Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 23

ಅ. ಕೃ. 23:9-12

Help us?
Click on verse(s) to share them!
9ಆಗ ದೊಡ್ಡ ಕೂಗಾಟವಾಯಿತು. ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳಲ್ಲಿ ಕೆಲವರು ಎದ್ದು; “ಈ ಮನುಷ್ಯನಲ್ಲಿ ನಮಗೆ ಕೆಟ್ಟದ್ದೇನೂ ಕಂಡುಬರುವುದಿಲ್ಲ; ಆತ್ಮವಾಗಲಿ, ದೇವದೂತನಾಗಲಿ, ಅವನ ಸಂಗಡ ಮಾತನಾಡಿದ್ದರೂ, ಮಾತನಾಡಿರಬಹುದು” ಎಂದು ವಾದಿಸಿದರು.
10ಜಗಳವು ಅಧಿಕವಾದಾಗ ಅವರು ಪೌಲನನ್ನು ಎಳೆದಾಡಿ ಚೂರುಚೂರು ಮಾಡಾರೆಂದು ಸಹಸ್ರಾಧಿಪತಿಯು ಭಯಪಟ್ಟು ಸಿಪಾಯಿಗಳಿಗೆ; ನೀವು ಹೋಗಿ ಅವರ ಮಧ್ಯದಿಂದ ಅವನನ್ನು ಬಲವಂತವಾಗಿ ಹಿಡಿದು ಕೋಟೆಯೊಳಗೆ ತರಬೇಕೆಂದು ಅಪ್ಪಣೆ ಮಾಡಿದನು.
11ಅಂದು ರಾತ್ರಿ ಕರ್ತನು ಪೌಲನ ಬಳಿಯಲ್ಲಿ ನಿಂತುಕೊಂಡು; “ಧೈರ್ಯದಿಂದಿರು; ನೀನು ಯೆರೂಸಲೇಮಿನಲ್ಲಿ ನನ್ನ ಸಂಗತಿಯನ್ನೆಲ್ಲಾ ಸಾಕ್ಷಿಯಾಗಿ ಹೇಳಿದಂತೆಯೇ ರೋಮಾಪುರದಲ್ಲಿಯೂ ಸಾಕ್ಷಿಹೇಳಬೇಕಾಗುವುದು” ಅಂದನು.
12ಬೆಳಗಾದ ಮೇಲೆ ಯೆಹೂದ್ಯರು ಒಳಸಂಚು ಮಾಡಿ; ನಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥಮಾಡಿಕೊಂಡರು.

Read ಅ. ಕೃ. 23ಅ. ಕೃ. 23
Compare ಅ. ಕೃ. 23:9-12ಅ. ಕೃ. 23:9-12