Text copied!
Bibles in Kannada

ಅ. ಕೃ. 1:12-18 in Kannada

Help us?

ಅ. ಕೃ. 1:12-18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ಅವರು ಆಲೀವ್ ಮರಗಳ ಗುಡ್ಡದಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದರು. ಆ ಗುಡ್ಡಕ್ಕೂ ಯೆರೂಸಲೇಮಿಗೂ ಸಬ್ಬತ್ ದಿನದಲ್ಲಿ ಪ್ರಯಾಣಮಾಡುವಷ್ಟು ದೂರವಿತ್ತು.
13 ಅವರು ಅಲ್ಲಿಗೆ ಬಂದು ತಾವು ವಾಸಮಾಡುತ್ತಿದ್ದ ಮೇಲಂತಸ್ತಿಗೆ ಹೋದರು; ಅವರು ಯಾರಾರೆಂದರೆ, ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಾಕೋಬ, ಮತಾಭಿಮಾನಿ ಎನಿಸಿಕೊಂಡ ಸೀಮೋನ, ಯಾಕೋಬನ ಸಹೋದರನಾದ ಯೂದ, ಇವರೇ.
14 ಅಲ್ಲಿ ಕೆಲವು ಮಂದಿ ಸ್ತ್ರೀಯರೂ, ಯೇಸುವಿನ ತಾಯಿಯಾದ ಮರಿಯಳೂ, ಆತನ ತಮ್ಮಂದಿರೂ ಅವರ ಸಂಗಡ ಇದ್ದರು, ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗಿದ್ದರು.
15 ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗೆಂದನು,
16 “ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವುದು ಅವಶ್ಯವಾಗಿತ್ತು.
17 ಯೂದನು ನಮ್ಮೊಂದಿಗೆ ಸೇರಿ ಈ ಸೇವೆಯಲ್ಲಿ ಪಾಲು ಹೊಂದಿದವನಾಗಿದ್ದನು.”
18 (ಈ ಮನುಷ್ಯನು ತನ್ನ ದ್ರೋಹದ ಪ್ರತಿಫಲವಾಗಿ ಹೊಲವನ್ನು ಪಡೆದನು ಮತ್ತು ತಲೆಕೆಳಗಾಗಿ ಬಿದ್ದು ಹೊಟ್ಟೆ ಒಡೆದು ಕರುಳುಗಳೆಲ್ಲಾ ಹೊರಗೆ ಚೆಲ್ಲಿದವು.
ಅ. ಕೃ. 1 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019