Text copied!
Bibles in Kannada

ಅ. ಕೃ. 25:15-21 in Kannada

Help us?

ಅ. ಕೃ. 25:15-21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಾನು ಯೆರೂಸಲೇಮಿನಲ್ಲಿದ್ದಾಗ, ಯೆಹೂದ್ಯರ ಮುಖ್ಯಯಾಜಕರೂ, ಹಿರಿಯರೂ ಅವನ ವಿಷಯವಾಗಿ ನನಗೆ ದೂರುಹೇಳಿ ಅವನಿಗೆ ವಿರುದ್ಧವಾಗಿ ತೀರ್ಪು ಆಗಬೇಕೆಂದು ಬೇಡಿಕೊಂಡರು.
16 “ನಾನು ಅವರಿಗೆ; ಪ್ರತಿವಾದಿಯು ವಾದಿಗಳಿಗೆ, ಮುಖಾಮುಖಿಯಾಗಿ ನಿಂತು ತನ್ನ ಮೇಲೆ ಆರೋಪಿಸಿದ ದೋಷದ ವಿಷಯದಲ್ಲಿ ಪ್ರತಿವಾದಮಾಡುವುದಕ್ಕೆ ಎಡೆಕೊಡದೆ, ಅವನನ್ನು ಒಪ್ಪಿಸಿಬಿಡುವುದು ರೋಮಾಯರ ಪದ್ಧತಿಯಲ್ಲವೆಂದು” ಹೇಳಿದೆನು.
17 ಅವರು ಇಲ್ಲಿಗೆ ಕೂಡಿಬಂದಾಗ ನಾನು ಸ್ವಲ್ಪವೂ ತಡಮಾಡದೆ ಮರುದಿನವೇ ನ್ಯಾಯಸ್ಥಾನದ ಮೇಲೆ ಕುಳಿತುಕೊಂಡು ಆ ಮನುಷ್ಯನನ್ನು ಕರತರಬೇಕೆಂದು ಅಪ್ಪಣೆಕೊಟ್ಟೆನು.
18 ತಪ್ಪು ಹೊರಿಸುವವರು ನಿಂತುಕೊಂಡು ನಾನು ಭಾವಿಸಿದ್ದ ಅಪರಾಧಗಳಲ್ಲಿ ಒಂದನ್ನಾದರೂ ಅವನ ಮೇಲೆ ಹೊರಿಸದೆ,
19 ಅವರ ಮತದ ವಿಷಯದಲ್ಲಿಯೂ, ಜೀವಿಸಿದ್ದಾನೆ ಎಂದು, ಪೌಲನು ಹೇಳುವ ಸತ್ತುಹೋದಂಥ ಯೇಸುವೆಂಬ ಒಬ್ಬನ ವಿಷಯದಲ್ಲಿಯೂ, ಅವನ ಮೇಲೆ ಕೆಲವು ವಿವಾದದ ಮಾತುಗಳನ್ನು ತಂದರು.
20 ಇಂಥ ಕಾರ್ಯಗಳನ್ನು ಹೇಗೆ ವಿಚಾರಣೆಮಾಡಬೇಕೆಂಬುದು ನನಗೆ ತೋಚದೆ; ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಇವುಗಳ ವಿಷಯವಾಗಿ ವಿಚಾರಣೆಹೊಂದುವುದಕ್ಕೆ ನಿನಗೆ ಮನಸ್ಸುಂಟೋ? ಎಂದು ನಾನು ಕೇಳಿದೆ.
21 ಅದಕ್ಕೆ ಪೌಲನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುವ ತನಕ, ತನ್ನನ್ನು ಕಾಯಬೇಕೆಂದು ಕೇಳಿಕೊಂಡಾಗ ನಾನು ಕೈಸರನ ಬಳಿಗೆ ಕಳುಹಿಸುವ ತನಕ, ಅವನನ್ನು ಕಾಯುವುದಕ್ಕೆ ಅಪ್ಪಣೆಕೊಟ್ಟೆನು ಎಂದು ಹೇಳಿದನು.
ಅ. ಕೃ. 25 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019