Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 28

ಅ. ಕೃ. 28:22-31

Help us?
Click on verse(s) to share them!
22ಆದರೆ, ನಿನ್ನ ಅಭಿಪ್ರಾಯವನ್ನು ನಿನ್ನಿಂದಲೇ ಕೇಳುವುದು ನಮಗೆ ಯುಕ್ತವೆಂದು ತೋರುತ್ತದೆ. ಆ ಪಂಥದ ವಿಷಯದಲ್ಲಿ ಜನರು ಎಲ್ಲೆಲ್ಲಿಯೂ ವಿರುದ್ಧವಾಗಿ ಮಾತನಾಡುತ್ತಾರೆಂಬದೊಂದೇ ನಮಗೆ ಗೊತ್ತದೆ” ಅಂದರು.
23ಅವರು ಅವನಿಗೆ ಒಂದು ದಿನವನ್ನು ಗೊತ್ತುಮಾಡಲು, ಬಹುಮಂದಿ ಅವನ ಬಿಡಾರದಲ್ಲಿ ಅವನ ಬಳಿಗೆ ಬಂದರು. ಅವನು ಬೆಳಗ್ಗಿನಿಂದ ಸಾಯಂಕಾಲದ ವರೆಗೂ ದೇವರ ರಾಜ್ಯವನ್ನು ಕುರಿತು ಪ್ರಾಮಾಣಿಕವಾಗಿ ಸಾಕ್ಷಿಹೇಳುತ್ತಾ, ಮೋಶೆಯ ಧರ್ಮಶಾಸ್ತ್ರವನ್ನೂ, ಪ್ರವಾದಿಗಳ ಗ್ರಂಥಗಳನ್ನೂ, ಆಧಾರಮಾಡಿಕೊಂಡು ಯೇಸುವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಇದ್ದನು.
24ಅವನು ಹೇಳಿದ ಮಾತುಗಳಿಗೆ ಕೆಲವರು ಒಪ್ಪಿಕೊಂಡರು; ಕೆಲವರು ನಂಬದೆ ಹೋದರು.
25ಅವರು ಒಮ್ಮತವಿಲ್ಲದೆ ಇರುವಾಗ ಪೌಲನು ಅವರಿಗೆ; “ಪವಿತ್ರಾತ್ಮನು ಪ್ರವಾದಿಯಾದ ಯೆಶಾಯನ ಬಾಯಿಂದ
26ನಿಮ್ಮ ಪೂರ್ವಿಕರಿಗೆ ವಿವರವಾಗಿ ಹೇಳಿದ್ದೇನೆಂದರೆ; “‘ನೀನು ಈ ಜನರ ಬಳಿಗೆ ಹೋಗಿ ಅವರಿಗೆ; ನೀವು ಕಿವಿಯಿದ್ದು ಕೇಳಿಕೊಂಡರೂ ತಿಳಿದುಕೊಳ್ಳುವುದೇ ಇಲ್ಲ; ಕಣ್ಣಿದ್ದು ನೋಡಿದರೂ ಕಾಣುವುದೇ ಇಲ್ಲ, ಎಂಬುದಾಗಿ ಹೇಳು.
27ಏಕೆಂದರೆ, ಈ ಜನರ ಹೃದಯವು ಕಲ್ಲಾಗಿದೆ; ಇವರ ಕಿವಿ ಕಿವುಡಾಗಿದೆ; ಇವರು ಕಣ್ಣು ಮುಚ್ಚಿಕೊಂಡಿದ್ದಾರೆ; ತಾವು ಕಣ್ಣಿನಿಂದ ಕಂಡು, ಕಿವಿಯಿಂದ ಕೇಳಿ, ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದಬಾರದೆಂದು ಹೀಗೆ ಮಾಡಿಕೊಂಡಿದ್ದಾರೆ’ ಎಂಬುದೇ.
28“ಆದಕಾರಣ ದೇವರಿಂದಾದ ಈ ರಕ್ಷಣೆಯು ಅನ್ಯಜನರಿಗೆ ಹೇಳಿಕಳುಹಿಸಲ್ಪಟ್ಟಿದೆ ಎಂದು ನಿಮಗೆ ಚೆನ್ನಾಗಿ ತಿಳಿದಿರಲಿ; ಅವರಾದರೂ ಕೇಳುವರು” ಎಂದು ಹೇಳಿದನು.
29ಅವನು ಈ ಮಾತನ್ನು ಹೇಳಿದ ಮೇಲೆ ಅವರು ಹೊರಟುಹೋದರು.
30ತರುವಾಯ ಅವನು ತಾನೇ ಬಾಡಿಗೆಗೆ ತೆಗೆದುಕೊಂಡಿದ್ದ ಮನೆಯಲ್ಲಿ ಎರಡು ವರ್ಷಗಳ ಕಾಲ ಇದ್ದು, ತನ್ನ ಬಳಿಗೆ ಬರುವವರೆಲ್ಲರನ್ನು ಆದರದಿಂದ ಬರಮಾಡಿಕೊಳ್ಳುತ್ತಿದ್ದನು.
31ಯಾವ ಅಡ್ಡಿಯೂ ಇಲ್ಲದೆ, ತುಂಬಾ ಧೈರ್ಯದಿಂದ ದೇವರ ರಾಜ್ಯದ ಕುರಿತು ಬೋಧಿಸುತ್ತಾ, ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿ ಉಪದೇಶಮಾಡುತ್ತಾ ಇದ್ದನು.

Read ಅ. ಕೃ. 28ಅ. ಕೃ. 28
Compare ಅ. ಕೃ. 28:22-31ಅ. ಕೃ. 28:22-31