Text copied!
Bibles in Kannada

ಅ. ಕೃ. 21:7-11 in Kannada

Help us?

ಅ. ಕೃ. 21:7-11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾವು ತೂರ್ ಪಟ್ಟಣದಿಂದ ಹೊರಟು ಪ್ತೊಲೆಮಾಯಕ್ಕೆ ಸೇರಿ ಸಮುದ್ರಪ್ರಯಾಣವನ್ನು ಮುಗಿಸಿದೆವು. ಅಲ್ಲಿದ್ದ ಸಹೋದರರನ್ನು ವಂದಿಸಿ ಅವರ ಬಳಿಯಲ್ಲಿ ಒಂದು ದಿನ ಇದ್ದು,
8 ಮರುದಿನ ಹೊರಟು ಕೈಸರೈಯಕ್ಕೆ ಬಂದು, ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನ ಬಳಿಯಲ್ಲಿಯೇ ಇಳುಕೊಂಡೆವು. ಅವನು ಆ ಏಳು ಮಂದಿಯಲ್ಲಿ ಒಬ್ಬನಾಗಿದ್ದನು.
9 ಅವನಿಗೆ ಕನ್ಯೆಯರಾದ ನಾಲ್ಕುಮಂದಿ ಹೆಣ್ಣು ಮಕ್ಕಳಿದ್ದರು; ಅವರು ಪ್ರವಾದಿಸುವವರಾಗಿದ್ದರು.
10 ನಾವು ಅಲ್ಲಿ ಅನೇಕ ದಿನಗಳು ಇದ್ದ ನಂತರ, ಅಗಬನೆಂಬ ಒಬ್ಬ ಪ್ರವಾದಿಯು ಯೂದಾಯದಿಂದ ನಮ್ಮ ಬಳಿಗೆ ಬಂದು, ಪೌಲನ ನಡುಕಟ್ಟನ್ನು ತೆಗೆದು,
11 ತನ್ನ ಕೈಕಾಲುಗಳನ್ನು ಕಟ್ಟಿಕೊಂಡು; “ಈ ನಡುಕಟ್ಟು ಯಾವನದೋ ಅವನನ್ನು ‘ಯೆಹೂದ್ಯರು ಇದೇ ರೀತಿಯಾಗಿ ಯೆರೂಸಲೇಮಿನಲ್ಲಿ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸಿ ಕೊಡುವರು, ಎಂದು ಪವಿತ್ರಾತ್ಮನು ಹೇಳುತ್ತಾನೆಂಬುದಾಗಿ’” ಹೇಳಿದನು.
ಅ. ಕೃ. 21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019