Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 20

ಅ. ಕೃ. 20:10-22

Help us?
Click on verse(s) to share them!
10ಆದರೆ ಪೌಲನು ಇಳಿದು ಹೋಗಿ ಅವನ ಮೇಲೆ ಬಿದ್ದು ತಬ್ಬಿಕೊಂಡು; “ಗೋಳಾಡಬೇಡಿರಿ, ಅವನು ಜೀವಂತವಾಗಿದ್ದಾನೆ” ಎಂದು ಹೇಳಿದನು.
11ಆಗ ಅವನು ಮೇಲಕ್ಕೆ ಹೋಗಿ ರೊಟ್ಟಿ ಮುರಿದು ಊಟಮಾಡಿ ಬಹಳ ಹೊತ್ತು ಬೆಳಗಾಗುವ ತನಕ ಮಾತನಾಡಿ ಹೊರಟುಹೋದನು.
12ಅವರು ಜೀವಿತನಾದ ಆ ಹುಡುಗನನ್ನು ಕರೆದುಕೊಂಡು ಬರಲು ಅವರಿಗೆ ಬಹಳ ಸಮಾಧಾನವಾಯಿತು.
13ನಾವು ಮೊದಲೇ ಅಲ್ಲಿಗೆ ಹೋಗಿ ಅಸ್ಸೊಸಿನಲ್ಲಿ ಪೌಲನನ್ನು ತಮ್ಮೊಂದಿಗೆ ಹತ್ತಿಸಿಕೊಳ್ಳಬೇಕೆಂದು ಸಮುದ್ರ ಪ್ರಯಾಣಮಾಡಿದೆವು. ಪೌಲನು ಹಾಗೆಯೇ ನಮಗೆ ಅಪ್ಪಣೆ ಮಾಡಿ ತಾನು ಕಾಲುನಡಿಗೆಯಾಗಿ ಹೋಗಬೇಕೆಂದು ಮನಸ್ಸು ಮಾಡಿದ್ದನು.
14ಅಸ್ಸೊಸಿನಲ್ಲಿ ಅವನು ನಮ್ಮನ್ನು ಕೂಡಿಕೊಂಡಾಗ ನಾವು ಅವನನ್ನು ಹಡಗಿನಲ್ಲಿ ಸೇರಿಸಿಕೊಂಡು ಮಿತಿಲೇನೆ ಪಟ್ಟಣಕ್ಕೆ ಹೊರಟೆವು.
15ಅಲ್ಲಿಂದ ಹೊರಟು ಮರುದಿನ ಖೀಯೊಸ್‍ ದ್ವೀಪಕ್ಕೆ ಎದುರಾಗಿ ಬಂದು ಅದರ ಮರುದಿನ ಸಾಮೊಸಿನ ಹತ್ತಿರ ಬಂದೆವು. ಮರುದಿನ ಮಿಲೇತಕ್ಕೆ ಸೇರಿದೆವು.
16ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮ ದಿನದ ಹಬ್ಬಕ್ಕೆ ಯೆರೂಸಲೇಮಿನಲ್ಲಿರಬೇಕೆಂದು ಅವಸರಪಡುತ್ತಾ ಇದ್ದುದರಿಂದ ಆಸ್ಯಸೀಮೆಯಲ್ಲಿ ಕಾಲವನ್ನು ಕಳೆಯುವುದಕ್ಕೆ ಮನಸ್ಸಿಲ್ಲದೆ ಎಫೆಸ ಪಟ್ಟಣವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿಕೊಂಡಿದ್ದನು.
17ಅವನು ಮಿಲೇತದಿಂದ ಎಫೆಸಕ್ಕೆ ಹೇಳಿಕಳುಹಿಸಿ ಅಲ್ಲಿಯ ಸಭೆಯ ಹಿರಿಯರನ್ನು ಕರಿಸಿದನು.
18ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇನಂದರೆ; “ನಾನು ಆಸ್ಯಸೀಮೆಯಲ್ಲಿ ಕಾಲಿಟ್ಟ ಮೊದಲನೆಯ ದಿನದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲಗಳಲ್ಲಿಯೂ ಹೇಗೆ ನಡೆದುಕೊಂಡೆನೆಂಬುದನ್ನು ನೀವೇ ಬಲ್ಲಿರಿ.
19ಯೆಹೂದ್ಯರ ಒಳಸಂಚುಗಳಿಂದ ಸಂಭವಿಸಿದ ಸಂಕಷ್ಟಗಳಲ್ಲಿ, ನಾನು ಅತಿ ನಮ್ರತೆಯಿಂದಲೂ, ಕಣ್ಣೀರಿನಿಂದಲೂ ಕರ್ತನ ಸೇವೆ ಮಾಡುತ್ತಿದ್ದೇನೆ.
20ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳುವುದಕ್ಕೂ, ಸಭೆಯಲ್ಲಿಯೂ, ಮನೆಮನೆಯಲ್ಲಿಯೂ, ಉಪದೇಶಿಸುವದಕ್ಕೂ ಹಿಂತೆಗೆಯದೆ
21ಯೆಹೂದ್ಯರಿಗೂ, ಗ್ರೀಕರಿಗೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ದೃಢವಾಗಿ ಬೋಧಿಸುವವನಾಗಿದ್ದೆನು, ಇದೆಲ್ಲಾ ನಿಮಗೇ ತಿಳಿದಿದೆ.
22ಇಗೋ, ನಾನು ಈಗ ಪವಿತ್ರಾತ್ಮನ ನಿರ್ಬಂಧವುಳ್ಳವನಾಗಿ ಯೆರೂಸಲೇಮಿಗೆ ಹೋಗುತ್ತಿದ್ದೇನೆ. ಅಲ್ಲಿ ನನಗೆ ಏನು ಸಂಭವಿಸುವುದೋ ನಾನರಿಯೆನು.

Read ಅ. ಕೃ. 20ಅ. ಕೃ. 20
Compare ಅ. ಕೃ. 20:10-22ಅ. ಕೃ. 20:10-22