Text copied!
Bibles in Kannada

ಅ. ಕೃ. 19:27-31 in Kannada

Help us?

ಅ. ಕೃ. 19:27-31 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಇದರಿಂದ ನಮ್ಮ ಉದ್ಯೋಗಕ್ಕೆ ಕುಂದು ಬರುವುದಲ್ಲದೆ ಅರ್ತೆಮೀ ಮಹಾದೇವಿಯ ದೇವಸ್ಥಾನವು ಗಣನೆಗೆ ಬಾರದೆಹೋಗುವ ಹಾಗೆಯೂ, ಎಲ್ಲಾ ಆಸ್ಯಸೀಮೆಯೂ, ಲೋಕವೆಲ್ಲಾ ಪೂಜಿಸುವ ಈ ದೇವಿಯ ವೈಭವಕ್ಕೆ ಹಾನಿಬರುವ ಹಾಗೆ ಗಂಡಾಂತರವುಂಟಾಗುತ್ತದೆಂದು” ಹೇಳಿದನು.
28 ಅವರು ಈ ಮಾತುಗಳನ್ನು ಕೇಳಿ ಕೋಪಗೊಂಡು; “ಎಫೆಸದವರ ಅರ್ತೆಮೀದೇವಿ ಮಹಾದೇವಿ” ಎಂದು ಅರ್ಭಟಿಸಿದರು.
29 ಆಗ ಊರಿನಲ್ಲೆಲ್ಲಾ ಗಲಿಬಿಲಿಯಾಯಿತು. ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನೂ, ಅರಿಸ್ತಾರ್ಕನನ್ನೂ ಜನರು ಹಿಡಿದುಕೊಂಡು ಒಟ್ಟಾಗಿ ನಾಟಕ ಶಾಲೆಯೊಳಗೆ ನುಗ್ಗಿದರು.
30 ಪೌಲನು ಜನರೊಳಗೆ ನುಗ್ಗಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ.
31 ಇದಲ್ಲದೆ ಆಸ್ಯಸೀಮೆಯ ಅಧಿಕಾರಿಗಳಲ್ಲಿ ಕೆಲವರು ಪೌಲನ ಸ್ನೇಹಿತರಾಗಿದ್ದುದರಿಂದ ಅವನ ಬಳಿಗೆ ಜನರನ್ನು ಕಳುಹಿಸಿ; ನೀನು ನಾಟಕ ಶಾಲೆಯೊಳಗೆ ಹೋಗ ಬೇಡ ಎಂದು ಬೇಡಿಕೊಂಡರು.
ಅ. ಕೃ. 19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019