Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 20

ಅ. ಕೃ. 20:6-19

Help us?
Click on verse(s) to share them!
6ಹುಳಿಯಿಲ್ಲದ ರೊಟ್ಟಿಯ ಹಬ್ಬದ ದಿನಗಳನ್ನು ಪೂರೈಸಿದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿನಗಳಲ್ಲಿ‍ ತ್ರೋವದಲ್ಲಿ ಬಂದು ಅವರನ್ನು ಸೇರಿದೆವು. ಅಲ್ಲಿ ಏಳು ದಿನಗಳ ಕಾಲ ತಂಗಿದ್ದೆವು.
7ವಾರದ ಮೊದಲನೆಯ ದಿನದಲ್ಲಿ ನಾವು ರೊಟ್ಟಿ ಮುರಿಯುವ ನಿಯಮಕ್ಕಾಗಿ ಸೇರಿಬಂದಾಗ ಪೌಲನು ಅಲ್ಲಿ ನೆರೆದಂತಹ ವಿಶ್ವಾಸಿಗಳಿಗೆ ಬೋಧನೆಮಾಡಿದನು. ಮರುದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಬೋಧಿಸುತ್ತಾ ಮಧ್ಯರಾತ್ರಿಯವರೆಗೂ ಉಪನ್ಯಾಸವನ್ನು ನೀಡಿದನು.
8ನಾವು ಕೂಡಿದ್ದ ಮೇಲಂತಸ್ತಿನಲ್ಲಿ ಅನೇಕ ದೀಪಗಳಿದ್ದವು.
9ಯೂತಿಖನೆಂಬ ಒಬ್ಬ ಯೌವನಸ್ಥನು ಕಿಟಿಕಿಯ ಹೊಸ್ತಿಲಿನಲ್ಲಿ ಕುಳಿತುಕೊಂಡು ಗಾಢನಿದ್ರೆಯಿಂದ ತೂಕಡಿಸುತ್ತಿದ್ದನು. ಪೌಲನು ಇನ್ನೂ ಬೋಧನೆ ಮಾಡುತ್ತಾ ಇದ್ದಾಗ ಆ ಯೌವನಸ್ಥನು ಗಾಢವಾದ ನಿದ್ರೆಯಿಂದ ತೂಕಡಿಸಿ ಮೂರನೆಯ ಅಂತಸ್ತಿನಿಂದ ಕೆಳಕ್ಕೆ ಬಿದ್ದುಬಿಟ್ಟನು; ಅವನನ್ನು ಎಬ್ಬಿಸಲು ಹೋದಾಗ ಅವನು ಸತ್ತುಹೋಗಿದ್ದನು.
10ಆದರೆ ಪೌಲನು ಇಳಿದು ಹೋಗಿ ಅವನ ಮೇಲೆ ಬಿದ್ದು ತಬ್ಬಿಕೊಂಡು; “ಗೋಳಾಡಬೇಡಿರಿ, ಅವನು ಜೀವಂತವಾಗಿದ್ದಾನೆ” ಎಂದು ಹೇಳಿದನು.
11ಆಗ ಅವನು ಮೇಲಕ್ಕೆ ಹೋಗಿ ರೊಟ್ಟಿ ಮುರಿದು ಊಟಮಾಡಿ ಬಹಳ ಹೊತ್ತು ಬೆಳಗಾಗುವ ತನಕ ಮಾತನಾಡಿ ಹೊರಟುಹೋದನು.
12ಅವರು ಜೀವಿತನಾದ ಆ ಹುಡುಗನನ್ನು ಕರೆದುಕೊಂಡು ಬರಲು ಅವರಿಗೆ ಬಹಳ ಸಮಾಧಾನವಾಯಿತು.
13ನಾವು ಮೊದಲೇ ಅಲ್ಲಿಗೆ ಹೋಗಿ ಅಸ್ಸೊಸಿನಲ್ಲಿ ಪೌಲನನ್ನು ತಮ್ಮೊಂದಿಗೆ ಹತ್ತಿಸಿಕೊಳ್ಳಬೇಕೆಂದು ಸಮುದ್ರ ಪ್ರಯಾಣಮಾಡಿದೆವು. ಪೌಲನು ಹಾಗೆಯೇ ನಮಗೆ ಅಪ್ಪಣೆ ಮಾಡಿ ತಾನು ಕಾಲುನಡಿಗೆಯಾಗಿ ಹೋಗಬೇಕೆಂದು ಮನಸ್ಸು ಮಾಡಿದ್ದನು.
14ಅಸ್ಸೊಸಿನಲ್ಲಿ ಅವನು ನಮ್ಮನ್ನು ಕೂಡಿಕೊಂಡಾಗ ನಾವು ಅವನನ್ನು ಹಡಗಿನಲ್ಲಿ ಸೇರಿಸಿಕೊಂಡು ಮಿತಿಲೇನೆ ಪಟ್ಟಣಕ್ಕೆ ಹೊರಟೆವು.
15ಅಲ್ಲಿಂದ ಹೊರಟು ಮರುದಿನ ಖೀಯೊಸ್‍ ದ್ವೀಪಕ್ಕೆ ಎದುರಾಗಿ ಬಂದು ಅದರ ಮರುದಿನ ಸಾಮೊಸಿನ ಹತ್ತಿರ ಬಂದೆವು. ಮರುದಿನ ಮಿಲೇತಕ್ಕೆ ಸೇರಿದೆವು.
16ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮ ದಿನದ ಹಬ್ಬಕ್ಕೆ ಯೆರೂಸಲೇಮಿನಲ್ಲಿರಬೇಕೆಂದು ಅವಸರಪಡುತ್ತಾ ಇದ್ದುದರಿಂದ ಆಸ್ಯಸೀಮೆಯಲ್ಲಿ ಕಾಲವನ್ನು ಕಳೆಯುವುದಕ್ಕೆ ಮನಸ್ಸಿಲ್ಲದೆ ಎಫೆಸ ಪಟ್ಟಣವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿಕೊಂಡಿದ್ದನು.
17ಅವನು ಮಿಲೇತದಿಂದ ಎಫೆಸಕ್ಕೆ ಹೇಳಿಕಳುಹಿಸಿ ಅಲ್ಲಿಯ ಸಭೆಯ ಹಿರಿಯರನ್ನು ಕರಿಸಿದನು.
18ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇನಂದರೆ; “ನಾನು ಆಸ್ಯಸೀಮೆಯಲ್ಲಿ ಕಾಲಿಟ್ಟ ಮೊದಲನೆಯ ದಿನದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲಗಳಲ್ಲಿಯೂ ಹೇಗೆ ನಡೆದುಕೊಂಡೆನೆಂಬುದನ್ನು ನೀವೇ ಬಲ್ಲಿರಿ.
19ಯೆಹೂದ್ಯರ ಒಳಸಂಚುಗಳಿಂದ ಸಂಭವಿಸಿದ ಸಂಕಷ್ಟಗಳಲ್ಲಿ, ನಾನು ಅತಿ ನಮ್ರತೆಯಿಂದಲೂ, ಕಣ್ಣೀರಿನಿಂದಲೂ ಕರ್ತನ ಸೇವೆ ಮಾಡುತ್ತಿದ್ದೇನೆ.

Read ಅ. ಕೃ. 20ಅ. ಕೃ. 20
Compare ಅ. ಕೃ. 20:6-19ಅ. ಕೃ. 20:6-19