Text copied!
Bibles in Kannada

ಅ. ಕೃ. 19:19-25 in Kannada

Help us?

ಅ. ಕೃ. 19:19-25 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇದಲ್ಲದೆ ಮಾಟ ಮಂತ್ರಗಳನ್ನು ನಡಿಸಿದವರಲ್ಲಿ ಅನೇಕರು ತಮ್ಮ ಮಾಟಮಂತ್ರಗಳ ಪುಸ್ತಕಗಳನ್ನು ತಂದು, ಕೂಡಿಸಿ ಎಲ್ಲರ ಮುಂದೆ ಸುಟ್ಟುಬಿಟ್ಟರು. ಅವುಗಳ ಮೌಲ್ಯವನ್ನು ಲೆಕ್ಕಮಾಡಿ ಐವತ್ತು ಸಾವಿರ ಬೆಳ್ಳಿ ನಾಣ್ಯ ಆಯಿತೆಂದು ತಿಳಿದುಕೊಂಡರು.
20 ಈ ರೀತಿಯಾಗಿ ಕರ್ತನ ವಾಕ್ಯವು ಬಹಳವಾಗಿ ಹೆಚ್ಚುತ್ತಾ ಪ್ರಬಲವಾಯಿತು.
21 ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ, ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇಮಿಗೆ ಹೋಗಬೇಕೆಂದು ಮನಸ್ಸಿನಲ್ಲಿ ಯೋಚಿಸಿ; “ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು” ಹೇಳಿದನು.
22 ಆದರೆ ಅವನು ತನಗೆ ಸೇವೆಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಮತ್ತು ಎರಸ್ತನನ್ನೂ ಮಕೆದೋನ್ಯಕ್ಕೆ ಕಳುಹಿಸಿ ತಾನು ಆಸ್ಯಸೀಮೆಯಲ್ಲಿ ಕೆಲವು ಕಾಲ ತಂಗಿದನು.
23 ಆ ಕಾಲದಲ್ಲಿ ಈ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.
24 ಹೇಗೆಂದರೆ, ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಅರ್ತೆಮೀ ದೇವಿಯ ಗುಡಿಯಂತೆ ಸಣ್ಣಸಣ್ಣ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸುಬಿನವರಿಗೆ ಬಹಳ ಲಾಭವನ್ನು ಕೊಡುತ್ತಿದ್ದನು.
25 ಅವನು ಅವರನ್ನೂ ಮತ್ತು ಆ ಕಸುಬಿಗೆ ಸಂಬಂಧಪಟ್ಟ ಕೆಲಸದವರನ್ನೂ ಒಟ್ಟಿಗೆ ಕರೆಸಿ ಅವರಿಗೆ; “ಜನರೇ, ಈ ಕೆಲಸದಿಂದ ನಮಗೆ ಐಶ್ವರ್ಯ ಉಂಟಾಗುತ್ತದೆಂದು ನೀವು ಬಲ್ಲಿರಿ.
ಅ. ಕೃ. 19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019