Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 21

ಅ. ಕೃ. 21:30-40

Help us?
Click on verse(s) to share them!
30ಆಗ ಪಟ್ಟಣದಲ್ಲೆಲ್ಲಾ ಕೋಲಾಹಲವೆದ್ದಿತು, ಜನರು ಎಲ್ಲಾ ಕಡೆಯಿಂದಲೂ ಓಡಿಬಂದು ಸೇರಿಕೊಂಡರು. ಪೌಲನನ್ನು ಹಿಡಿದು, ದೇವಾಲಯದ ಹೊರಗಡೆಗೆ ಎಳೆದುಕೊಂಡು ಬಂದ ಕೂಡಲೇ ಬಾಗಿಲುಗಳನ್ನು ಮುಚ್ಚಿದರು.
31ಅವರು ಅವನನ್ನು ಕೊಲ್ಲುವುದಕ್ಕೆ ಯತ್ನಿಸುತ್ತಿದ್ದಾಗ ಯೆರೂಸಲೇಮಿನಲ್ಲೆಲ್ಲಾ ಗಲಿಬಿಲಿಯಾಯಿತೆಂದು ಪಟಾಲಮಿನ ಸಹಸ್ರಾಧಿಪತಿಗೆ ವರದಿ ಬಂದಿತು.
32ಅವನು ತಕ್ಷಣವೇ ಸಿಪಾಯಿಗಳನ್ನೂ, ಶತಾಧಿಪತಿಗಳನ್ನೂ ತೆಗೆದುಕೊಂಡು ಜನಸಮೂಹದ ಹತ್ತಿರ ಓಡಿಬಂದನು. ಅವರು ಸಹಸ್ರಾಧಿಪತಿಯನ್ನೂ, ಸಿಪಾಯಿಗಳನ್ನೂ ನೋಡಿ ಪೌಲನನ್ನು ಹೊಡೆಯುವುದನ್ನು ಬಿಟ್ಟರು.
33ಸಹಸ್ರಾಧಿಪತಿಯು ಹತ್ತಿರಕ್ಕೆ ಬಂದು ಅವನನ್ನು ಹಿಡಿದು, ಅವನಿಗೆ ಎರಡು ಬೇಡಿಯನ್ನು ಹಾಕಬೇಕೆಂದು ಅಪ್ಪಣೆಕೊಟ್ಟು;
34ಇವನಾರು? ಏನು ಮಾಡಿದ್ದಾನೆ? ಎಂದು ಕೇಳಲು ಕೆಲವರು ಹೀಗೆ, ಕೆಲವರು ಹಾಗೆ ಕೂಗುತ್ತಿರಲು ಗದ್ದಲದ ನಿಮಿತ್ತ ನಿಜ ಸ್ಥಿತಿಯನ್ನು ತಿಳಿಯಲಾರದೆ ಅವನನ್ನು ಕೋಟೆಯೊಳಗೆ ತೆಗೆದುಕೊಂಡು ಹೋಗಿರೆಂದು ಅಪ್ಪಣೆಕೊಟ್ಟನು.
35ಪೌಲನು ಮೆಟ್ಟಿಲುಗಳ ಮೇಲೆ ಬಂದಾಗ ಜನರ ನೂಕಾಟದ ನಿಮಿತ್ತ ಸಿಪಾಯಿಗಳು ಅವನನ್ನು ಹೊತ್ತುಕೊಂಡು ಹೋಗಬೇಕಾಯಿತು.
36ಏಕೆಂದರೆ, ಗುಂಪಾಗಿ ಕೂಡಿದ ಜನರು ಹಿಂದಿನಿಂದ ಬಂದು; “ಅವನನ್ನು ಕೊಲ್ಲಿರಿ” ಎಂದು ಕೂಗುತ್ತಾ ಬೆನ್ನಟ್ಟಿ ಬರುತ್ತಿದ್ದರು.
37ಪೌಲನನ್ನು ಕೋಟೆಯೊಳಗೆ ಕರೆದುಕೊಂಡು ಹೋಗುವುದರೊಳಗಾಗಿ ಅವನು ಆ ಸಹಸ್ರಾಧಿಪತಿಗೆ, “ನಿನಗೆ ಒಂದು ಮಾತು ಹೇಳುವುದಕ್ಕೆ ನನಗೆ ಅಪ್ಪಣೆ ಇದೆಯೋ”? ಎಂದು ಕೇಳಲು ಅವನು; “ಗ್ರೀಕ್ ಭಾಷೆ ನಿನಗೆ ಬರುತ್ತದೋ?
38ಕೆಲವು ದಿನಗಳ ಹಿಂದೆ ದಂಗೆ ಎಬ್ಬಿಸಿ ಆ ನಾಲ್ಕು ಸಾವಿರ ಮಂದಿ ಘಾತಕರನ್ನು ಅಡವಿಗೆ ಕರೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೇ” ಎಂದು ಕೇಳಿದನು.
39ಅದಕ್ಕೆ ಪೌಲನು; ನಾನು ಯೆಹೂದ್ಯನು, ತಾರ್ಸದವನು, ಕಿಲಿಕ್ಯಸೀಮೆಯ ಪ್ರಖ್ಯಾತವಾದ ಪಟ್ಟಣದವನು. ಈ ಜನರಿಗೆ ಕೆಲವು ಮಾತುಗಳನ್ನು ಹೇಳುವುದಕ್ಕೆ ನನಗೆ ಅಪ್ಪಣೆಯಾಗಬೇಕೆಂದು ಕೇಳಿಕೊಳ್ಳುತ್ತೇನೆ ಅಂದನು.
40ಸಹಸ್ರಾಧಿಪತಿಯು ಅಪ್ಪಣೆ ಕೊಡಲು, ಪೌಲನು ಮೆಟ್ಟಿಲುಗಳ ಮೇಲೆ ನಿಂತುಕೊಂಡು, ಜನರಿಗೆ ಕೈಸನ್ನೆ ಮಾಡಿದನು. ಗದ್ದಲವು ಬಹಳ ಮಟ್ಟಿಗೆ ಶಾಂತವಾದ ಮೇಲೆ ಅವನು ಇಬ್ರಿಯ ಭಾಷೆಯಲ್ಲಿ ಮಾತನಾಡಲು ಪ್ರಾರಂಭಿಸಿದನು.,

Read ಅ. ಕೃ. 21ಅ. ಕೃ. 21
Compare ಅ. ಕೃ. 21:30-40ಅ. ಕೃ. 21:30-40