Text copied!
Bibles in Kannada

ಅ. ಕೃ. 19:1-5 in Kannada

Help us?

ಅ. ಕೃ. 19:1-5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮಲೆನಾಡಿನಲ್ಲಿ ಸಂಚಾರಮಾಡಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡು;
2 “ನೀವು ನಂಬಿದಾಗ ಪವಿತ್ರಾತ್ಮವರವನ್ನು ಹೊಂದಿದಿರೋ?” ಎಂದು ಅವರನ್ನು ಕೇಳಲು ಅವರು ಅವನಿಗೆ; “ಇಲ್ಲ, ಪವಿತ್ರಾತ್ಮವರವು ಉಂಟೆಂಬುದನ್ನೇ ನಾವು ಕೇಳಿಲ್ಲ” ಅಂದರು.
3 ಅವನು; “ನೀವು ಏನನ್ನು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡಿರಿ” ಎಂದು ಕೇಳಿದ್ದಕ್ಕೆ ಅವರು; “ಯೋಹಾನನ ಬೋಧನೆಯನ್ನು ನಂಬಿ ದೀಕ್ಷಾಸ್ನಾನಮಾಡಿಸಿಕೊಂಡೆವು” ಅಂದರು.
4 ಅದಕ್ಕೆ ಪೌಲನು; “ಯೋಹಾನನು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡವರಿಗೆ ದೀಕ್ಷಾಸ್ನಾನ ಮಾಡಿಸಿ ತನ್ನ ಹಿಂದೆ ಬರುವ ಯೇಸುವಿನಲ್ಲಿ ನಂಬಿಕೆಯಿಡಬೇಕೆಂಬುದಾಗಿ ಜನರಿಗೆ ಹೇಳಿದನು” ಎಂದು ಹೇಳಲು,
5 ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡರು.
ಅ. ಕೃ. 19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019