Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 28

ಅ. ಕೃ. 28:20-26

Help us?
Click on verse(s) to share them!
20ಈ ಕಾರಣದಿಂದ ನಾನು ನಿಮ್ಮನ್ನು ಕಂಡು ಮಾತನಾಡಬೇಕೆಂದು ಕರೆಯಿಸಿದೆನು. ಇಸ್ರಾಯೇಲ್ ಜನರ ನಿರೀಕ್ಷೆಯ ನಿಮಿತ್ತವಾಗಿ ಈ ಬೇಡಿಯಿಂದ ಬಂಧಿತನಾಗಿದ್ದೇನೆ” ಎಂದು ಹೇಳಿದನು.
21ಅದಕ್ಕೆ ಅವರು ಅವನಿಗೆ; “ನಿನ್ನ ವಿಷಯವಾಗಿ ನಮಗೆ ಯೂದಾಯದಿಂದ ವರದಿ ಬರಲಿಲ್ಲ, ಸಹೋದರರಲ್ಲಿ ಒಬ್ಬರೂ ಬಂದು ನಿನ್ನ ವಿಷಯವಾಗಿ ಕೆಟ್ಟದ್ದನ್ನು ತಿಳಿಸಲೂ ಇಲ್ಲ, ಮಾತನಾಡಲೂ ಇಲ್ಲ.
22ಆದರೆ, ನಿನ್ನ ಅಭಿಪ್ರಾಯವನ್ನು ನಿನ್ನಿಂದಲೇ ಕೇಳುವುದು ನಮಗೆ ಯುಕ್ತವೆಂದು ತೋರುತ್ತದೆ. ಆ ಪಂಥದ ವಿಷಯದಲ್ಲಿ ಜನರು ಎಲ್ಲೆಲ್ಲಿಯೂ ವಿರುದ್ಧವಾಗಿ ಮಾತನಾಡುತ್ತಾರೆಂಬದೊಂದೇ ನಮಗೆ ಗೊತ್ತದೆ” ಅಂದರು.
23ಅವರು ಅವನಿಗೆ ಒಂದು ದಿನವನ್ನು ಗೊತ್ತುಮಾಡಲು, ಬಹುಮಂದಿ ಅವನ ಬಿಡಾರದಲ್ಲಿ ಅವನ ಬಳಿಗೆ ಬಂದರು. ಅವನು ಬೆಳಗ್ಗಿನಿಂದ ಸಾಯಂಕಾಲದ ವರೆಗೂ ದೇವರ ರಾಜ್ಯವನ್ನು ಕುರಿತು ಪ್ರಾಮಾಣಿಕವಾಗಿ ಸಾಕ್ಷಿಹೇಳುತ್ತಾ, ಮೋಶೆಯ ಧರ್ಮಶಾಸ್ತ್ರವನ್ನೂ, ಪ್ರವಾದಿಗಳ ಗ್ರಂಥಗಳನ್ನೂ, ಆಧಾರಮಾಡಿಕೊಂಡು ಯೇಸುವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಇದ್ದನು.
24ಅವನು ಹೇಳಿದ ಮಾತುಗಳಿಗೆ ಕೆಲವರು ಒಪ್ಪಿಕೊಂಡರು; ಕೆಲವರು ನಂಬದೆ ಹೋದರು.
25ಅವರು ಒಮ್ಮತವಿಲ್ಲದೆ ಇರುವಾಗ ಪೌಲನು ಅವರಿಗೆ; “ಪವಿತ್ರಾತ್ಮನು ಪ್ರವಾದಿಯಾದ ಯೆಶಾಯನ ಬಾಯಿಂದ
26ನಿಮ್ಮ ಪೂರ್ವಿಕರಿಗೆ ವಿವರವಾಗಿ ಹೇಳಿದ್ದೇನೆಂದರೆ; “‘ನೀನು ಈ ಜನರ ಬಳಿಗೆ ಹೋಗಿ ಅವರಿಗೆ; ನೀವು ಕಿವಿಯಿದ್ದು ಕೇಳಿಕೊಂಡರೂ ತಿಳಿದುಕೊಳ್ಳುವುದೇ ಇಲ್ಲ; ಕಣ್ಣಿದ್ದು ನೋಡಿದರೂ ಕಾಣುವುದೇ ಇಲ್ಲ, ಎಂಬುದಾಗಿ ಹೇಳು.

Read ಅ. ಕೃ. 28ಅ. ಕೃ. 28
Compare ಅ. ಕೃ. 28:20-26ಅ. ಕೃ. 28:20-26