Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 22

ಅ. ಕೃ. 22:15-26

Help us?
Click on verse(s) to share them!
15ನೀನು ಕಂಡು, ಕೇಳಿದ ವಿಷಯದಲ್ಲಿ ಎಲ್ಲಾ ಮನುಷ್ಯರ ಮುಂದೆ ಆತನಿಗೆ ಸಾಕ್ಷಿಯಾಗಿರಬೇಕು.
16ಈಗ ನೀನೇಕೆ ತಡಮಾಡುತ್ತೀ? ಎದ್ದು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೋ’ ಅಂದನು.
17“ಅನಂತರದಲ್ಲಿ ನಾನು ಯೆರೂಸಲೇಮಿಗೆ ಹಿಂತಿರುಗಿ ಬಂದು ದೇವಾಲಯದೊಳಗೆ ಪ್ರಾರ್ಥನೆಮಾಡುತ್ತಿದ್ದಾಗ, ಧ್ಯಾನಪರವಶನಾಗಿ ಅವನನ್ನು ಕಂಡೆನು.
18ಆತನು; ‘ನೀನು ತ್ವರೆಪಟ್ಟು ಬೇಗನೆ ಯೆರೂಸಲೇಮಿನಿಂದ ಹೊರಟುಹೋಗು, ನನ್ನ ವಿಷಯದಲ್ಲಿ, ನೀನು ಹೇಳುವ ಸಾಕ್ಷಿಯನ್ನು ಅವರು ಅಂಗೀಕರಿಸುವುದಿಲ್ಲ’ ಅಂದನು.
19“ಅದಕ್ಕೆ ನಾನು; ‘ಕರ್ತನೇ, ಎಲ್ಲಾ ಸಭಾಮಂದಿರಗಳಲ್ಲಿ, ನಿನ್ನ ಮೇಲೆ ನಂಬಿಕೆಯಿಟ್ಟವರನ್ನು, ನಾನು ಸೆರೆಮನೆಯಲ್ಲಿ ಹಾಕಿಸುತ್ತಾ, ಹೊಡಿಸುತ್ತಾ ಇದ್ದೆನೆಂಬುದನ್ನು,
20ಮತ್ತು ನಿನ್ನ ಸಾಕ್ಷಿಯಾದ ಸ್ತೆಫನನ ರಕ್ತವು ಚೆಲ್ಲಿಸಲ್ಪಟ್ಟಾಗ, ನಾನೂ ಹತ್ತಿರ ನಿಂತು ಅದನ್ನು ಸಮ್ಮತಿಸಿ, ಅವನನ್ನು ಕೊಂದವರ ವಸ್ತ್ರಗಳನ್ನು ಕಾಯುತ್ತಿದ್ದೆನಲ್ಲಾ’ ಎಂಬುದು ಅವರೇ ಬಲ್ಲವರಾಗಿದ್ದಾರೆ.
21ಆದರೆ ಆತನು; ‘ನೀನು ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುತ್ತೇನೆಂದು’” ಹೇಳಿದನು.
22ಅಲ್ಲಿಯವರೆಗೆ ಪೌಲನ ಮಾತುಗಳನ್ನು ಅವರು ಕೇಳಿಸಿಕೊಳ್ಳುತ್ತಿದ್ದರು. ಆನಂತರ; “ಇಂಥವನನ್ನು ಭೂಮಿಯಿಂದ ತೆಗೆದುಹಾಕಿಬಿಡು; ಇವನು ಬದುಕುವುದು ಯುಕ್ತವಲ್ಲವೆಂದು” ಕೂಗಿ ಹೇಳಿದರು.
23ಅವರು ಕೂಗುತ್ತಾ, ತಮ್ಮ ವಸ್ತ್ರಗಳನ್ನು ಹರಿದುಕೊಳ್ಳುತ್ತಾ, ಧೂಳನ್ನು ತೂರುತ್ತಾ ಇರಲಾಗಿ,
24ಯಾವ ಕಾರಣದಿಂದ ಹೀಗೆ ಅವನಿಗೆ ವಿರುದ್ಧವಾಗಿ ಕೂಗಾಡುತ್ತಾರೆಂಬುದನ್ನು ಸಹಸ್ರಾಧಿಪತಿಯು ತಿಳಿದುಕೊಳ್ಳುವುದಕ್ಕಾಗಿ ಅವನನ್ನು ಕೋಟೆಯೊಳಗೆ ತಂದು, ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಆಜ್ಞಾಪಿಸಿದನು.
25ಅವರು ಪೌಲನನ್ನು ಬಾರುಗಳಿಂದ ಕಟ್ಟುವಾಗ ಅವನು ತನ್ನ ಹತ್ತಿರ ನಿಂತಿದ್ದ ಶತಾಧಿಪತಿಯನ್ನು; “ರೋಮಾಪುರದ ಹಕ್ಕುದಾರನಾದ ಮನುಷ್ಯನನ್ನು ನ್ಯಾಯವಿಚಾರಣೆಮಾಡದೆ, ಕೊರಡೆಗಳಿಂದ ಹೊಡಿಸುವುದು ನಿಮಗೆ ನ್ಯಾಯವೋ?” ಎಂದು ಕೇಳಿದನು.
26ಶತಾಧಿಪತಿಯು ಆ ಮಾತನ್ನು ಕೇಳಿ ಸಹಸ್ರಾಧಿಪತಿಯ ಬಳಿಗೆ ಹೋಗಿ; “ನೀನು ಏನು ಮಾಡಬೇಕೆಂದಿದ್ದೀ? ಈ ಮನುಷ್ಯನು ರೋಮಾಪುರದ ಹಕ್ಕುದಾರನು” ಎಂದು ಹೇಳಲು,

Read ಅ. ಕೃ. 22ಅ. ಕೃ. 22
Compare ಅ. ಕೃ. 22:15-26ಅ. ಕೃ. 22:15-26