Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 21

ಅ. ಕೃ. 21:13-30

Help us?
Click on verse(s) to share them!
13ಅದಕ್ಕೆ ಪೌಲನು; “ನೀವು ದುಃಖಿಸುತ್ತಾ ಏಕೆ ನನ್ನ ಎದೆಯೊಡೆಯುವಂತೆ ಮಾಡುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿಮಿತ್ತವಾಗಿ ಯೆರೂಸಲೇಮಿನಲ್ಲಿ ಬೇಡೀಹಾಕಿಸಿಕೊಳ್ಳುವುದಕ್ಕೆ ಮಾತ್ರವಲ್ಲ ಸಾಯುವುದಕ್ಕೂ ಸಿದ್ಧವಾಗಿದ್ದೇನೆ” ಅಂದನು.
14ಅವನು ಒಪ್ಪದೆ ಇದ್ದುದರಿಂದ; “ಕರ್ತನ ಚಿತ್ತದಂತೆ ಆಗಲಿ” ಎಂದು ಹೇಳಿ ನಾವು ಸುಮ್ಮನಾದೆವು.
15ಆ ದಿನಗಳಾದ ಮೇಲೆ ನಾವು ಚೇತರಿಸಿಕೊಂಡು ಯೆರೂಸಲೇಮಿಗೆ ಹೊರಟೆವು.
16ಕೈಸರೈಯದಿಂದ ಕೆಲವು ಶಿಷ್ಯರು ನಮ್ಮ ಜೊತೆಯಲ್ಲಿ ಬಂದು ನಾವು ಇಳುಕೊಳ್ಳಬೇಕಾಗಿದ್ದವನ ಮನೆಯ ತನಕ ನಮ್ಮನ್ನು ಕರೆದುಕೊಂಡು ಹೋದರು. ಆ ಮನೆಯವನು ಪ್ರಥಮ ಶಿಷ್ಯರಲ್ಲಿ ಒಬ್ಬನಾದ ಕುಪ್ರದೇಶದ ಮ್ನಾಸೋನನೆಂಬವನು.
17ನಾವು ಯೆರೂಸಲೇಮಿಗೆ ಬಂದಾಗ ಸಹೋದರರು ನಮ್ಮನ್ನು ಸಂತೋಷದಿಂದ ಬರಮಾಡಿಕೊಂಡರು.
18ಮರುದಿನ ಪೌಲನು ನಮ್ಮನ್ನು ಕರೆದುಕೊಂಡು ಯಾಕೋಬನ ಬಳಿಗೆ ಹೋದನು. ಸಭೆಯ ಹಿರಿಯರೆಲ್ಲರು ಸಹ ಬಂದರು.
19ಪೌಲನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ ಕಾರ್ಯಗಳನ್ನು ಒಂದೊಂದಾಗಿ ವಿವರಿಸಿದನು.
20ಅವರು ಅದನ್ನು ಕೇಳಿ ದೇವರನ್ನು ಕೊಂಡಾಡಿದರು. ಆಗ ಅವರು ಅವನಿಗೆ; “ಸಹೋದರನೇ, ಯೆಹೂದ್ಯರಲ್ಲಿ ಯೇಸುವನ್ನು ನಂಬಿರುವವರು ಸಾವಿರಾರು ಮಂದಿ ಇದ್ದಾರೆಂಬುದನ್ನು ನೋಡುತ್ತಿದ್ದೀಯಲ್ಲಾ. ಅವರೆಲ್ಲರೂ ಧರ್ಮಶಾಸ್ತ್ರದ ಅಭಿಮಾನಿಗಳಾಗಿದ್ದಾರೆ.
21ನೀನು ಅನ್ಯಜನರ ಮಧ್ಯದಲ್ಲಿ ವಾಸವಾಗಿರುವ ಯೆಹೂದ್ಯರೆಲ್ಲರಿಗೆ; ‘ನಿಮ್ಮ ಮಕ್ಕಳಿಗೆ ಸುನ್ನತಿಮಾಡಿಸಬೇಡಿರಿ, ನಿಮ್ಮ ಆಚಾರಗಳನ್ನು ಅನುಸರಿಸಿ ನಡೆಯಬೇಡಿರಿ ಎಂದು ಹೇಳಿ, ಮೋಶೆಯ ಧರ್ಮವನ್ನು ತ್ಯಜಿಸಬೇಕೆಂಬುದಾಗಿ ಬೋಧಿಸುತ್ತಿರುವೆ’ ಎಂದು ನಿನ್ನ ಕುರಿತಾಗಿ ಹೇಳಿದ್ದಾರೆ.
22ನೀನು ಬಂದಿರುವುದನ್ನು ಅವರು ಹೇಗೂ ತಿಳಿದುಕೊಳ್ಳುವರು. ಹೀಗಿರುವಲ್ಲಿ ನಾವು ಏನು ಮಾಡಬೇಕು?
23ಅದಕಾರಣ ನಾವು ನಿನಗೆ ಹೇಳುವ ಕೆಲಸವನ್ನು ಮಾಡು. ನಮ್ಮಲ್ಲಿ ಶಪಥಮಾಡಿದ ನಾಲ್ಕುಮಂದಿ ಇದ್ದಾರೆ.
24ನೀನು ಅವರನ್ನು ಕರೆದುಕೊಂಡು ಹೋಗಿ, ಅವರೊಡನೆ ನಿನ್ನನ್ನು ಶುದ್ಧಿಮಾಡಿಕೊಂಡು ಅವರು ತಮ್ಮ ಕ್ಷೌರದ ಶಪಥವನ್ನು ತೀರಿಸಿಕೊಳ್ಳುವುದಕ್ಕಾಗಿ, ಆಗುವ ವೆಚ್ಚವನ್ನು ನೀನು ಕೊಡು. ಹೀಗೆ ಮಾಡಿದರೆ ಎಲ್ಲರೂ ನಿನ್ನ ವಿಷಯವಾಗಿ ತಾವು ಕೇಳಿದ ಸುದ್ದಿ ನಿಜವಲ್ಲವೆಂತಲೂ, ನೀನು ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುತ್ತೀ, ಎಂತಲೂ ತಿಳಿದುಕೊಳ್ಳುವರು.
25ಅನ್ಯಜನರಲ್ಲಿ ಯೇಸುವನ್ನು ನಂಬಿರುವವರ ಕುರಿತಾದರೋ, ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ರಕ್ತವನ್ನೂ, ಕತ್ತು ಹಿಸುಕಿ ಕೊಂದದ್ದನ್ನೂ ಅನೈತಿಕತೆಯನ್ನೂ ಬಿಟ್ಟು ದೂರವಾಗಿರಬೇಕೆಂಬುದಾಗಿ ನಾವು ತೀರ್ಮಾನಿಸಿದ ನಿಯಮಗಳನ್ನು ಬರೆದು ಕಳುಹಿಸಿದೆವಲ್ಲಾ” ಎಂದು ಹೇಳಿದರು.
26ಆಗ ಪೌಲನು ಮರುದಿನ ಆ ನಾಲ್ವರೊಡನೆ ಹೋಗಿ ಶುದ್ಧಾಚಾರದ ವಿಧಿಯನ್ನು ನೆರವೇರಿಸಿದನು. ಅನಂತರ ಶುದ್ಧಾಚಾರ ಮುಗಿಯುವ ದಿನವನ್ನು ತಿಳಿಸುವುದಕ್ಕಾಗಿ ದೇವಾಲಯದೊಳಗೆ ಹೋದನು. ಅವರಲ್ಲಿ ಪ್ರತಿಯೊಬ್ಬನಿಗಾಗಿ ಯಾವಾಗ ಬಲಿಯರ್ಪಣೆಯಾಗುವುದೆಂದು ಅಲ್ಲಿ ಸೂಚಿಸಿದನು.
27ಆ ಏಳು ದಿನಗಳು ಮುಗಿಯುತ್ತಿದ್ದಂತೆ ಅಸ್ಯಸೀಮೆಯಿಂದ ಬಂದಿದ್ದ ಯೆಹೂದ್ಯರು ಪೌಲನನ್ನು ದೇವಾಲಯದಲ್ಲಿ ಕಂಡು ಗುಂಪುಕೂಡಿದ ಜನರೆಲ್ಲರನ್ನು ಚದುರಿಸಿ ಅವನನ್ನು ಹಿಡಿದು;
28“ಇಸ್ರಾಯೇಲ್‍ ಜನರೇ, ನಮಗೆ ಸಹಾಯಮಾಡಿರಿ, ನಮ್ಮ ಜನರಿಗೂ, ಧರ್ಮಶಾಸ್ತ್ರಕ್ಕೂ, ಈ ಆಲಯಕ್ಕೂ ವಿರುದ್ಧವಾಗಿ ಎಲ್ಲೆಲ್ಲಿಯೂ, ಎಲ್ಲರಿಗೂ ಬೋಧನೆ ಹೇಳುವ ಆ ಮನುಷ್ಯನು ಇವನೇ. ಇದಲ್ಲದೆ ಇವನು ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆಮಾಡಿದ್ದಾನೆ” ಎಂದು ಕೂಗಿದರು.
29ಮೊದಲು ಅವರು ಎಫೆಸದ ತ್ರೊಫಿಮನನ್ನು ಅವನ ಸಂಗಡ ಪಟ್ಟಣದಲ್ಲಿ ನೋಡಿದ್ದರಿಂದ ಅವನನ್ನು ಪೌಲನು ದೇವಾಲಯದೊಳಗೆ ಕರೆದುಕೊಂಡು ಬಂದನೆಂದು ಭಾವಿಸಿದರು.
30ಆಗ ಪಟ್ಟಣದಲ್ಲೆಲ್ಲಾ ಕೋಲಾಹಲವೆದ್ದಿತು, ಜನರು ಎಲ್ಲಾ ಕಡೆಯಿಂದಲೂ ಓಡಿಬಂದು ಸೇರಿಕೊಂಡರು. ಪೌಲನನ್ನು ಹಿಡಿದು, ದೇವಾಲಯದ ಹೊರಗಡೆಗೆ ಎಳೆದುಕೊಂಡು ಬಂದ ಕೂಡಲೇ ಬಾಗಿಲುಗಳನ್ನು ಮುಚ್ಚಿದರು.

Read ಅ. ಕೃ. 21ಅ. ಕೃ. 21
Compare ಅ. ಕೃ. 21:13-30ಅ. ಕೃ. 21:13-30