Text copied!
Bibles in Kannada

ಅ. ಕೃ. 19:30-37 in Kannada

Help us?

ಅ. ಕೃ. 19:30-37 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಪೌಲನು ಜನರೊಳಗೆ ನುಗ್ಗಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ.
31 ಇದಲ್ಲದೆ ಆಸ್ಯಸೀಮೆಯ ಅಧಿಕಾರಿಗಳಲ್ಲಿ ಕೆಲವರು ಪೌಲನ ಸ್ನೇಹಿತರಾಗಿದ್ದುದರಿಂದ ಅವನ ಬಳಿಗೆ ಜನರನ್ನು ಕಳುಹಿಸಿ; ನೀನು ನಾಟಕ ಶಾಲೆಯೊಳಗೆ ಹೋಗ ಬೇಡ ಎಂದು ಬೇಡಿಕೊಂಡರು.
32 ಜನಸಮೂಹದಲ್ಲಿ ಗೊಂದಲವೆದ್ದಿತು, ಕೆಲವರು ಒಂದು ವಿಧದಲ್ಲಿ ಕೂಗಾಡಿದರೆ ಮತ್ತೆ ಕೆಲವರು ಇನ್ನೊಂದು ವಿಧದಲ್ಲಿ ಕೂಗುತ್ತಿದ್ದರು. ಬಹುಜನರಿಗೆ ತಾವು ಅಲ್ಲಿ ಕೂಡಿ ಬಂದಿದ್ದ ಕಾರಣವು ಗೊತ್ತಿರಲಿಲ್ಲ.
33 ಯೆಹೂದ್ಯರು ಅಲೆಕ್ಸಾಂದ್ರನನ್ನು ಮುಂದಕ್ಕೆ ನೂಕಲು, ಗುಂಪಿನಲ್ಲಿ ಕೆಲವರು ಅವನಿಗೆ ಸೂಚನೆ ಕೊಟ್ಟರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಕೂಡಿದ್ದ ಜನರಿಗೆ ಪ್ರತಿವಾದ ಮಾಡಬೇಕೆಂದಿದ್ದನು.
34 ಆದರೆ ಅವನು ಯೆಹೂದ್ಯನೆಂದು ತಿಳಿದಾಗ ಎಲ್ಲರೂ ಒಂದೇ ಶಬ್ದದಿಂದ; “ಎಫೆಸದವರ ಅರ್ತೆಮೀದೇವಿ ಮಹಾದೇವಿ” ಎಂದು ಎರಡು ಘಂಟೆ ಹೊತ್ತು ಕೂಗಿದರು.
35 ಕೊನೆಗೆ ಪಟ್ಟಣದ ಯಜಮಾನನು ಜನರ ಗುಂಪನ್ನು ಸಮಾಧಾನಪಡಿಸಿ; “ಎಫೆಸದವರೇ, ಎಫೆಸ ಪಟ್ಟಣದವರು ಅರ್ತೆಮೀ ಮಹಾದೇವಿಯ ದೇವಸ್ಥಾನಕ್ಕೂ, ಆಕಾಶದಿಂದ ಬಿದ್ದ ಆಕೆಯ ಮೂರ್ತಿಗೂ, ಪಾಲಕರಾಗಿದ್ದಾರೆಂಬುದನ್ನು ತಿಳಿಯದಿರುವ ಮನುಷ್ಯನು ಯಾವನಿದ್ದಾನೇ?
36 ಈ ಸಂಗತಿ ಅಲ್ಲವೆನ್ನುವುದಕ್ಕೆ ಯಾರಿಂದಲೂ ಆಗದಿರುವುದರಿಂದ ನೀವು ಶಾಂತಿಯಿಂದಿರಬೇಕು; ದುಡುಕಿ ಏನೂ ಮಾಡಬಾರದು.
37 ನೀವು ಹಿಡಿದುತಂದಿರುವ ಈ ಮನುಷ್ಯರು ದೇವಸ್ಥಾನದಲ್ಲಿ ಕಳ್ಳತನ ಮಾಡುವವರಲ್ಲ, ನಮ್ಮ ದೇವಿಯನ್ನು ದೂಷಿಸುವವರೂ ಅಲ್ಲ.
ಅ. ಕೃ. 19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019