Text copied!
Bibles in Kannada

ಅ. ಕೃ. 19:9-15 in Kannada

Help us?

ಅ. ಕೃ. 19:9-15 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಕೆಲವರು ತಮ್ಮ ಮನಸ್ಸುಗಳನ್ನು ಕಠಿಣಮಾಡಿಕೊಂಡು ಒಡಂಬಡದೆ ಗುಂಪುಕೂಡಿದ ಜನರ ಮುಂದೆ ಈ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟುಹೋಗಿ ಶಿಷ್ಯರನ್ನು ಬೇರೆಮಾಡಿ ತುರನ್ನ ಎಂಬುವನ ತರ್ಕಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.
10 ಇದು ಎರಡು ವರ್ಷಗಳ ವರೆಗೂ ನಡೆದಿದ್ದರಿಂದ ಅಸ್ಯಸೀಮೆಯಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರೂ, ಗ್ರೀಕರೂ, ಕರ್ತನ ವಾಕ್ಯವನ್ನು ಕೇಳಿದರು.
11 ದೇವರು ಪೌಲನ ಕೈಯಿಂದ ವಿಶೇಷವಾದ ಮಹತ್ಕಾರ್ಯಗಳನ್ನು ನಡಿಸುತ್ತಾ ಇದ್ದುದರಿಂದ,
12 ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ, ರುಮಾಲುಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರ ರೋಗಗಳು ವಾಸಿಯಾದವು, ದುರಾತ್ಮಗಳೂ ಬಿಟ್ಟುಹೋದವು.
13 ದುರಾತ್ಮಗಳನ್ನೂ ಬಿಡಿಸುವವರೆನಿಸಿಕೊಂಡು, ದೇಶಸಂಚಾರಿಗಳಾದ ಯೆಹೂದ್ಯರಿದ್ದರು. ಅವರಲ್ಲಿ ಕೆಲವರು ದುರಾತ್ಮ ಪೀಡಿತರ ಮೇಲೆ; “ಪೌಲನು ಸಾರುವ ಯೇಸುವಿನ ಆಣೆ” ಎಂದು ಹೇಳಿ ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗಮಾಡುವುದಕ್ಕೆ ತೊಡಗಿದರು.
14 ಮುಖ್ಯಯಾಜಕ ಸ್ಕೇವನೆಂಬ ಒಬ್ಬ ಯೆಹೂದ್ಯನ ಏಳು ಮಂದಿ ಮಕ್ಕಳೂ ಹಾಗೆ ಮಾಡುತ್ತಿದ್ದರು.
15 ಆದರೆ ದುರಾತ್ಮವು ಅವರಿಗೆ; “ಯೇಸುವಿನ ಗುರುತು ನನಗುಂಟು, ಪೌಲನನ್ನೂ ಬಲ್ಲೆನು, ಆದರೆ ನೀವು ಯಾರು?” ಎಂದು ಹೇಳಿತು;
ಅ. ಕೃ. 19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019