Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 23

ಅ. ಕೃ. 23:15-32

Help us?
Click on verse(s) to share them!
15ಆದುದರಿಂದ ನೀವು ಸಭೆಯವರ ಸಹಿತ ಸಹಸ್ರಾಧಿಪತಿಯ ಬಳಿಗೆ ಹೋಗಿ, ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ಪರಿಶೀಲಿಸಬೇಕೆಂದು ನೆವಹೇಳಿ ಅವನನ್ನು ಕೋಟೆಯೊಳಗೆ ನಿಮ್ಮ ಬಳಿಗೆ ಕರೆದುಕೊಂಡು ಬರುವ ಹಾಗೆ ಕೇಳಿಕೊಳ್ಳಬೇಕು. ನಾವಾದರೋ, ಅವನು ಹತ್ತಿರ ಬರುವುದಕ್ಕಿಂತ ಮೊದಲೇ ಅವನನ್ನು ಕೊಲ್ಲುವುದಕ್ಕೆ ಸಿದ್ಧವಾಗಿದ್ದೇವೆ” ಅಂದರು.
16ಅವರು ಹೊಂಚು ಹಾಕಿಕೊಂಡಿರುವುದನ್ನು, ಪೌಲನ ಸೋದರಳಿಯನು ಕೇಳಿ ಕೋಟೆಯೊಳಗೆ ಬಂದು ಪೌಲನಿಗೆ ಆ ವಾರ್ತೆಯನ್ನು ತಿಳಿಸಿದನು.
17ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆಯಿಸಿ; “ಈ ಯೌವನಸ್ಥನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ಮಾತು ಇದೆ” ಎಂದು ಹೇಳಿದನು.
18ಶತಾಧಿಪತಿ ಅವನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ; “ಸೆರೆಯವನಾದ ಪೌಲನು ನನ್ನನ್ನು ಕರೆದು ಈ ಯೌವನಸ್ಥನನ್ನು ತಮ್ಮ ಬಳಿಗೆ ಕರೆದುಕೊಂಡು ಹೋಗುವಂತೆ ಬೇಡಿಕೊಂಡನು; ತಮಗೆ ತಿಳಿಸಬೇಕಾದ ಏನೋ ಒಂದು ಮಾತು ಇದೆಯಂತೆ” ಎಂದು ಹೇಳಲು,
19ಸಹಸ್ರಾಧಿಪತಿಯು ಅವನನ್ನು ಕೈಹಿಡಿದು ಒಂದು ಕಡೆಗೆ ಏಕಾಂತವಾಗಿ ಕರೆದುಕೊಂಡು ಹೋಗಿ; “ನೀನು ನನಗೆ ಹೇಳಬೇಕಾದದ್ದು ಏನು?” ಎಂದು ಕೇಳಿದನು.
20ಅವನು; “ಯೆಹೂದ್ಯರು ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ವಿಚಾರಣೆಮಾಡಬೇಕೆಂಬ ನೆವ ಹೇಳಿ ನೀವು ನಾಳೆ ಅವನನ್ನು ಹಿರೀಸಭೆಯ ಮುಂದೆ ಕರೆದು ತರಬೇಕೆಂದು ಕೇಳಿಕೊಳ್ಳುವುದಕ್ಕೆ ಒಪ್ಪಂದ ಮಾಡಿಕೊಂಡಿದ್ದಾರೆ.
21ನೀವು ಅವರ ಮಾತಿಗೆ ಬದ್ಧರಾಗಬೇಡಿ; ಏಕೆಂದರೆ ನಲವತ್ತಕ್ಕಿಂತ ಹೆಚ್ಚು ಮಂದಿ ಯೆಹೊದ್ಯರು ತಾವು ಅವನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥವನ್ನು ಮಾಡಿಕೊಂಡು, ಅವನಿಗೋಸ್ಕರ ಹೊಂಚುಹಾಕುತ್ತಾ ಇದ್ದಾರೆ. ಈಗ ಅವರು ನಿಮ್ಮ ಒಪ್ಪಿಗೆಯನ್ನೇ ಎದುರುನೋಡುತ್ತಾ ಸಿದ್ಧವಾಗಿದ್ದಾರೆ” ಅಂದನು.
22ಆಗ ಸಹಸ್ರಾಧಿಪತಿಯು ಆ ಯೌವನಸ್ಥನಿಗೆ; “ಈ ಸಂಗತಿಗಳನ್ನು ನನಗೆ ಸೂಚಿಸಿದ್ದನ್ನು ನೀನು ಯಾರಿಗೂ ಹೇಳಬೇಡ” ಎಂದು ಖಂಡಿತವಾಗಿ ಅಪ್ಪಣೆ ಕೊಟ್ಟು ಅವನನ್ನು ಕಳುಹಿಸಿಬಿಟ್ಟನು.
23ಆ ಮೇಲೆ ಅವನು ಶತಾಧಿಪತಿಗಳಲ್ಲಿ ಇಬ್ಬರನ್ನು ಕರೆಯಿಸಿ; “ರಾತ್ರಿ ಒಂಭತ್ತು ಘಂಟೆಗೆ ಕೈಸರೈಯದ ತನಕ ಹೋಗುವಂತೆ ಇನ್ನೂರು ಮಂದಿ ಸಿಪಾಯಿಗಳನ್ನೂ, ಎಪ್ಪತ್ತುಮಂದಿ ಕುದುರೆ ಸವಾರರನ್ನೂ, ಇನ್ನೂರು ಮಂದಿ ಈಟಿ ಹಿಡಿದ ಸೈನಿಕರನ್ನು ಸಿದ್ಧಮಾಡಿರಿ.”
24ಮತ್ತು ಕುದುರೆಗಳನ್ನು ಸಿದ್ಧಮಾಡಿ, ಪೌಲನನ್ನು ಹತ್ತಿಸಿ, ದೇಶಾಧಿಪತಿಯಾದ ಫೇಲಿಕ್ಸನ ಬಳಿಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಬೇಕೆಂದು ಅಪ್ಪಣೆ ಕೊಟ್ಟನು.
25ಇದಲ್ಲದೆ ಈ ಕೆಳಗಣ ಅಭಿಪ್ರಾಯದ ಒಂದು ಪತ್ರವನ್ನು ಬರೆದನು, ಅದೇನೆಂದರೆ;
26“ಮಹಾರಾಜರಾಜಶ್ರೀ ದೇಶಾಧಿಪತಿಯಾದ ಫೇಲಿಕ್ಸನಿಗೆ ಕ್ಲೌದ್ಯ ಲೂಸ್ಯನು ಮಾಡುವ ವಂದನೆ.
27ಯೆಹೂದ್ಯರು ಈ ಮನುಷ್ಯನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ, ನಾನು ಸಿಪಾಯಿಗಳೊಂದಿಗೆ ಹೋಗಿ ಅವನನ್ನು ರೋಮಾಪುರದ ಹಕ್ಕುದಾರನೆಂದು ತಿಳಿದು ಅವನನ್ನು ತಪ್ಪಿಸಿದೆನು.
28ಇದಲ್ಲದೆ ಅವನ ಮೇಲೆ ತಪ್ಪು ಹೊರಿಸಿದ ಕಾರಣವನ್ನು ತಿಳಿಯಲಪೇಕ್ಷಿಸಿ, ಅವನನ್ನು ಅವರ ಹಿರೀಸಭೆಗೆ ಕರೆದುಕೊಂಡು ಹೋದೆನು.
29ಅಲ್ಲಿ ಅವರು ತಮ್ಮ ಧರ್ಮಶಾಸ್ತ್ರ ವಿಷಯಗಳನ್ನು ಹಿಡಿದು ಅವನ ವಿರುದ್ಧ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲಿ, ಬೇಡಿಗಾಗಲಿ ಆಧಾರವಾದ ಯಾವ ಅಪರಾಧವನ್ನೂ ಹೊರಿಸಲಿಲ್ಲವೆಂದು ನನಗೆ ಕಂಡುಬಂತು.
30ಈ ಮನುಷ್ಯನಿಗೆ ವಿರುದ್ಧವಾಗಿ ಒಳಸಂಚು ನಡೆಯುತ್ತಿದೆ ಎಂದು ನನಗೆ ತಿಳಿದುಬಂದ್ದುದರಿಂದ ಕೂಡಲೆ, ನಾನು ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ, ಅವನ ವಿರುದ್ಧ ತಪ್ಪುಹೊರಿಸುವವರಿಗೆ ನಿನ್ನ ಮುಂದೆಯೇ ಅವನಿಗೆ ವಿರುದ್ಧವಾಗಿ ವಾದ ಮಂಡಿಸುವ ಹಾಗೆ ಅಪ್ಪಣೆ ಕೊಟ್ಟೆನು” ಎಂಬುದೇ.
31ಸಿಪಾಯಿಗಳು ತಮಗೆ ಅಪ್ಪಣೆಯಾದಂತೆ, ರಾತ್ರಿಕಾಲದಲ್ಲಿ ಪೌಲನನ್ನು ಅಂತಿಪತ್ರಿ ಊರಿಗೆ ಕರೆದುಕೊಂಡು ಹೋದರು.
32ಮರುದಿನ ಅವರು ಸವಾರರನ್ನು ಅವನ ಜೊತೆಯಲ್ಲಿ ಹೋಗುವಂತೆ ಮಾಡಿ, ತಾವು ಕೋಟೆಗೆ ಹಿಂತಿರುಗಿ ಬಂದರು.

Read ಅ. ಕೃ. 23ಅ. ಕೃ. 23
Compare ಅ. ಕೃ. 23:15-32ಅ. ಕೃ. 23:15-32