Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 24

ಅ. ಕೃ. 24:8-20

Help us?
Click on verse(s) to share them!
8ಇವನನ್ನು ನೀನೇ ವಿಚಾರಿಸಿದರೆ, ನಾವು ಇವನ ಮೇಲೆ ಹೊರಿಸುವ ಈ ತಪ್ಪುಗಳೆಲ್ಲಾ ನಿಜವೋ, ಸುಳ್ಳೋ ಎಂದು ಇವನಿಂದಲೇ ತಿಳಿದುಕೊಳ್ಳಬಹುದು” ಎಂದು ಹೇಳಿದನು.
9ಆಗ ಯೆಹೂದ್ಯರು ಈ ಸಂಗತಿಗಳು ನಿಜವಾಗಿವೆ ಎಂದು ಹೇಳಿ ತಾವೂ ಆ ದೋಷಾರೋಪಣೆ ಮಾಡುವವರೊಂದಿಗೆ ಸೇರಿಕೊಂಡರು.
10ದೇಶಾಧಿಪತಿಯು ಪೌಲನಿಗೆ; ನೀನು ಮಾತನಾಡಬಹುದೆಂದು ಸನ್ನೆಮಾಡಲು, ಅವನು ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ; “ನೀನು ಅನೇಕ ವರ್ಷಗಳಿಂದ ಈ ದೇಶದ ಜನರಿಗೆ ನ್ಯಾಯಾಧಿಪತಿಯಾಗಿರುತ್ತೀ, ಎಂದು ತಿಳಿದು ನಾನು ಧೈರ್ಯವಾಗಿ ಪ್ರತಿವಾದ ಮಾಡುತ್ತಿದ್ದೇನೆ.
11ನಾನು ದೇವಾರಾಧನೆಮಾಡುವುದಕ್ಕೆ, ಯೆರೂಸಲೇಮಿಗೆ ಹೋಗಿ, ಹನ್ನೆರಡು ದಿನಗಳು ಮಾತ್ರವಾಗಿದೆಯೆಂದು ನೀನು ತಿಳಿದುಕೊಳ್ಳಬಹುದು.
12ಅಲ್ಲಿ ದೇವಾಲಯದಲ್ಲಾಗಲಿ, ಸಭಾಮಂದಿರಗಳಲ್ಲಾಗಲಿ, ಪಟ್ಟಣದಲ್ಲಾಗಲಿ ನಾನು ಯಾರ ಸಂಗಡಲಾದರೂ ವಾದಿಸುವುದನ್ನು, ಇಲ್ಲವೆ ಜನರ ಗುಂಪು ಕೂಡಿಸುವುದನ್ನು ಇವರು ನೋಡಲಿಲ್ಲ.
13ಇದಲ್ಲದೆ ಇವರು ಈಗ ನನ್ನ ಮೇಲೆಹೊರಿಸುವ ತಪ್ಪುಗಳನ್ನು ನಿಜವೆಂದು ನಿನಗೆ ತೋರಿಸಲಾರರು.
14ಒಂದನ್ನು ಮಾತ್ರ ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ, ಅದೇನೆಂದರೆ; ಇವರು ನನ್ನನ್ನು ಧರ್ಮವಿರೋಧಿ ಎಂದೂ ಹೇಳುವ, ಮಾರ್ಗಕ್ಕನುಸಾರವಾಗಿ ನಾನು ನಮ್ಮ ಪೂರ್ವಿಕರ ದೇವರನ್ನು ಆರಾಧಿಸುವವನಾಗಿದ್ದೇನೆ. ಧರ್ಮಶಾಸ್ತ್ರಕ್ಕನುಗುಣವಾಗಿರುವ ಮತ್ತು ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವ ಎಲ್ಲಾ ವಿಷಯಗಳನ್ನು ನಂಬುತ್ತೇನೆ.
15ಇದಲ್ಲದೆ ನೀತಿವಂತರಿಗೂ ಮತ್ತು ಅನೀತಿವಂತರಿಗೂ ಪುನರುತ್ಥಾನವಾಗುವುದೆಂದು ಇವರು ದೇವರಲ್ಲಿ ನಿರೀಕ್ಷೆಯಿಟ್ಟಿರುವ ಪ್ರಕಾರವೇ ನಾನೂ ನಿರೀಕ್ಷೆಯುಳ್ಳವನಾಗಿದ್ದೇನೆ.
16ಇದರ ದೆಸೆಯಿಂದ ದೇವರ ಮುಂದೆಯೂ, ಮನುಷ್ಯರ ಮುಂದೆಯೂ ನಿರ್ದೋಷವಾದ ಮನಸ್ಸಾಕ್ಷಿಯುಳ್ಳವನಾಗಿರಬೇಕೆಂದು ನಾನು ಯಾವಾಗಲೂ ಪ್ರಯತ್ನಿಸುತ್ತೇನೆ.
17“ಕೆಲವು ವರ್ಷಗಳಾದ ಮೇಲೆ ನಾನು, ನನ್ನ ಸ್ವದೇಶದವರಿಗೆ ಧರ್ಮದ್ರವ್ಯಗಳನ್ನು, ತರುವುದಕ್ಕೂ, ಕಾಣಿಕೆಗಳನ್ನು ಒಪ್ಪಿಸುವುದಕ್ಕೂ ಬಂದೆನು.
18ನಾನು ಶುದ್ಧಮಾಡಿಕೊಂಡವನಾಗಿ, ಅವುಗಳನ್ನು ಒಪ್ಪಿಸುತ್ತಿರುವಲ್ಲಿ, ಇವರು ನನ್ನನ್ನು ದೇವಾಲಯದಲ್ಲಿ ಕಂಡರು; ಆಗ ನನ್ನೊಂದಿಗೆ ಜನರ ಗುಂಪೇನೂ ಇರಲಿಲ್ಲ; ಗದ್ದಲವೂ ಇರಲಿಲ್ಲ. ನನ್ನನ್ನು ಕಂಡವರು ಆಸ್ಯಸೀಮೆಯಿಂದ ಬಂದ ಕೆಲವು ಯೆಹೂದ್ಯರೇ.
19ನನ್ನ ವಿರುದ್ಧ ಅವರಿಗೆ ಏನಾದರೂ ಇದ್ದರೆ, ತಾವೇ ನಿನ್ನ ಮುಂದೆ ತಪ್ಪುಹೊರಿಸುವುದಕ್ಕೆ ಇಲ್ಲಿಗೆ ಬರಬೇಕಾಗಿತ್ತು.
20ಇಲ್ಲವಾದ್ದರಿಂದ ನಾನು ಹಿರೀಸಭೆಯ ಎದುರಿನಲ್ಲಿ ನಿಂತಿದ್ದಾಗ, ನನ್ನಲ್ಲಿ ತಪ್ಪುಗಳೇನಾದರೂ ಕಂಡಿದ್ದರೆ ಇವರೇ ಹೇಳಲಿ.

Read ಅ. ಕೃ. 24ಅ. ಕೃ. 24
Compare ಅ. ಕೃ. 24:8-20ಅ. ಕೃ. 24:8-20