Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 20

ಅ. ಕೃ. 20:24-32

Help us?
Click on verse(s) to share them!
24ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ.
25ಇಗೋ, ಇಷ್ಟು ದಿನ ನಿಮ್ಮಲ್ಲಿ ಸಂಚಾರಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ನೋಡುವುದಿಲ್ಲವೆಂದು ಬಲ್ಲೆನು.
26ಆದಕಾರಣ ನಾನು ಈ ಹೊತ್ತು ಖಂಡಿತವಾಗಿ ಹೇಳುತ್ತೇನೆ, ನಿಮ್ಮಲ್ಲಿ ಯಾರಾದರೂ ನಾಶವಾದರೆ ಅದು ನನ್ನ ತಪ್ಪಿನಿಂದಲ್ಲ.
27ಏಕೆಂದರೆ ಒಂದನ್ನೂ ಮರೆಮಾಡದೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ತಿಳಿಸಿದ್ದೇನೆ.
28ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
29ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವುದೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸುವುದಿಲ್ಲ.
30ಇದಲ್ಲದೆ ನಿಮ್ಮಲ್ಲೇ ಕೆಲವರು ಎದ್ದು ಅಸತ್ಯವಾದ ಬೋಧನೆಗಳನ್ನು ಮಾಡಿ ಶಿಷ್ಯರನ್ನು ತಮ್ಮ ಕಡೆಗೆ ಎಳೆದುಕೊಳ್ಳುವರು.
31ಆದಕಾರಣ ನಾನು ಕಣ್ಣೀರು ಸುರಿಸುತ್ತಾ ಮೂರು ವರ್ಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿ ಹೇಳಿದೆನೆಂಬುದನ್ನು ನೀವು ನೆನಪಿಸಿಕೊಂಡು ಎಚ್ಚರವಾಗಿರಿ.
32ನಾನೀಗ ನಿಮ್ಮನ್ನು ದೇವರಿಗೂ, ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ. ಆತನು ನಿಮ್ಮಲ್ಲಿ ಭಕ್ತಿವೃದ್ಧಿಯನ್ನುಂಟುಮಾಡುವುದಕ್ಕೂ, ಪರಿಶುದ್ಧರೊಂದಿಗೆ ನಿಮಗೆ ಹಕ್ಕನ್ನು ಅನುಗ್ರಹಿಸುವುದಕ್ಕೆ ಶಕ್ತನಾಗಿದ್ದಾನೆ.

Read ಅ. ಕೃ. 20ಅ. ಕೃ. 20
Compare ಅ. ಕೃ. 20:24-32ಅ. ಕೃ. 20:24-32