Text copied!
Bibles in Kannada

ಅ. ಕೃ. 27:5-8 in Kannada

Help us?

ಅ. ಕೃ. 27:5-8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕಿಲಿಕ್ಯಕ್ಕೂ, ಪಂಫುಲ್ಯಕ್ಕೂ ಎದುರಾಗಿರುವ ಸಮುದ್ರವನ್ನು ದಾಟಿ ಲುಕೀಯ ಸೀಮೆಯಲ್ಲಿರುವ ಮುರಕ್ಕೆ ಬಂದೆವು.
6 ಅಲ್ಲಿ ಅಲೆಕ್ಸಾಂದ್ರಿಯದಿಂದ ಬಂದು ಇತಾಲ್ಯದೇಶಕ್ಕೆ ಹೋಗುತ್ತಿದ್ದ ಒಂದು ಹಡಗನ್ನು ಶತಾಧಿಪತಿಯು ಕಂಡು ನಮ್ಮನ್ನು ಅದರೊಳಗೆ ಹತ್ತಿಸಿದನು.
7 ಅನೇಕ ದಿನಗಳ ಕಾಲ ನಿಧಾನವಾಗಿ ಸಾಗುತ್ತಾ ಎಷ್ಟೋ ಪ್ರಯಾಸದಿಂದ ಕ್ನೀದಕ್ಕೆ ಸಮೀಪವಾಗಿ ಬಂದಾಗ ಗಾಳಿಯು ನಮ್ಮನ್ನು ಅಲ್ಲಿಗೆ ಮುಟ್ಟಗೊಡಿಸದೆ ಇದ್ದುದರಿಂದ ಕ್ರೇತ ದ್ವೀಪದ ಮರೆಯಲ್ಲಿ ಸಾಗಿ ಸಲ್ಮೋನೆಗೆ ಸಮೀಪವಾಗಿ ಬಂದು,
8 ಪ್ರಯಾಸದಿಂದ ಆ ದ್ವೀಪದ ಕರಾವಳಿಯ ಮೂಲಕವಾಗಿ ಚಂದರೇವುಗಳೆಂಬ ಸ್ಥಳಕ್ಕೆ ಸೇರಿದೆವು. ಅದರ ಹತ್ತಿರದಲ್ಲಿ ಲಸಾಯವೆಂಬ ಪಟ್ಟಣವು ಇತ್ತು.
ಅ. ಕೃ. 27 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019