Text copied!
Bibles in Kannada

ಅ. ಕೃ. 20:15-24 in Kannada

Help us?

ಅ. ಕೃ. 20:15-24 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅಲ್ಲಿಂದ ಹೊರಟು ಮರುದಿನ ಖೀಯೊಸ್‍ ದ್ವೀಪಕ್ಕೆ ಎದುರಾಗಿ ಬಂದು ಅದರ ಮರುದಿನ ಸಾಮೊಸಿನ ಹತ್ತಿರ ಬಂದೆವು. ಮರುದಿನ ಮಿಲೇತಕ್ಕೆ ಸೇರಿದೆವು.
16 ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮ ದಿನದ ಹಬ್ಬಕ್ಕೆ ಯೆರೂಸಲೇಮಿನಲ್ಲಿರಬೇಕೆಂದು ಅವಸರಪಡುತ್ತಾ ಇದ್ದುದರಿಂದ ಆಸ್ಯಸೀಮೆಯಲ್ಲಿ ಕಾಲವನ್ನು ಕಳೆಯುವುದಕ್ಕೆ ಮನಸ್ಸಿಲ್ಲದೆ ಎಫೆಸ ಪಟ್ಟಣವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿಕೊಂಡಿದ್ದನು.
17 ಅವನು ಮಿಲೇತದಿಂದ ಎಫೆಸಕ್ಕೆ ಹೇಳಿಕಳುಹಿಸಿ ಅಲ್ಲಿಯ ಸಭೆಯ ಹಿರಿಯರನ್ನು ಕರಿಸಿದನು.
18 ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇನಂದರೆ; “ನಾನು ಆಸ್ಯಸೀಮೆಯಲ್ಲಿ ಕಾಲಿಟ್ಟ ಮೊದಲನೆಯ ದಿನದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲಗಳಲ್ಲಿಯೂ ಹೇಗೆ ನಡೆದುಕೊಂಡೆನೆಂಬುದನ್ನು ನೀವೇ ಬಲ್ಲಿರಿ.
19 ಯೆಹೂದ್ಯರ ಒಳಸಂಚುಗಳಿಂದ ಸಂಭವಿಸಿದ ಸಂಕಷ್ಟಗಳಲ್ಲಿ, ನಾನು ಅತಿ ನಮ್ರತೆಯಿಂದಲೂ, ಕಣ್ಣೀರಿನಿಂದಲೂ ಕರ್ತನ ಸೇವೆ ಮಾಡುತ್ತಿದ್ದೇನೆ.
20 ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳುವುದಕ್ಕೂ, ಸಭೆಯಲ್ಲಿಯೂ, ಮನೆಮನೆಯಲ್ಲಿಯೂ, ಉಪದೇಶಿಸುವದಕ್ಕೂ ಹಿಂತೆಗೆಯದೆ
21 ಯೆಹೂದ್ಯರಿಗೂ, ಗ್ರೀಕರಿಗೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ದೃಢವಾಗಿ ಬೋಧಿಸುವವನಾಗಿದ್ದೆನು, ಇದೆಲ್ಲಾ ನಿಮಗೇ ತಿಳಿದಿದೆ.
22 ಇಗೋ, ನಾನು ಈಗ ಪವಿತ್ರಾತ್ಮನ ನಿರ್ಬಂಧವುಳ್ಳವನಾಗಿ ಯೆರೂಸಲೇಮಿಗೆ ಹೋಗುತ್ತಿದ್ದೇನೆ. ಅಲ್ಲಿ ನನಗೆ ಏನು ಸಂಭವಿಸುವುದೋ ನಾನರಿಯೆನು.
23 ನಿನಗೆ ಬೇಡಿಗಳೂ, ಹಿಂಸೆಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಎಲ್ಲಾ ಪಟ್ಟಣಗಳಲ್ಲಿಯೂ ನನಗೆ ಎಚ್ಚರಿಕೆ ನೀಡಿದ್ದಾನೆ ಎಂಬುದನ್ನು ಬಲ್ಲೆನು.
24 ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ.
ಅ. ಕೃ. 20 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019