Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 28

ಅ. ಕೃ. 28:4-8

Help us?
Click on verse(s) to share them!
4ಆ ಸರ್ಪವು ಅವನ ಕೈಯಿಂದ ಜೋತಾಡುವುದನ್ನು ದ್ವೀಪದವರು ನೋಡಿ; “ಈ ಮನುಷ್ಯನು ಕೊಲೆಪಾತಕನೇ ಸರಿ; ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯದೇವತೆಯು ಇವನನ್ನು ಬದುಕಗೊಡಿಸುವುದಿಲ್ಲವೆಂದು” ತಮ್ಮತಮ್ಮೊಳಗೆ ಮಾತನಾಡಿಕೊಂಡರು.
5ಆದರೆ ಪೌಲನು ಆ ಸರ್ಪವನ್ನು ಬೆಂಕಿಯೊಳಕ್ಕೆ ಝಾಡಿಸಿಬಿಟ್ಟನು; ಅವನಿಗೆ ಏನೂ ಅಪಾಯ ಉಂಟಾಗಲಿಲ್ಲ.
6ಅವರು; “ಇವನ ಮೈ ಈಗ ಊದಿಕೊಳ್ಳುತ್ತದೆ, ಇಲ್ಲವೆ ಇವನು ಫಕ್ಕನೆ ಸತ್ತುಬೀಳುತ್ತಾನೆ” ಎಂದು ಕಾದಿದ್ದರು. ಎಷ್ಟು ಹೊತ್ತು ಕಾದರು ಅವನಿಗೆ ಯಾವ ಹಾನಿಯೂ ಆಗಲಿಲ್ಲ. ಇದನ್ನು ಕಂಡ ಅವರು ತಮ್ಮ ಅಭಿಪ್ರಾಯವನ್ನು ಬದಲಿಸಿಕೊಂಡು “ಇವನೊಬ್ಬ ದೇವನೇ” ಇರಬೇಕು ಎಂದುಕೊಂಡರು.
7ಆ ದ್ವೀಪದ ಮುಖ್ಯಸ್ಥನಾದ ಪೊಪ್ಲಿಯನ ಹೊಲಗದ್ದೆಗಳು ನಾವಿದ್ದ ಸ್ಥಳದ ಸಮೀಪದಲ್ಲಿ ಇದ್ದವು. ಅವನು ನಮ್ಮನ್ನು ಸ್ವಾಗತಿಸಿ ಮೂರು ದಿನಗಳವರೆಗೆ ಆದರದಿಂದ ಸತ್ಕರಿಸಿದನು.
8ಅವನ ತಂದೆಯು ಜ್ವರದಿಂದಲೂ ರಕ್ತಭೇದಿಯಿಂದಲೂ ಹಾಸಿಗೆ ಹಿಡಿದಿದ್ದನು. ಪೌಲನು ಅವನ ಬಳಿಗೆ ಹೋಗಿ ಪ್ರಾರ್ಥನೆ ಮಾಡಿ ಅವನ ಮೇಲೆ ಕೈಗಳನ್ನಿಟ್ಟು ಅವನನ್ನು ಗುಣಪಡಿಸಿದನು.

Read ಅ. ಕೃ. 28ಅ. ಕೃ. 28
Compare ಅ. ಕೃ. 28:4-8ಅ. ಕೃ. 28:4-8