Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 26

ಅ. ಕೃ. 26:3-16

Help us?
Click on verse(s) to share them!
3ಏಕೆಂದರೆ, ಯೆಹೂದ್ಯರಲ್ಲಿರುವ ಎಲ್ಲಾ ಆಚಾರಗಳನ್ನೂ, ವಿವಾದಗಳನ್ನೂ ನೀನು ಚೆನ್ನಾಗಿ ಬಲ್ಲವನಾಗಿರುತ್ತೀ. ನನ್ನ ಮಾತುಗಳನ್ನು ಸಹನೆಯಿಂದ ಕೇಳಬೇಕೆಂದು ಬೇಡಿಕೊಳ್ಳುತ್ತೇನೆ.
4“ನಾನು ಚಿಕ್ಕಂದಿನಿಂದಲೂ, ಯೆರೂಸಲೇಮಿನಲ್ಲಿ ನನ್ನ ದೇಶದ ಜನರೊಳಗಿದ್ದು, ಬದುಕಿದ ರೀತಿಯು ಎಲ್ಲಾ ಯೆಹೂದ್ಯರಿಗೆ ತಿಳಿದ ವಿಷಯವಾಗಿದೆ.
5ನಾನು, ನಮ್ಮ ಧರ್ಮದಲ್ಲಿ ಬಹು ಕಟ್ಟುನಿಟ್ಟಾಗಿ ಆಚರಿಸುವ ಫರಿಸಾಯರ ಪಂಥವನ್ನನುಸರಿಸಿ ಫರಿಸಾಯನಾಗಿ ನಡೆದುಕೊಂಡೆನೆಂಬುದನ್ನು, ಪ್ರಾರಂಭದಿಂದಲೂ ಅವರು ಬಲ್ಲರು. ಸಾಕ್ಷಿ ಹೇಳುವುದಕ್ಕೆ ಅವರಿಗೆ ಮನಸ್ಸಿದ್ದರೆ ಹೇಳಬಹುದು.
6ಈಗಲೂ ದೇವರು ನಮ್ಮ ಪೂರ್ವಿಕರಿಗೆ, ಮಾಡಿದ ವಾಗ್ದಾನವು ನೆರವೇರುವುದೆಂಬ ನಿರೀಕ್ಷೆಯ ನಿಮಿತ್ತವೇ, ನಾನು ಇಂದು ನ್ಯಾಯವಿಚಾರಣೆಗೆ ಇಲ್ಲಿ ನಿಂತಿದ್ದೇನೆ.
7ನಮ್ಮ ಹನ್ನೆರಡು ಕುಲದವರು ಹಗಲಿರುಳು ಆಸಕ್ತಿಯಿಂದ ದೇವರನ್ನು ಆರಾಧಿಸುತ್ತಾ, ಆ ವಾಗ್ದಾನದ ಫಲವನ್ನು ಹೊಂದುವುದಕ್ಕಾಗಿ ನಿರೀಕ್ಷಿಸುತ್ತಾ ಇದ್ದಾರೆ. ಅರಸನೇ, ಅದೇ ನಿರೀಕ್ಷೆಯ ವಿಷಯದಲ್ಲಿಯೇ ಯೆಹೂದ್ಯರು, ನನ್ನ ವಿರುದ್ಧ ದೋಷಾರೋಪಣೆಮಾಡುತ್ತಿದ್ದಾರೆ.
8ದೇವರು ಸತ್ತವರನ್ನು ಎಬ್ಬಿಸಿದ್ದು ನಂಬಲು ಅಸಾಧ್ಯವೆಂದು ನೀವು ಏಕೆ ತೀರ್ಮಾನಿಸುತ್ತೀರಿ?
9ಒಂದು ಕಾಲದಲ್ಲಿ ನಜರೇತಿನ ಯೇಸುವಿನ ಹೆಸರಿಗೆ ವಿರುದ್ಧವಾಗಿ ಅನೇಕ ಕಾರ್ಯಗಳನ್ನು ನಡೆಸಬೇಕೆಂದು ನಾನೂ ಯೋಚಿಸಿಕೊಂಡಿದ್ದೆನು.
10ಯೆರೂಸಲೇಮಿನಲ್ಲಿ ಹಾಗೆಯೇ ಮಾಡಿದ್ದೆನು. ಮುಖ್ಯಯಾಜಕರಿಂದ, ಅಧಿಕಾರವನ್ನು ಪಡೆದು ದೇವಜನರಲ್ಲಿ ಅನೇಕರನ್ನು ಸೆರೆಮನೆಗಳಲ್ಲಿ ಇರಿಸಿ, ಅವರಿಗೆ ಮರಣದ ತೀರ್ಪಾದಾಗ, ನಾನು ಅದಕ್ಕೆ ಸಮ್ಮತಿಯನ್ನು ಸೂಚಿಸಿದೆನು.
11ಎಲ್ಲಾ ಸಭಾಮಂದಿರಗಳಲ್ಲಿಯೂ, ನಾನು ಅನೇಕ ಸಾರಿ ಅವರನ್ನು ದಂಡಿಸಿ ಅವರಿಂದ ದೇವದೂಷಣೆಯ ಮಾತುಗಳನ್ನಾಡಿಸುವುದಕ್ಕೆ ಪ್ರಯತ್ನಿಸಿದೆನು. ಇದಲ್ಲದೆ ಅವರ ಮೇಲೆ ಬಹು ಕೋಪಾವೇಶವುಳ್ಳವನಾಗಿ ಬೇರೆ ಪಟ್ಟಣಗಳವರೆಗೂ ಹೋಗಿ, ಅವರನ್ನು ಹಿಂಸೆಪಡಿಸಿದೆನು.
12ಈ ಉದ್ದೇಶದಿಂದ ನಾನು ಮುಖ್ಯಯಾಜಕರಿಂದ ಅಧಿಕಾರವನ್ನೂ, ಆದೇಶವನ್ನೂ ಹೊಂದಿ ದಮಸ್ಕಕ್ಕೆ ಹೋಗುವ ದಾರಿಯಲ್ಲಿ ರಾಜನೇ,
13ಮಧ್ಯಾಹ್ನದ ಹೊತ್ತಿನಲ್ಲಿ ಪರಲೋಕದಿಂದ ಒಂದು ಬೆಳಕು ನನ್ನ ಸುತ್ತಲೂ ಮತ್ತು ನನ್ನ ಜೊತೆಯಲ್ಲಿ ಪ್ರಯಾಣಮಾಡುತ್ತಿದ್ದವರ ಸುತ್ತಲೂ ಸೂರ್ಯನ ಹೊಳಪಿಗಿಂತ ಹೆಚ್ಚಾಗಿ ಹೊಳೆಯುವುದನ್ನು ನಾನು ಕಂಡೆನು.
14ನಾವೆಲ್ಲರು ನೆಲಕ್ಕೆ ಬೀಳಲು; ‘ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ? ಮುಳ್ಳುಗೋಲನ್ನು ಒದೆಯುವುದರಿಂದ ನಿನಗೇ ಹಾನಿಯಲ್ಲವೇ? ಎಂದು ಇಬ್ರಿಯ ಭಾಷೆಯಿಂದ ಹೇಳುವ ವಾಣಿಯನ್ನು’ ಕೇಳಿದೆನು.
15ಆಗ ನಾನು; ‘ಕರ್ತನೇ, ನೀನಾರು?’ ಅನ್ನಲು ಕರ್ತನು; ‘ನೀನು ಹಿಂಸೆಪಡಿಸುವ ಯೇಸುವೇ ನಾನು.
16ನೀನು ಎದ್ದು, ನಿಂತುಕೋ. ನಿನ್ನನ್ನು ನನ್ನ ಸೇವಕನಾಗಿಯೂ, ಸಾಕ್ಷಿಯಾಗಿಯೂ ನೇಮಿಸುವುದಕ್ಕೋಸ್ಕರ ನಿನಗೆ ಕಾಣಿಸಿಕೊಂಡಿದ್ದೇನೆ. ಈಗಲೂ, ಮುಂದೆಯೂ ನಿನಗೆ ತೋರಿಸಲಿರುವ ದರ್ಶನಗಳಲ್ಲಿಯೂ, ನಿನಗೆ ಕಾಣಿಸಿಕೊಂಡದ್ದನ್ನು ಕುರಿತು ನೀನು ನನ್ನ ಸಾಕ್ಷಿಯಾಗಿರಬೇಕು.

Read ಅ. ಕೃ. 26ಅ. ಕೃ. 26
Compare ಅ. ಕೃ. 26:3-16ಅ. ಕೃ. 26:3-16