Text copied!
Bibles in Kannada

ಅ. ಕೃ. 19:24-28 in Kannada

Help us?

ಅ. ಕೃ. 19:24-28 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಹೇಗೆಂದರೆ, ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಅರ್ತೆಮೀ ದೇವಿಯ ಗುಡಿಯಂತೆ ಸಣ್ಣಸಣ್ಣ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸುಬಿನವರಿಗೆ ಬಹಳ ಲಾಭವನ್ನು ಕೊಡುತ್ತಿದ್ದನು.
25 ಅವನು ಅವರನ್ನೂ ಮತ್ತು ಆ ಕಸುಬಿಗೆ ಸಂಬಂಧಪಟ್ಟ ಕೆಲಸದವರನ್ನೂ ಒಟ್ಟಿಗೆ ಕರೆಸಿ ಅವರಿಗೆ; “ಜನರೇ, ಈ ಕೆಲಸದಿಂದ ನಮಗೆ ಐಶ್ವರ್ಯ ಉಂಟಾಗುತ್ತದೆಂದು ನೀವು ಬಲ್ಲಿರಿ.
26 ಆದರೆ ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲವೆಂದು ಆ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಹೆಚ್ಚುಕಡಿಮೆ ಆಸ್ಯಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿಬಿಟ್ಟಿದ್ದಾನೆ ಎಂಬುದನ್ನು ನೀವು ನೋಡುತ್ತಿದ್ದೀರಿ, ಕೇಳುತ್ತಿದ್ದೀರಿ.
27 ಇದರಿಂದ ನಮ್ಮ ಉದ್ಯೋಗಕ್ಕೆ ಕುಂದು ಬರುವುದಲ್ಲದೆ ಅರ್ತೆಮೀ ಮಹಾದೇವಿಯ ದೇವಸ್ಥಾನವು ಗಣನೆಗೆ ಬಾರದೆಹೋಗುವ ಹಾಗೆಯೂ, ಎಲ್ಲಾ ಆಸ್ಯಸೀಮೆಯೂ, ಲೋಕವೆಲ್ಲಾ ಪೂಜಿಸುವ ಈ ದೇವಿಯ ವೈಭವಕ್ಕೆ ಹಾನಿಬರುವ ಹಾಗೆ ಗಂಡಾಂತರವುಂಟಾಗುತ್ತದೆಂದು” ಹೇಳಿದನು.
28 ಅವರು ಈ ಮಾತುಗಳನ್ನು ಕೇಳಿ ಕೋಪಗೊಂಡು; “ಎಫೆಸದವರ ಅರ್ತೆಮೀದೇವಿ ಮಹಾದೇವಿ” ಎಂದು ಅರ್ಭಟಿಸಿದರು.
ಅ. ಕೃ. 19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019