾಯವು, ದುಷ್ಕರ್ಮವು ಇಂಥದೇನಾದರೂ ಇದ್ದಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನೆಯಿಂದ ಕೇಳುವುದು ನ್ಯಾಯವೇ.

Read ಅ. ಕೃ. 18ಅ. ಕೃ. 18
Compare ಅ. ಕೃ. 18:9-14ಅ. ಕೃ. 18:9-14