Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 21

ಅ. ಕೃ. 21:14-23

Help us?
Click on verse(s) to share them!
14ಅವನು ಒಪ್ಪದೆ ಇದ್ದುದರಿಂದ; “ಕರ್ತನ ಚಿತ್ತದಂತೆ ಆಗಲಿ” ಎಂದು ಹೇಳಿ ನಾವು ಸುಮ್ಮನಾದೆವು.
15ಆ ದಿನಗಳಾದ ಮೇಲೆ ನಾವು ಚೇತರಿಸಿಕೊಂಡು ಯೆರೂಸಲೇಮಿಗೆ ಹೊರಟೆವು.
16ಕೈಸರೈಯದಿಂದ ಕೆಲವು ಶಿಷ್ಯರು ನಮ್ಮ ಜೊತೆಯಲ್ಲಿ ಬಂದು ನಾವು ಇಳುಕೊಳ್ಳಬೇಕಾಗಿದ್ದವನ ಮನೆಯ ತನಕ ನಮ್ಮನ್ನು ಕರೆದುಕೊಂಡು ಹೋದರು. ಆ ಮನೆಯವನು ಪ್ರಥಮ ಶಿಷ್ಯರಲ್ಲಿ ಒಬ್ಬನಾದ ಕುಪ್ರದೇಶದ ಮ್ನಾಸೋನನೆಂಬವನು.
17ನಾವು ಯೆರೂಸಲೇಮಿಗೆ ಬಂದಾಗ ಸಹೋದರರು ನಮ್ಮನ್ನು ಸಂತೋಷದಿಂದ ಬರಮಾಡಿಕೊಂಡರು.
18ಮರುದಿನ ಪೌಲನು ನಮ್ಮನ್ನು ಕರೆದುಕೊಂಡು ಯಾಕೋಬನ ಬಳಿಗೆ ಹೋದನು. ಸಭೆಯ ಹಿರಿಯರೆಲ್ಲರು ಸಹ ಬಂದರು.
19ಪೌಲನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ ಕಾರ್ಯಗಳನ್ನು ಒಂದೊಂದಾಗಿ ವಿವರಿಸಿದನು.
20ಅವರು ಅದನ್ನು ಕೇಳಿ ದೇವರನ್ನು ಕೊಂಡಾಡಿದರು. ಆಗ ಅವರು ಅವನಿಗೆ; “ಸಹೋದರನೇ, ಯೆಹೂದ್ಯರಲ್ಲಿ ಯೇಸುವನ್ನು ನಂಬಿರುವವರು ಸಾವಿರಾರು ಮಂದಿ ಇದ್ದಾರೆಂಬುದನ್ನು ನೋಡುತ್ತಿದ್ದೀಯಲ್ಲಾ. ಅವರೆಲ್ಲರೂ ಧರ್ಮಶಾಸ್ತ್ರದ ಅಭಿಮಾನಿಗಳಾಗಿದ್ದಾರೆ.
21ನೀನು ಅನ್ಯಜನರ ಮಧ್ಯದಲ್ಲಿ ವಾಸವಾಗಿರುವ ಯೆಹೂದ್ಯರೆಲ್ಲರಿಗೆ; ‘ನಿಮ್ಮ ಮಕ್ಕಳಿಗೆ ಸುನ್ನತಿಮಾಡಿಸಬೇಡಿರಿ, ನಿಮ್ಮ ಆಚಾರಗಳನ್ನು ಅನುಸರಿಸಿ ನಡೆಯಬೇಡಿರಿ ಎಂದು ಹೇಳಿ, ಮೋಶೆಯ ಧರ್ಮವನ್ನು ತ್ಯಜಿಸಬೇಕೆಂಬುದಾಗಿ ಬೋಧಿಸುತ್ತಿರುವೆ’ ಎಂದು ನಿನ್ನ ಕುರಿತಾಗಿ ಹೇಳಿದ್ದಾರೆ.
22ನೀನು ಬಂದಿರುವುದನ್ನು ಅವರು ಹೇಗೂ ತಿಳಿದುಕೊಳ್ಳುವರು. ಹೀಗಿರುವಲ್ಲಿ ನಾವು ಏನು ಮಾಡಬೇಕು?
23ಅದಕಾರಣ ನಾವು ನಿನಗೆ ಹೇಳುವ ಕೆಲಸವನ್ನು ಮಾಡು. ನಮ್ಮಲ್ಲಿ ಶಪಥಮಾಡಿದ ನಾಲ್ಕುಮಂದಿ ಇದ್ದಾರೆ.

Read ಅ. ಕೃ. 21ಅ. ಕೃ. 21
Compare ಅ. ಕೃ. 21:14-23ಅ. ಕೃ. 21:14-23