Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 1

ಅ. ಕೃ. 1:11-26

Help us?
Click on verse(s) to share them!
11“ಗಲಿಲಾಯದವರೇ, ನೀವು ಏಕೆ ಹೀಗೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಗೆ ಸೇರಿಸಲ್ಪಟ್ಟಿರುವ ಈ ಯೇಸುವು ಯಾವ ರೀತಿಯಲ್ಲಿ ಆಕಾಶದೊಳಗೆ ಹೋಗಿರುವುದನ್ನು ನೀವು ಕಂಡಿರೋ ಹಾಗೆಯೇ ಆತನು ಹಿಂತಿರುಗಿ ಬರುವನು” ಎಂದು ಹೇಳಿದರು.
12ಆಗ ಅವರು ಆಲೀವ್ ಮರಗಳ ಗುಡ್ಡದಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದರು. ಆ ಗುಡ್ಡಕ್ಕೂ ಯೆರೂಸಲೇಮಿಗೂ ಸಬ್ಬತ್ ದಿನದಲ್ಲಿ ಪ್ರಯಾಣಮಾಡುವಷ್ಟು ದೂರವಿತ್ತು.
13ಅವರು ಅಲ್ಲಿಗೆ ಬಂದು ತಾವು ವಾಸಮಾಡುತ್ತಿದ್ದ ಮೇಲಂತಸ್ತಿಗೆ ಹೋದರು; ಅವರು ಯಾರಾರೆಂದರೆ, ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಾಕೋಬ, ಮತಾಭಿಮಾನಿ ಎನಿಸಿಕೊಂಡ ಸೀಮೋನ, ಯಾಕೋಬನ ಸಹೋದರನಾದ ಯೂದ, ಇವರೇ.
14ಅಲ್ಲಿ ಕೆಲವು ಮಂದಿ ಸ್ತ್ರೀಯರೂ, ಯೇಸುವಿನ ತಾಯಿಯಾದ ಮರಿಯಳೂ, ಆತನ ತಮ್ಮಂದಿರೂ ಅವರ ಸಂಗಡ ಇದ್ದರು, ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗಿದ್ದರು.
15ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗೆಂದನು,
16“ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವುದು ಅವಶ್ಯವಾಗಿತ್ತು.
17ಯೂದನು ನಮ್ಮೊಂದಿಗೆ ಸೇರಿ ಈ ಸೇವೆಯಲ್ಲಿ ಪಾಲು ಹೊಂದಿದವನಾಗಿದ್ದನು.”
18(ಈ ಮನುಷ್ಯನು ತನ್ನ ದ್ರೋಹದ ಪ್ರತಿಫಲವಾಗಿ ಹೊಲವನ್ನು ಪಡೆದನು ಮತ್ತು ತಲೆಕೆಳಗಾಗಿ ಬಿದ್ದು ಹೊಟ್ಟೆ ಒಡೆದು ಕರುಳುಗಳೆಲ್ಲಾ ಹೊರಗೆ ಚೆಲ್ಲಿದವು.
19ಇದು ಯೆರೂಸಲೇಮ್ ಪಟ್ಟಣದ ನಿವಾಸಿಗಳಿಗೆಲ್ಲಾ ತಿಳಿದುಬಂದುದರಿಂದ ಆ ಹೊಲಕ್ಕೆ ಅವರ ಭಾಷೆಯಲ್ಲಿ ‘ಅಕೆಲ್ದಾಮಾ,’ ಅಂದರೆ ರಕ್ತದ ಹೊಲ ಎಂಬ ಹೆಸರು ಬಂದಿತು.)
20ಅವನ ವಿಷಯವಾಗಿ, ಅವನ ಮನೆ ಹಾಳಾಗಲಿ, ಅದು ಜನರಿಲ್ಲದೆ ಪಾಳುಬೀಳಲಿ ಎಂತಲೂ ಅವನ ನಾಯಕತ್ವದ ಹುದ್ದೆಯು ಮತ್ತೊಬ್ಬನಿಗಾಗಲಿ ಎಂತಲೂ ಕೀರ್ತನೆಗಳ ಗ್ರಂಥದಲ್ಲಿ ಬರೆದಿದೆಯಲ್ಲಾ.
21ಆದುದರಿಂದ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದಕಾಲವೆಲ್ಲಾ, ಅಂದರೆ ಯೋಹಾನನು ದೀಕ್ಷಾಸ್ನಾನ ಮಾಡಿಸಿದ್ದು ಮೊದಲುಗೊಂಡು ಯೇಸು ನಮ್ಮ ಬಳಿಯಿಂದ ಪರಲೋಕವನ್ನೇರಿ ಹೋದ ದಿನದ ವರೆಗೂ ನಮ್ಮ ಜೊತೆಯಲ್ಲಿದ್ದವರೊಳಗೆ ಒಬ್ಬನು ನಮ್ಮೊಂದಿಗೆ ಆತನ ಪುನರುತ್ಥಾನದ ವಿಷಯದಲ್ಲಿ ಸಾಕ್ಷಿಹೇಳುವವನಾಗಬೇಕು ಅಂದನು
23ಈ ಮಾತುಗಳನ್ನು ಕೇಳಿ ಅವರು ಯೂಸ್ತನೆನಿಸಿಕೊಳ್ಳುವ ಬಾರ್ನಬನೆಂಬ ಯೋಸೇಫನನ್ನೂ ಮತ್ತೀಯನನ್ನೂ ನಿಲ್ಲಿಸಿ,
24“ಕರ್ತನೇ, ಎಲ್ಲರ ಹೃದಯವನ್ನು ಬಲ್ಲಾತನೇ, ಯೂದನು ಅಪೊಸ್ತಲತನವೆಂಬ ಈ ಸೇವಾಸ್ಥಾನದಿಂದ ಭ್ರಷ್ಟನಾಗಿ ತಾನು ಹೋಗ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ ಆ ಸ್ಥಾನವನ್ನು ಹೊಂದುವುದಕ್ಕೆ ಈ ಇಬ್ಬರಲ್ಲಿ ನೀನು ಆರಿಸಿ ಕೊಂಡವನನ್ನು ತೋರಿಸಿಕೊಡು” ಎಂದು ಪ್ರಾರ್ಥಿಸಿದರು.
26ಆನಂತರ ಅವರಿಗೋಸ್ಕರ ಚೀಟುಹಾಕಿದರು; ಚೀಟು ಮತ್ತೀಯನ ಪರವಾಗಿ ಬಿದ್ದುದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಸೇರಿಕೊಂಡನು.

Read ಅ. ಕೃ. 1ಅ. ಕೃ. 1
Compare ಅ. ಕೃ. 1:11-26ಅ. ಕೃ. 1:11-26